ಶಿಕ್ಷಕರನ್ನು ವರ್ಗಾವಣೆ ಮಾಡಿರುವುದನ್ನು ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಸಂತೆಮರಹಳ್ಳಿ: ಸಮೀಪದ ಹೆಗ್ಗವಾಡಿಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಿಶೋರ್ ಎಂಬ ಶಿಕ್ಷಕರನ್ನು ವರ್ಗಾವಣೆ ಮಾಡಿರುವುದನ್ನು ಖಂಡಿಸಿ ವರ್ಗಾವಣೆ ಮಾಡಿರುವುದನ್ನು ಖಂಡಿಸಿ 30 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಾಲೆಯ ಮುಂಭಾಗ ಜಮಾಯಿಸಿ ಪ್ರತಿಭಟನೆ ನಡೆಸಿದರು.
ಈ ಬಳಿಕ ರೈತ ಸಂಘದ ಮುಖಂಡ ಮಹೇಶ್ ಕುಮಾರ್ ಮಾತನಾಡಿ ಉತ್ತಮ ಶಿಕ್ಷಣ ನೀಡುವಂತ ಶಿಕ್ಷಕರನ್ನು ತಮ್ಮ ಇಷ್ಟ ಬಂದ ಹಾಗೆ ವರ್ಗಾವಣೆ ಮಾಡುವುದರ ಹಿಂದೆ ಕಾಣದ ಕೈಗಳು ಕೆಲಸ ನಿರ್ವಹಿಸುತ್ತಿರುವುದು ಮೇಲ್ನೋಟಕ್ಕೆ ಕಾಣುತ್ತಿದೆ ಎಂದು ಶಿಕ್ಷಣ ಇಲಾಖೆ ವಿರುದ್ಧ ಕಿರಿ ಕಾರಿದರು.
ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಯಲ್ಲಿ ಮೂಲಭೂತ ಸೌಕರ್ಯ ಸೌಕರ್ಯ ನೀಡುವಲ್ಲಿ ಸರ್ಕಾರ ವಿಪಲವಾಗಿದೆ ಎಂದರು. ಎಲ್ಲಂದರಲ್ಲಿ ಖಾಸಗಿ ಶಾಲೆ ತಲೆಯೆತ್ತಿ ನಿಂತಿದ್ದು ದೊಡ್ಡ ದೊಡ್ಡ ರಾಜಕಾರಣಿಗಳ ಮಕ್ಕಳು ಖಾಸಗಿ ಶಾಲೆಗಳತ್ತ ಮುಖ ಮಾಡಿರುವುದರಿಂದ ಸರ್ಕಾರಿ ಶಾಲೆಗಳು ಮುಚ್ಚುವ ಸ್ಥಿತಿಗೆ ಬಂಧು ತಲುಪಿದೆ ಎಂದರೆ ತಪ್ಪಾಗಲಾರದು ಈ ವ್ಯವಸ್ಥೆ ಸರ್ಕಾರದ ಹುನ್ನಾರ ಎಂದು ಆರೋಪಿಸಿದ್ದಾರೆ.
ಸಂದರ್ಭದಲ್ಲಿ ಗ್ರಾ ಪಂ ಸದಸ್ಯ ಎಚ್ ಎನ್ ಶಿವುಕುಮಾರ್ ಮಾತನಾಡಿ ಕಳೆದ 9 ವರ್ಷಗಳಿಂದ ಈ ಶಾಲೆಯಲ್ಲಿ ಮಕ್ಕಳಿಗೆ ಇಂಗ್ಲಿಷ್ ಪಾಠ ಮಾಡುತ್ತಿದ್ದು ವಿದ್ಯಾರ್ಥಿಗಳ ಜೊತೆ ಉತ್ತಮ ಬಾಂದವ್ಯ ಹೊಂದಿದ್ದಾರೆ. ಹಾಗಾಗಿ ವರ್ಗಾವಣೆಯಾಗಿರುವ ಶಿಕ್ಷಕರನ್ನು ಮತ್ತೆ ವರ್ಗಾವಣೆ ಮಾಡಬೇಕೆಂದು ಒತ್ತಾಯಿಸಿದ್ದಾರೆ. ಈ ಸಂದರ್ಭದಲ್ಲಿ ಹಲವಾರು ವಿದ್ಯಾರ್ಥಿಗಳು ಮಾತನಾಡಿ ನಮ್ಮ ಶಾಲೆಗೆ ಕಿಶೋರ್ ಸರ್ ಉತ್ತಮ ಸೇವೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ಮತ್ತೆ ಈ ಶಿಕ್ಷಕರನ್ನು ನಮ್ಮ ಶಾಲೆಗೆ ಮರು ನೇಮಕ ಮಾಡಬೇಕೆಂದು ಒತ್ತಾಯಸಿದ್ದಾರೆ.
ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ಎಸ್ ಡಿ ಎಂ ಸಿ ಅಧ್ಯಕ್ಷ ಸಿದ್ದರಾಜು, ಸಹನಾ, ಮಂಜುಳಾ, ಮನಿಯಮ್ಮ, ಮಹದೇವಮ್ಮ, ಶೀಲಾ, ನಿಂಗರಾಜು, ಮಹೇಶ್, ಪ್ರಕಾಶ್, ನಾಗಯ್ಯ, ನಾಗರಾಜ್ ಉಪಸ್ಥಿತರಿದ್ದರು.
What's Your Reaction?






