ವಿಶ್ವ ನಲ್ಲಿ ಕೆಲಸಗಾರರ ದಿನದ ಪ್ರಯುಕ್ತ ಮಾ.11 ರಂದು ದಿನಾಚರಣೆ ಹಾಗೂ

Mar 7, 2026 - 14:40
 0  64
ವಿಶ್ವ ನಲ್ಲಿ ಕೆಲಸಗಾರರ ದಿನದ ಪ್ರಯುಕ್ತ ಮಾ.11 ರಂದು ದಿನಾಚರಣೆ ಹಾಗೂ

     ಚನ್ನರಾಯಪಟ್ಟಣ: ವಿಶ್ವ ನಲ್ಲಿ ಕೆಲಸಗಾರರ ದಿನದ ಪ್ರಯುಕ್ತ ಮಾ.11 ರಂದು ದಿನಾಚರಣೆ ಹಾಗೂ ನೀರು ಉಳಿಸಿ ಜೀವ ರಕ್ಷಿಸಿ ಎಂಬ ಶೀರ್ಷಿಕೆಯಡಿ ಜನಜಾಗೃತಿ ಜಾಥಾ  ಹಮ್ಮಿಕೊಳ್ಳಲಾಗಿದೆ ಎಂದು ತಾಲ್ಲೂಕು ನಲ್ಲಿ ಕೆಲಸಗಾರರ ಸಂಘದ ಅಧ್ಯಕ್ಷ ಆಂಥೋನಿ ಹೇಳಿದರು.

  ಪಟ್ಟಣದ ಪತ್ರಕರ್ತರ ಭವನದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿ ಅವರು ಮಾತನಾಡಿ, ಗೃಹಬಳಕೆ, ಕಟ್ಟಡ ನಿರ್ಮಾಣ, ಕೈಗಾರಿಕೆ ಕ್ಷೇತ್ರಗಳಲ್ಲಿ ನೀರಿನ ಯೋಜಿತ ಬಳಕೆಯಿಂದಾಗಿ ಸಂರಕ್ಷಿಸಬೇಕು ಎಂದರು.

  ಜಲ ಸಾಕ್ಷರತೆಗೆ ಮಹತ್ವ ನೀಡಬೇಕು. ಜನಸಂಖ್ಯೆಗೆ ಅನುಗುಣವಾಗಿ ಲಭ್ಯವಾಗುತ್ತಿರುವ ಕುಡಿಯುವ ನೀರಿನ ಪ್ರಮಾಣ ಕ್ಷೀಣಿಸುತ್ತಿದೆ. ಜಲ ಜಾಗೃತಿ ಮೂಲಕ ಜೀವಜಲ ಸಂರಕ್ಷಿಸಬೇಕಾಗಿದೆ ಎಂದು ತಿಳಿಸಿದರು.

  ಈ ನಿಟ್ಟಿನಲ್ಲಿ ತಾಲ್ಲೂಕು ನಲ್ಲಿ ಕೆಲಸಗಾರರ ಸಂಘದ ವತಿಯಿಂದ ವಿಶ್ವ ನಲ್ಲಿ ಕೆಲಸಗಾರರ ದಿನದಂದು "ನೀರು ಉಳಿಸಿ ಜೀವ ರಕ್ಷಿಸಿ" ಎಂಬ ಘೋಷ ವಾಕ್ಯದೊಂದಿಗೆ ಪಟ್ಟಣದ ಡಾ. ಬಿ.ಆರ್.ಅಂಬೇಡ್ಕರ್ ಭವನದ ಬಳಿಯಿಂದ ಜಾಥಾ ಪ್ರಾರಂಭಿಸಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾರ್ವಜನಿಕರಿಗೆ ಕರಪತ್ರ ಹಂಚುವ ಮೂಲಕ ಜನಜಾಗೃತಿ ಮೂಡಿಸಲಾಗುವುದು ಎಂದರು.

  ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಶಾಸಕ ಸಿ.ಎನ್.ಬಾಲಕೃಷ್ಣ ಕಾರ್ಯಕ್ರಮವನ್ನು ಉದ್ಘಾಟಿಸುವರು. ಮಾಜಿ ವಿಧಾನ ಪರಿಷತ್ ಸದಸ್ಯ ಎಂ.ಎ.ಗೋಪಾಲಸ್ವಾಮಿ, ಬಿಜೆಪಿ ಮುಖಂಡ ಸಿ.ಆರ್.ಚಿದಾನಂದ್, ನಲ್ಲಿ ಕೆಲಸಗಾರರ ಸಂಘದ ರಾಜ್ಯಾಧ್ಯಕ್ಷ ಮಹೇಶ್ ಸೇರಿದಂತೆ ತಾಲೂಕಿನ ಗಣ್ಯರು  ಭಾಗವಹಿಸುವರು ಎಂದು ಮಾಹಿತಿ ನೀಡಿದರು.

 ಕಾರ್ಯಕ್ರಮದಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ದೊರೆಯುವ ಸೌಲಭ್ಯಗಳು, ಪಿಂಚಣಿ ಹಾಗೂ ಸದಸ್ಯರ ನೊಂದವಣಿಗೆ ಸಂಬಂಧಪಟ್ಟ ಮಾಹಿತಿಗಳನ್ನು ನೀಡಲಾಗುವುದು. ತಾಲ್ಲೂಕಿನ ನಲ್ಲಿ ಕೆಲಸಗಾರರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮಾಹಿತಿ ಪಡೆದುಕೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

  ಉಪಾಧ್ಯಕ್ಷ ನಿಂಗೇಗೌಡ, ಕಾರ್ಯದರ್ಶಿ ಲಕ್ಷ್ಮೀಶ್, ಪದಾಧಿಕಾರಿಗಳಾದ  ಧರ್ಮ, ನಾರಾಯಣ್, ರಾಜು, ಅರುಣ್, ಸಂದೀಪ್, ರಘು, ಶಿವು ಸೇರಿದಂತೆ ಇತರರು ಹಾಜರಿದ್ದರು.

What's Your Reaction?

Like Like 3
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456