ವಿಶ್ವ ಪರಿಸರ ದಿನಾಚರಣೆ ಕೇವಲ ಆಚರಣೆಗೆ ಮಾತ್ರ ಸೀಮಿತವಾಗಬಾರದು

Jun 6, 2025 - 12:11
 0  3
ವಿಶ್ವ ಪರಿಸರ ದಿನಾಚರಣೆ ಕೇವಲ ಆಚರಣೆಗೆ ಮಾತ್ರ ಸೀಮಿತವಾಗಬಾರದು

ವಿಶ್ವ ಪರಿಸರ ದಿನಾಚರಣೆ ಕೇವಲ ಆಚರಣೆಗೆ ಮಾತ್ರ ಸೀಮಿತವಾಗದೆ, ನಮ್ಮ ಜೀವನದುದ್ದಕ್ಕೂ ಮೈಗೂಡಿಸಿಕೊಳ್ಳಬೇಕು ಎಂದು ಬ್ಯಾಂಕರ್ಸ್ ಕನ್ನಡಿಗರ ಬಳಗದ ಅಧ್ಯಕ್ಷ ಎಂ ವೆಂಕಟೇಶ ಶೇಷಾದ್ರಿಯವರು ತಿಳಿಸಿದರು.  ಶ್ರೀಯುತರ ಬಿಡದಿಯ ಜೋಗರದೊಡ್ಡಿಯಲ್ಲಿರುವ ಕೆನರಾ ಬ್ಯಾಂಕ್ ಕೆ  ಪಿ ಜೆ ಪ್ರಭು ಕರಕುಶಲ ತರಬೇತಿ ಸಂಸ್ಥೆಯವರು ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆಯಲ್ಲಿ ಮಾತನಾಡುತ್ತಿದ್ದರು.
ಸಮಾರಂಭಗಳಲ್ಲಿ ಉಡುಗೊರೆಗೆ ಬದಲಾಗಿ ಗಿಡಗಳನ್ನು ನೀಡುವುದರಿಂದ ಪರಿಸರವನ್ನು ರಕ್ಷಿಸಬಹುದು. ಮರಗಿಡಗಳನ್ನು ಪೋಷಿಸಿದರೆ, ನಮ್ಮ ವೈಯುಕ್ತಿಕ ರಕ್ಷಣೆಯ ಜೊತೆಗೆ ಪರಿಸರ ಸಂರಕ್ಷಣೆಯೂ ಆಗುತ್ತದೆ ಎಂದರು.
ಕೆನರಾ ಬ್ಯಾಂಕ್ ಕೆಪಿಜೆ ಪ್ರಭು ತರಬೇತಿ ಸಂಸ್ಥೆಯ ನಿರ್ದೇಶಕರಾದ ಶ್ರೀ ಟಿ ಶಿವರಾಂ ರವರು ಮಾತನಾಡಿ, ಪರಿಸರದ ಬಗ್ಗೆ ಅರಿವಿನ ಜೊತೆಗೆ ಪ್ರಜ್ಞೆಯೂ ಬೇಕು. ಪ್ಲಾಸ್ಟಿಕ್ ಬಳಕೆ ಇತಿ-ಮಿತಿಯಲ್ಲಿರಬೇಕು. ಮುಂದಿನ ಪೀಳಿಗೆಗೆ ಪರಿಸರ ಸಂರಕ್ಷಣೆ ಮಾಡುವುದು ಎಲ್ಲರ ಕರ್ತವ್ಯವಾಗಿದೆ.
ಇದೇ ವೇಳೆ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಕೆನರಾ ಬ್ಯಾಂಕ್ ಕೆಪಿಜೆ ಪ್ರಭು ತರಬೇತಿ ಸಂಸ್ಥೆ ಮತ್ತು ಬ್ಯಾಂಕರ್ಸ್ ಕನ್ನಡಿಗರ ಬಳಗವು ಜಂಟಿಯಾಗಿ ಆಯೋಜಿಸಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ನೂತನ್ ಗೌಡ, ಪ್ರಜ್ವಲ್ ವಿ ಎಲ್, ಸುಶ್ಮಿತಾ ಯಾದವ್, ವಿನೋದ್ ಬಡಿಗರ್ ಮತ್ತು ನವೀನ್ ಹೆಚ್ ಬಿ ರವರಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಸಂಸ್ಥೆಯ ಉಪನ್ಯಾಸಕರಾದ ಶ್ರೀ ಬಿ ಎಮ್  ಚಂದ್ರಶೇಖರ್, ಜಿ ಎಸ್ ಸಿದ್ದಪ್ಪ, ನರೇಶ್ ಕುಮಾರ್  ಹಾಗೂ ಸಂಸ್ಥೆಯ ಸಿಬ್ಬಂದಿ ವರ್ಗದವರಾದ ಶಿವಕುಮಾರ್, ವೆಂಕಟೇಶ ಮತ್ತು   ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0