ವೈದ್ಯರಿಗೆ ಶುಭಾಶಯ ಕೋರಿದ ರಂಜಿತಾ ಸುನೀಲ್ ಕುಮಾರ್
ವಿಶ್ವ ವೈದ್ಯರ ದಿನಾಚರಣೆ ಅಂಗವಾಗಿ ಇಂದು ನಗರಪಾಲಿಕೆ ಮಾಜಿ ಸದಸ್ಯರಾದ ದಿ ಎನ್ ಸುನೀಲ್ ಕುಮಾರ್ ಅವರ ಶ್ರೀಮತಿ ರಂಜಿತಾ ಸುನೀಲ್ ಕುಮಾರ್ ಅವರು ಯುವ ಮುಖಂಡರುಗಳಾದ ತೇಜಸ್ವಿ ನಾಗಲಿಂಗಸ್ವಾಮಿ ಮತ್ತು ಆತ್ಮೀಯ ಶ್ರೀಧರ್ ಜೀ ಅವರ ಜೊತೆಗೂಡಿ ವಾರ್ಡ್ ಸಂಖ್ಯೆ 51 ಅಗ್ರಹಾರ ದ ರಾಮಾನುಜ ರಸ್ತೆಯಲ್ಲಿರುವ ಅಕ್ಕಮಣ್ಣೀ ಆಸ್ಪತ್ರೆಗೆ ತೆರಳಿ ಅಲ್ಲಿನ ವೈದ್ಯಾಧಿಕಾರಿಗಳಿಗೆ ಗಿಡ ನೀಡುವ ಮೂಲಕ ಶುಭಾಶಯಗಳನ್ನು ತಿಳಿಸಿದರು
ಈ ಸಂದರ್ಭದಲ್ಲಿ ಮಾತನಾಡಿದ ಯುವ ಮುಖಂಡರಾದ ತೇಜಸ್ವಿ ನಾಗಲಿಂಗಸ್ವಾಮಿ
ಪ್ರತಿ ವರ್ಷ ಜುಲೈ 1 ರಂದು ರಾಷ್ಟ್ರೀಯವೈದ್ಯ ರ ದಿನವನ್ನ ವೈದ್ಯರಿಗೆ ವಿಶೇಷ ಗೌರವ ನೀಡುವ ಸಲುವಾಗಿ ಆಚರಿಸಲಾಗುತ್ತದೆ ಎಂದರು
ಭಾರತದಲ್ಲಿ ಪಶ್ಚಿಮ ಬಂಗಾಳದ ಮೊದಲ ಮುಖ್ಯಮಂತ್ರಿ ಮತ್ತು ವೈದ್ಯ ಡಾ. ಬಿಧಾನ್ ಚಂದ್ರ ರಾಯ್ ಅವರ ಸ್ಮರಣಾರ್ಥ 1991 ಜುಲೈ 1 ರಲ್ಲಿ ಮೊದಲ ಬಾರಿ ವೈದ್ಯರ ದಿನವನ್ನು ಆಚರಿಸಲಾಗುತ್ತದೆ ಎಂದರು ಮತ್ತು ನಮ್ಮ ವಾರ್ಡಿನ ವ್ಯಾಪ್ತಿಯಲ್ಲಿ ಬರುವ ಈ ಆಸ್ಪತ್ರೆಯ ವೈದ್ಯಾಧಿಕಾರಿಗಳಾಗಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ನಿಮಗೆ ಧನ್ಯವಾದಗಳನ್ನು ತಿಳಿಸಿ ಈ ಆಸ್ಪತ್ರೆಯ ಅಭಿವೃದ್ಧಿ ಕುರಿತು ಸದಾ ನಿಮ್ಮೊಂದಿಗೆ ಇರುತ್ತವೆ ಎಂದರು