ಶಾಸಕಿ ರೂಪಕಲಾ ಅವರಿಗೆ ಸಚಿವ ಸ್ಥಾನ ನೀಡಿ: ಬೇತಮಂಗಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗರಾಜ್ 

May 29, 2026 - 11:17
 0  13
ಶಾಸಕಿ ರೂಪಕಲಾ ಅವರಿಗೆ ಸಚಿವ ಸ್ಥಾನ ನೀಡಿ: ಬೇತಮಂಗಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗರಾಜ್ 

      ಬೇತಮಂಗಲ: ಸತತ ಎರಡನೇ ಬಾರಿ ಶಾಸಕರಾಗಿ ಗೆಲುವು ಸಾದಿಸಿ ಕ್ಷೇತ್ರವನ್ನು ಅಭಿವೃದ್ಧಿಯತ್ತ ಸಾಗಿಸತ್ತಿರುವ ಮತ್ತು  ಜಿಲ್ಲೆಯಲ್ಲೇ ಮಾದರಿ ಕ್ಷೇತ್ರವನ್ನಾಗಿ ಅಭಿವೃದ್ಧಿ ಪಡಿಸಲು ಶ್ರಮಿಸುತ್ತಿರುವ ಸ್ಥಳೀಯ ಶಾಸಕಿ ರೂಪಕಲಾ ಅವರಿಗೆ ಇನ್ನೂ ಎರಡು ದಿನಗಳಲ್ಲಿ ನೂತನ ಮುಖ್ಯಮಂತ್ರಿಯಾಗುವ ಡಿಕೆ ಶಿವಕುಮಾರ್ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕೆಂದು ಬೇತಮಂಗಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ನಾಗರಾಜ್ ಪಕ್ಷದ ವರಿಷ್ಟರಿಗೆ ಒತ್ತಾಯಿಸಿದರು. 

ಪಟ್ಟಣದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು, ರೂಪಕಲಾ ಶಶಿಧರ್ ಅವರು ಕ್ಷೇತ್ರದಲ್ಲಿ ಸತತವಾಗಿ ಜನರ ನಂಬಿಕೆ ಗಳಿಸಿ ಆಯ್ಕೆಯಾಗಿದ್ದಾರೆ. ತಳಮಟ್ಟದಿಂದ ಪಕ್ಷವನ್ನು ಸಂಘಟಿಸಿ, ಮಹಿಳಾ ಸಬಲೀಕರಣ ಮತ್ತು ಕ್ಷೇತ್ರದ ಅಭಿವೃದ್ಧಿಗೆ ಅವರು ನೀಡಿರುವ ಕೊಡುಗೆ ಅಪಾರವಾಗಿದೆ ಕ್ಷೇತ್ರದಲ್ಲಿ ಹಲುವಾರು ಅಭಿವೃದ್ಧಿ ಕೆಲಸಗಳನ್ನು ಕೈಗೊಂಡು  ಮಾದರಿ ಕ್ಷೇತ್ರವನ್ನಾಗಿ ಮಾರ್ಪಡುಸುತ್ತಿದ್ದಾರೆ ಎಂದರು.

ಕ್ಷೇತ್ರದ ಅಭಿವೃದ್ಧಿ: ಶಾಸಕಿಯಾಗಿ ರೂಪಕಲಾ ಅವರು ಕೆಜಿಎಫ್ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಅವರಿಗೆ ಸಚಿವ ಸ್ಥಾನ ಸಿಕ್ಕರೆ ಕ್ಷೇತ್ರದ ಅಭಿವೃದ್ಧಿಗೆ ಮತ್ತಷ್ಟು ವೇಗ ಸಿಗಲಿದೆ  ಅವರು ಸಮರ್ಥ ನಾಯಕಿಯಾಗಿದ್ದು, ಅವರಿಗೆ ಮುಂಬರುವ  ಸಂಪುಟದಲ್ಲಿ ಸಚಿವ ಸ್ಥಾನ ನೀಡುವ ಮೂಲಕ ಕೋಲಾರ ಜಿಲ್ಲೆಗೆ ಹಾಗೂ ಮಹಿಳಾ ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು ಎಂಬುದು ನಮ್ಮ ಒತ್ತಾಯವಾಗಿದೆ ಎಂದು ತಿಳಿಸಿದರು.

What's Your Reaction?

like

dislike

love

funny

angry

sad

wow

suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022 Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ:08041505268 , 9686665456 #suddikiranatv #suddikiranaott