ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನ ಪ್ರತಿಜ್ಞಾ ವಿಧಿ ಸ್ವೀಕಾರ
ಕೆಜಿಎಫ್., ಜೂ, ೧೨ :
ಕೆಜಿಎಫ್ನ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನವನ್ನು ಶುಕ್ರವಾರದಂದು ಆಚರಿಸಿ, ಪ್ರತಿಜ್ಞಾ ವಿಧಿ ಸ್ವೀಕಾರ ಮಾಡಲಾಯಿತು.
ಪ್ರತಿಜ್ಞಾ ವಿಧಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಾಂಶು ರಜಪೂತ್ ಅವರು ಬೋಧಿಸಿದರು. ತಾವು ವಾಸಿಸುವ ಸುತ್ತ ಮುತ್ತಲಿನ ಪ್ರದೇಶ ಹಾಗೂ ತಾವು ಕೆಲಸ ಮಾಡುವ ಸ್ಥಳದಲ್ಲಿ ಯಾವುದೇ ಬಾಲಕಾರ್ಮಿಕರು ಕಂಡುಬಂದಲ್ಲಿ ಅವರನ್ನು ನೇಮಿಸಿಕೊಂಡ ಮಾಲೀಕರಿಗೆ ಹಾಗೂ ಪೋಷಕರಿಗೆ ಅಗತ್ಯ ತಿಳುವಳಿಕೆ ಹೇಳಿ ಆ ಮಗುವನ್ನು ತಪ್ಪದೇ ಶಾಲೆಗೆ ಸೇರಿಸುತ್ತೇವೆ. ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರನ್ನು ತೊಡಗಿಸಿಕೊಂಡು ತಯಾರಿಸಲ್ಪಟ್ಟ ಯಾವುದೇ ರೀತಿಯ ವಸ್ತುಗಳನ್ನು ಉಪಯೋಗಿಸುವುದಿಲ್ಲ ಮತ್ತು ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರ ಸೇವೆಯನ್ನು ಯಾವುದೇ ರೀತಿಯಲ್ಲೂ ಪಡೆಯುವುದಿಲ್ಲವೆಂದು ಹಾಗೂ ಬಾಲ ಕಾರ್ಮಿಕ ಪದ್ದತಿಯ ವಿರುದ್ಧ ಹೋರಾಡಲು ತಾವು ಪಣ ತೊಡುತ್ತೇವೆಂದು ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.
ವಿಶ್ವ ಬಾಲ ಕಾರ್ಮಿಕ ಪದ್ದತಿ ವಿರೋಧಿ ದಿನದ ಪ್ರತಿಜ್ಞಾ ವಿಧಿ ಕಾರ್ಯಕ್ರಮದಲ್ಲಿ ಸಹಾಯಕ ಆಡಳಿತಾಧಿಕಾರಿ ಜಿ.ವಿಶ್ವನಾಥ, ಇನ್ಸ್ಪೆಕ್ಟರ್ ದಯಾನಂದ್.ಆರ್ ಸೇರಿದಂತೆ ಜಿಲ್ಲಾ ಪೊಲೀಸ್ ಕಛೇರಿಯ ಎಲ್ಲಾ ಅಧಿಕಾರಿ, ಸಿಬ್ಬಂದಿಗಳು, ಲಿಪಿಕ ನೌಕರರು ಹಾಜರಿದ್ದರು.
ಕೆಜಿಎಫ್ ಪೊಲೀಸ್ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆ ಹಾಗೂ ಇಲಾಖೆಯ ಎಲ್ಲಾ ಕಛೇರಿಗಳಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ದತಿ ವಿರೋಧಿ ದಿನವನ್ನು ಆಚರಿಸಿ, ಪ್ರತಿಜ್ಞಾ ವಿಧಿ ಸ್ವೀಕಾರ ಮಾಡಲಾಯಿತು.
೧೨ಕೆಜಿಎಫ್೦೧: ವಿಶ್ವ ಬಾಲ ಕಾರ್ಮಿಕ ಪದ್ದತಿ ವಿರೋಧಿ ದಿನ ಪ್ರತಿಜ್ಞಾ ವಿಧಿ
ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ಕಛೇರಿಯ ಅಧಿಕಾರಿ, ಸಿಬ್ಬಂದಿಗಳು
What's Your Reaction?