ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮ

ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮ

ಮಂಡ್ಯ ಜಿಲ್ಲೆಯ ಹೊಸಹಳ್ಳಿ ಯೋಜನಾ ಕಚೇರಿ ವ್ಯಾಪ್ತಿಯ ತಾವರೆಗೆರೆ ವಲಯದ ತಮಿಳ್ ಕಾಲೋನಿ ಕಾರ್ಯಕ್ಷೇತ್ರದಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಮಾನ್ಯ ಯೋಜನಾದಿಕಾರಿಯವರಾದ ಗಿರೀಶ್ ಕುಮಾರ್ ದೀಪ ಪ್ರಜ್ವಲಿಸುವುದರ ಮೂಲಕ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು ಯೋಜನೆಯು ಜನರನ್ನು ಮಾದಕ ವ್ಯಸನಗಳಿಂದ ಮುಕ್ತರನ್ನಾಗಿಸಲು ಹಲವಾರು ಕಾರ್ಯಕ್ರಮಗಳನ್ನು ನಡೆಸುತ್ತಲೇ ಬಂದಿದೆ ಹಾಗೆ ಸದಸ್ಯರಿಗೆ ಮಾದಕ ವಸ್ತುಗಳಿಂದ  ಆಗುತ್ತಿರುವ ದುಷ್ಪರಿಣಾಮಗಳು, ಆರ್ಥಿಕ ಪರಿಸ್ಥಿತಿ ಉಂಟಾಗುವ ತೊಂದರೆಗಳ ಬಗ್ಗೆ ಮಾಹಿತಿ ನೀಡಿದರು.

ಸಂಪನ್ಮೂಲ ವ್ಯಕ್ತಿಯವರಾದ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಯವರಾದ ವೇಣುಗೋಪಾಲ್ ರವರು ಮಾದಕ ವಸ್ತು ಸೇವನೆಯಿಂದ ಬರುವ ಕಾಯಿಲೆಗಳು ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು.

ಜನಜಾಗೃತಿ ವೇದಿಕೆಯ ಸದಸ್ಯರಾದ ಮಾದೇವು ರವರು ಧರ್ಮಸ್ಥಳ ಸಂಸ್ಥೆಗೆ ಸೇರಿ ಸದಸ್ಯರ ಆರ್ಥಿಕ ಪರಿಸ್ಥಿತಿ ಸುಧಾರಣೆ ಆಗಿದೆ.ಇಂತಹ ಅನೇಕ ಕಾರ್ಯಕ್ರಮಗಳನ್ನು ಸಂಘದ ಸದಸ್ಯರಿಗೆ ನೀಡುತ್ತಿರುವುದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಇತ್ತೀಚಿನ ದಿನಗಳಲ್ಲಿ ಮಾದಕ ವ್ಯಸನದಂತಹ ಹೆಚ್ಚಿನ ಪ್ರಕರಣಗಳು ಕಂಡುಬರುತ್ತಿದೆ, ಇದಕ್ಕೆಲ್ಲ ಕಡಿವಾಣ ಹಾಕಬೇಕಾದರೆ ಮಹಿಳೆಯರ ಪಾತ್ರ ಅತೀ ಮುಖ್ಯ ವಾದುದು, ತಂಬಾಕಿನ ಸಂಪೂರ್ಣ ನಿರ್ಮೂಲನೆ ಆಗಬೇಕಾದರೆ ಮೊದಲು ನಾವು ನಮ್ಮ ಮನೆಯಿಂದಲೇ ಇದನ್ನು ನಿರ್ಮೂಲನೆ ಮಾಡಬೇಕು ಕಾಲಕ್ರಮೇಣ ತಂಬಾಕಿನ ಸಂಪೂರ್ಣ ನಿರ್ಮೂಲನೆ ಸಾಧ್ಯ ಎಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ಇನ್ಸ್ ಪೆಕ್ಟರ್ ಆದ ಮಲ್ಲಿಕಾರ್ಜುನ್ ತಾಲೂಕು ಸಿ ಎಸ್ ಸಿ ನೋಡಲ್ ಅಧಿಕಾರಿ ಅಶೋಕ್ ,ವಲಯದ ಮೇಲ್ವಿಚಾರಕರು,ಸೇವಾ ಪ್ರತಿನಿಧಿಗಳು ಹಾಗೂ  ಸದಸ್ಯರು ಉಪಸ್ಥಿತರಿದ್ದರು.