ವೆಂಗಸಂದ್ರ ಗ್ರಾಮದ ಪ್ರತಿಬಾವಂತ ವಿದ್ಯಾರ್ಥಿಗಳಿಗೆ ಶಾಸಕಿ ರೂಪಕಲಾ ಅವರಿಂದ ಸನ್ಮಾನ
ಬೇತಮಂಗಲ: ಇಲ್ಲಿಗೆ ಸಮೀಪದ ವೆಂಗಸಂದ್ರ ಗ್ರಾಮದಲ್ಲಿ ಶ್ರೀ ಲಕ್ಷ್ಮೀ ನಾರಾಯಣ ಸ್ವಾಮಿ ಜಾತ್ರಾ ಮಹೋತ್ಸವ ಅಂಗವಾಗಿ ಶಾಸಕಿ ರೂಪಕಲಾ ಅವರು ಗ್ರಾಮಕ್ಕೆ ಭೇಟಿ ನೀಡಿ ಶ್ರೀ ಲಕ್ಷ್ಮೀ ನಾರಾಯಣ ಸ್ವಾಮಿ ದೇವರ ದರ್ಶನವನ್ನು ಪಡೆದು ಇತ್ತೀಚಿಗೆ ಪ್ರಕಟಣೆಗೊಂಡ ದ್ವಿತೀಯ ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳನ್ನು ಪಡೆದ ಗ್ರಾಮೀಣ ಭಾಗದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು.
ಶ್ರೀ ಲಕ್ಷ್ಮೀ ನಾರಾಯಣ ಸ್ವಾಮಿ ದೇಗುಲದ ಆವರಣದಲ್ಲಿ ಸುರೇಶ್ ಮತ್ತು ಸುನೀಲ್ ಸಹಯೋಗದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು, ಮಕ್ಕಳಲ್ಲಿನ ಪ್ರತಿಭೆಯನ್ನು ಗುರುತಿಸುವುದು ನಮ್ಮ ಆದ್ಯ ಕರ್ತವ್ಯ ವೆಂಗಸಂದ್ರ ಗ್ರಾಮದಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಪಿಯುಸಿ ಮತ್ತು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಶ್ರೇಣಿಯಲ್ಲಿ ಅತೀ ಹೆಚ್ಚು ಅಂಕಗಳನ್ನು ಪಡೆದಿರುವುದು ಹೆಮ್ಮೆಯ ಸಂಗತಿ ಎಂದು ತಿಳಿಸಿದರು.
ಶಿಕ್ಷಕರು ಹಾಗೂ ಪೋಷಕರ ಪ್ರೋತ್ಸಾಹದೊಂದಿಗೆ ಈ ದಿನ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ ಇದೇ ಗ್ರಾಮದ ಹಳೇ ವಿದ್ಯಾರ್ಥಿಗಳಾದ ಸುರೇಶ್ ಮತ್ತು ಸುನೀಲ್ ರವರು ಶ್ರೀ ಲಕ್ಷ್ಮೀ ನಾರಾಯಣ ಸ್ವಾಮಿಯ ಉತ್ಸವದ ಭವ್ಯ ದಿನದಂದು ಮಕ್ಕಳ ಪ್ರತಿಭೆಗಳನ್ನು ಗುರುತಿಸುವ ನಿಟ್ಟಿನಲ್ಲಿ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದರು.
ಮುಂದಿನ ದಿನಗಳಲ್ಲಿ ಈ ವಿದ್ಯಾರ್ಥಿಗಳು ಉತ್ತಮ ವಿದ್ಯಾಭ್ಯಾಸ ಮಾಡಿ ಉನ್ನತ ಹುದ್ದೆಗಳನ್ನು ಅಲಂಕರಿಸಿ ದೇಶಕ್ಕೆ ಹಾಗೂ ಸಮಾಜಕ್ಕೆ ಆಸ್ತಿ ಆಗಬೇಕು ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ವಿದ್ಯಾರ್ಥಿಗಳಿಗೆ ಸನ್ಮಾನ: ವೆಂಗಸಂದ್ರ ಗ್ರಾಮದಲ್ಲಿ ಇತ್ತೀಚಿಗೆ ಪ್ರಕಟಣೆಗೊಂಡ ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಶಾಲು ಹೊದಿಸಿ ನೆನಪಿನ ಕಾಣಿಕೆ ನೀಡುವುದರ ಮೂಲಕ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಅಪ್ಪೋಜಿ ಗೌಡ, ವೆಂಕಟ ಚಲಪತಿ, ಚಂದ್ರಯ್ಯ, ಮುರಳಿ ಕೃಷ್ಣ, ಪದ್ಮಮ್ಮ ರಮೇಶ್, ರಾಮಣ್ಣ, ವಿಜಿ ಕುಮಾರ್ ಪದ್ಮನಾಭ ರೆಡ್ಡಿ, ಕೃಷ್ಣಮೂರ್ತಿ, ವೆಂಕಟರಾಮ್, ಭಾಸ್ಕರ್, ಕೆಟಿ ಮಂಜು , ರೆಡ್ಡಪ್ಪ, ಸೇರಿದಂತೆ ವಿದ್ಯಾರ್ಥಿಗಳ ಪೋಷಕರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.
ಚಿತ್ರ 01 ವೆಂಗಸಂದ್ರ ಗ್ರಾಮದಲ್ಲಿ ಅತೀ ಹೆಚ್ಚು ಅಂಕಗಳನ್ನು ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಶಾಸಕಿ ರೂಪಕಲಾ ಅವರು ಸನ್ಮಾನಿಸಿದರು.
What's Your Reaction?
Like
1
Dislike
0
Love
0
Funny
0
Angry
0
Sad
0
Wow
0
