ರೈತರಿಗೆ ಬಿತ್ತನೆ ಬೀಜ, ರಾಸಾಗೊಬ್ಬರ ಸಕಾಲಕ್ಕೆ ವಿತರಣೆ ಮಾಡುವಂತೆ ಜಿಲ್ಲಾಧ್ಯಕ್ಷ ಗೋವಿಂದ ರೆಡ್ಡಿ ಒತ್ತಾಯ

ಬಾಗೇಪಲ್ಲಿ: ಮುಂಗಾರು ಹಂಗಾಮು ಆರಂಭಗೊಂಡಿದ್ದು, ತಾಲ್ಲೂಕಿನ ಬಹುತೇಕ ಪ್ರದೇಶದಲ್ಲಿ ಉತ್ತಮ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ರೈತರು ಬಿತ್ತನೆಗೆ ಸಿದ್ಧತೆ ಕೈಗೊಂಡಿದ್ದಾರೆ. ಹೀಗಾಗಿ ಬೀಜ ಮತ್ತು ಗೊಬ್ಬರ ವಿತರಣೆಗೆ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಗೋವಿಂದ ರೆಡ್ಡಿ ಒತ್ತಾಯಿಸಿದ್ದಾರೆ.
ಪಟ್ಟಣದ ರೈತ ಸಂಪರ್ಕ ಕೇಂದ್ರದ ಬಳಿ ಜಮಯಿಸಿದ ರೈತ ನಾಯಕ ಪ್ರೋಸರ್ ನಂಜುಂಡ ಸ್ವಾಮಿ ಸ್ಥಾಪಿತ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮುಖಂಡರು
ಅಂತೂ ಇಂತು ಮಳೆಗಾಲ ಆರಂಭವಾಗಿದೆ. ರೈತರು ತಮ್ಮ ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುತ್ತಿದ್ದಾರೆ ಇದರಿಂದಾಗಿ ಸಕಾಲಕ್ಕೆ ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರಗಳು ನೀಡುವಂತೆ ಒತ್ತಾಯಿಸಿ ಸಹಾಯಕ ಕೃಷಿ ನಿರ್ದೇಶಕಿ ಜಿ. ಲಕ್ಷ್ಮಿ ಅವರಿಗೆ ಮನವಿ ಸಲ್ಲಿಸಿದರು.
ನಂತರ ಮಾತನಾಡಿದ ಅವರು ಒಂದು ವಾರದಿಂದ ಮಳೆ ಸುರಿಯುತ್ತಿದೆ. ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ. ಭೂಮಿಯನ್ನು ಬಿತ್ತನೆಗೆ ಹದಗೊಳಿಸುತ್ತಿದ್ದಾರೆ. ಗುಣಮಟ್ಟದ ವಿವಿಧ ಬೆಳೆಗಳ ಬೀಜಗಳು ಹಾಗೂ ಡಿಎಪಿ ಗೊಬ್ಬರವನ್ನು ಸಮರ್ಪಕವಾಗಿ ಪೂರೈಕೆಗೆ ಪೂರ್ವ ತಯಾರಿ ಮಾಡಿಕೊಳ್ಳಬೇಕಾಗಿದೆ. ಹಾಗೆಯೇ ಬೇವೂರು ಮತ್ತು ತಳಕಲ್ಲ ಗ್ರಾಮಗಳಲ್ಲಿ ಎರಡು ಹೆಚ್ಚುವರಿ ಬೀಜ ವಿತರಣಾ ಕೇಂದ್ರ ಸ್ಥಾಪಿಸಿ, ರೈತರಿಗೆ ಅನುಕೂಲ ಕಲ್ಪಿಸಿಕೊಡಬೇಕು.
ತಾಲ್ಲೂಕಿನಲ್ಲಿ ಹಿಂದೆ ಗೊಬ್ಬರವನ್ನು ಕೃತಕ ಅಭಾವ ಸೃಷ್ಟಿಸಿ, ಕಾಳಸಂತೆಯಲ್ಲಿ ಹೆಚ್ಚಿನ ಹಣಕ್ಕೆ ಮಾರಾಟ ಮಾಡಿದ್ದಾರೆ. ಹೀಗೆ ಅಕ್ರಮ ದಂಧೆಯು ಮತ್ತೆ ಮರುಕಳಿಸದಂತೆ ಮುಂಜಾಗ್ರತೆ ಕ್ರಮ ಅನುಸಿರಿಸಬೇಕು. ಬೀಜ ಮತ್ತು ವಿತರಣಾ ಕೇಂದ್ರದಲ್ಲಿ ಬೀಜಗಳು ಸಂಗ್ರಹಣೆಯ ವಿವರಣೆ ಹಾಗೂ ದರಪಟ್ಟಿಯು ಕಡ್ಡಾಯವಾಗಿ ಪ್ರದರ್ಶಿಸಲು ಮೇಲಧಿಕಾರಿಗಳು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಬೇಕು. ಅಕ್ರಮವಾಗಿ ಹಾಗೂ ಹೆಚ್ಚಿನ ದರದಲ್ಲಿ ಬೀಜ ಗೊಬ್ಬರ ಮಾರಾಟ ಮಾಡಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಮುಂದಾಬೇಕು ಎಂದು ಆಗ್ರಹಿಸಿದ್ದಾರೆ....
ಮನವಿ ಸ್ವೀಕರಿಸಿ ಮಾತನಾಡಿದ ಸಹಾಯಕ ಕೃಷಿ ನಿರ್ದೇಶಕಿ ಜಿ.ಲಕ್ಷ್ಮಿ ಅವರು ಬಾಗೇಪಲ್ಲಿ ತಾಲೂಕಿನ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದ ವರ್ಷಕಿಂತ ಈ ವರ್ಷ ಉತ್ತಮ ಮಳೆಯಾಗಿದೆ ಹಾಗೂ ಮುಖ್ಯವಾಗಿ ತಾಲೂಕಿನ ಎಲ್ಲಾ ರೈತ ಸಂಪರ್ಕ ಕೇಂದ್ರಗಳಲ್ಲೂ ರೈತರಿಗೆ ಅವಶ್ಯಕತೆ ಇರುವ ಬಿತ್ತನೆ, ಬೀಜ, ರಸಗೊಬ್ಬರ ಸಿದ್ದವಾಗಿವೆ ಅಧಿಕೃತವಾಗಿ ಶಾಸಕರ ವತಿಯಿಂದ ವಿತರಣೆಗೆ ಚಾಲನೆ ಪಡೆದು ಅನಂತರ ರೈತರಿಗೆ ಸಕಾಲಕ್ಕೆ ಬಿತ್ತನೆ ಬೀಜ ವಿತರಣೆ ಕೇಂದ್ರಗಲ್ಲಿ ವಿತರಣೆ ಮಾಡಲಾಗುವುದು ಎಂದು ಸಮಾಧಾನ ಪಡಿಸಿದರು..
ಈ ಸಂಧರ್ಭದಲ್ಲಿ ರೈತ ನಾಯಕ ಪ್ರೋಸರ್ ನಂಜುಂಡ ಸ್ವಾಮಿ ಸ್ಥಾಪಿತ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲ್ಲೂಕು ಅಧ್ಯಕ್ಷ ವೆಂಕಟಶಿವಾರೆಡ್ಡಿ, ಕಾರ್ಯದರ್ಶಿ ಕೃಷ್ಣಾರೆಡ್ಡಿ,ಜಿಲ್ಲಾ ಕಾರ್ಯದರ್ಶಿ ರವಿ ನಾಯ್ಕ್,ಸಹಾಯಕ ಕಾರ್ಯದರ್ಶಿ ಕೃಷ್ಣಪ್ಪ,ಉಪಾಧ್ಯಕ್ಷ ಚೌಡರೆಡ್ಡಿ, ಗೌರವಧ್ಯಕ್ಷ ಲಕ್ಷ್ಮಿನರಸಪ್ಪ,ಗಂಗುಳಪ್ಪ,ಈಶ್ವರಪ್
What's Your Reaction?






