ಶೇಷಾದ್ರಿಪುರದ ರಾಯರ ಮಠದಲ್ಲಿ "ಭಗವದ್ಗೀತಾ ಪಠಣ" ಕಾರ್ಯಕ್ರಮ

Dec 3, 2025 - 15:23
 0  3
ಶೇಷಾದ್ರಿಪುರದ ರಾಯರ ಮಠದಲ್ಲಿ "ಭಗವದ್ಗೀತಾ ಪಠಣ" ಕಾರ್ಯಕ್ರಮ

   ಬೆಂಗಳೂರು: ವಿಶ್ವ ಹಿಂದೂ ಪರಿಷತ್ ವತಿಯಿಂದ ಹಿಂದೂ ಸಮಾಜದ ಸರ್ವಾಂಗೀಣ ಉನ್ನತಿಗಾಗಿ, ಸಂಸ್ಕೃತಿಯ ಉಳಿವಿಗಾಗಿ, ಜ್ಞಾನ-ಕರ್ಮ-ಭಕ್ತಿ ಹಾಗೂ ರಾಜ ಯೋಗಗಳ ಅರಿವಿಗಾಗಿ ಬೆಂಗಳೂರಿನ 108 ಧಾರ್ಮಿಕ ಕೇಂದ್ರಗಳಲ್ಲಿ "ಭಗವದ್ಗೀತಾ ಪಠಣ" ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಇದರ ಅಂಗವಾಗಿ ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಡಿಸೆಂಬರ್ 4, ಗುರುವಾರ ಮಧ್ಯಾಹ್ನ 3-30ಕ್ಕೆ ಶೇಷಾದ್ರಿಪುರದ ಪ್ಲಾಟ್ ಫಾರಂ ರಸ್ತೆಯಲ್ಲಿರುವ (ಮಂತ್ರಿ ಮಾಲ್ ಮೆಟ್ರೋ ಸ್ಟೇಷನ್ ಎದುರು) ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಏರ್ಪಡಿಸಲಾಗಿದೆ.

ಈ ವಿಶೇಷ ಲೋಕಕಲ್ಯಾಣ ಕಾರ್ಯಕ್ರಮದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಸ್ಥೆಯ ಪದಾಧಿಕಾರಿಗಳು ವಿನಂತಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ, ಮೊಬೈಲ್ : ಶ್ರೀ ಸತೀಶ್-9945282078 / ಶ್ರೀಮತಿ ಜಗದಂಬಾ-8310973938

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456