ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಪ್ರಯುಕ್ತ ವಿಜ್ಞಾನ ವಸ್ತು ಪ್ರದರ್ಶನ
ಕಂಪ್ಲಿ ತಾಲೂಕು ಎಮ್ಮಿಗನೂರು ಗ್ರಾಮದ ಎಸ್ ಡಬ್ಲ್ಯೂ ಎಸ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಪ್ರಯುಕ್ತ ವಿಜ್ಞಾನ ವಸ್ತು ಪ್ರದರ್ಶನವನ್ನು ಏರ್ಪಡಿಸಲಾಗಿತ್ತು ,
ಈ ವೇಳೆ ಮುಖ್ಯ ಶಿಕ್ಷಕ ಮಂಜಪ್ಪ ಹೂಗಾರ ಮಾತನಾಡಿ ವಿಜ್ಞಾನ ವಿಷಯವನ್ನು ಕಬ್ಬಿಣದ ಕಡಲೆ ಎಂದು ಭಾವಿಸದೆ ಪ್ರಯೋಗಗಳ ಮೂಲಕ ಅರ್ಥಮಾಡಿಕೊಳ್ಳಬೇಕು, ವಿದ್ಯಾರ್ಥಿಗಳು ವೈಜ್ಞಾನಿಕ ಮತ್ತು ವೈಚಾರಿಕ ಮನೋಭಾವನೆ ರೂಡಿಸಿಕೊಳ್ಳಬೇಕು, ಜಗತ್ತನ್ನೇ ಬದಲಾಯಿಸುವ ಶಕ್ತಿ ವಿಜ್ಞಾನಕ್ಕಿದೆ ಎಂದು ಹೇಳಿದರು.
ನಂತರ ವಿದ್ಯಾರ್ಥಿಗಳು ಪಾಠ ಆಧಾರಿತ ವಿಜ್ಞಾನದ ಪ್ರಯೋಗಗಳನ್ನು ಪ್ರದರ್ಶಿಸಿ ವಿವರಿಸಿದರು, ಈ ಸಂದರ್ಭದಲ್ಲಿ ಸಹ ಶಿಕ್ಷಕರಾದ ಜ್ಯೋತಿ, ಸಂಗಮ್ಮ, ಲಕ್ಷ್ಮಿ, ಶಂಕ್ರಮ್ಮ,ವೀರೇಶ, ಮಲ್ಲೇಶ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
What's Your Reaction?
Like
1
Dislike
0
Love
0
Funny
0
Angry
0
Sad
0
Wow
0
