ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಈ ಸಮುದಾಯ ಸದೃಡವಾಗಬೇಕಿದೆ-ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶಪ್ಪ

ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಈ ಸಮುದಾಯ ಸದೃಡವಾಗಬೇಕಿದೆ-ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶಪ್ಪ

ಬಾಗೇಪಲ್ಲಿ: ಸವಿತಾ ಮಹರ್ಷಿ ಜಯಂತಿ ಆಚರಣೆಯಿಂದ ಸಮುದಾಯದ ಜನರನ್ನು ಸಂಘಟಿಸಲು ಸಹಾಯವಾಗುತ್ತದೆ, ಕಡಿಮೆ ಜನಸಂಖ್ಯೆ ಹೊಂದಿರುವ ಸವಿತಾ ಸಮಾಜದವರು ಶೈಕ್ಷಣಿಕವಾಗಿ ಅಭಿವೃದ್ಧಿಹೊಂದಿದರೆ ಮಾತ್ರ ಸಮುದಾಯ ವ್ಯಕ್ತಿಗಳು ಮುಖ್ಯವಾಹಿನಿಗೆ ಬರಲು ಸಾದ್ಯವಾಗುತ್ತದೆ ಎಂದು ಕ್ಷೇತ್ರ ಶಿಕ್ಷಣಧಿಕಾರಿ ವೆಂಕಟೇಶಪ್ಪ ತಿಳಿಸಿದ್ದಾರೆ.

ಪಟ್ಟಣದ ತಾಲೂಕು ಆಡಳಿತ ಕಛೇರಿ ನ್ಯಾಯಾಲಯದ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ಸವಿತಾ ಸಮಾಜದತಿಯಿಂದ ಏರ್ಪಡಿಸಿದ್ದ ಸವಿತಾ ಮಹರ್ಷಿ ಜಯಂತಿ ಕಾರ್ಯಾಕ್ರಮದಲ್ಲಿ ಭಾಗವಹಿಸಿ  ಭಾವಚಿತ್ರಕ್ಕೆ ಪುಷ್ಪಾ ನಮನ ಸಲ್ಲಿಸಿ ಮಾತನಾಡಿದ ಅವರು ಗುರುಗಳ ಹಾದಿಯಲ್ಲಿ ಸಾಗಿ ಆಚಾರ-ವಿಚಾರ ಮೈಗೊಡಿಸಿಕೊಂಡರೆ ಸಮಾಜದಲ್ಲಿ ಸವಿತಾ ಸಮಾಜ ಎಲ್ಲಾ ವರ್ಗದ ಜನರಿಗೂ ತಾತರಮ್ಯವಿಲ್ಲದೆ ಸೇವೆ ನೀಡುತ್ತಿದೆ, ಹಾಗಾಗಿ ಸಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಈ ಸಮುದಾಯ ಸದೃಡವಾಗಬೇಕಿದೆ.

ಸವಿತಾ ಸಮಾಜ ಶುಭಕಾರ್ಯ ಗಳಿಗೆ ಮುಂದಿರುತ್ತದೆ, ಆದರೆ ಸಮುದಾಯವನ್ನು ಸಮಾಜದ ಮುಖ್ಯವಾಹಿನಿಗೆ ತರಲು ಮುಖಂಡರಿಗೆ ಸಾಧ್ಯವಾಗುತ್ತಿಲ್ಲ, ಸಂಘಟಿತರಾಗುವ ಮೂಲಕ ಸರ್ಕಾರದ ಯೋಜನೆಗಳ ಪ್ರಯೋಜನ ಪಡೆಯಬೇಕು.

ಪೌರಾಣಿಕ ವ್ಯಕ್ತಿಯಾದ ಸವಿತಾ ಮಹಿರ್ಷಿಯು ರಥಸಮ್ಮಿಯ ದಿನ ಮಾಘ ಮಾಸದ ಶುಕ್ಲ ಪಕ್ಷದಲ್ಲಿ ಜನಿಸಿದರು, ಧಾರ್ಮಿಕವಾಗಿ ಶಿವನ ಎಡಗಣ್ಣನ್ನು ಚಂದ್ರನಿಗೆ, ಬಲಗಣ್ಣನ್ನು ಸೂರ್ಯನಿಗೆ ಹೊಲಿಸಲಾಗುತ್ತದೆ, ಶಿವನ ಬಲಗಣ್ಣಿನಿಂದ ಜನಿಸಿದವನೇ ಸವಿತಾ ಮಹರ್ಷಿ ಎಂದು ತಿಳಿಸಿದ ಅವರು ಸವಿತಾ ಸಮಾಜದವರನ್ನು ಸೂರ್ಯವಂಶಕ್ಕೆ ಸೇರಿದವರೆಂದು ಹೆಮ್ಮೆಯಿಂದ ಹೇಳಬಹುದು, ಅಪಾರ ಜ್ಞಾನಭಂಡಾರ ಹೊಂದಿದ ಸವಿತಾ ಮಹರ್ಷಿಗಳು ನಾಲ್ಕನೇ ವೇದವಾದ ಸಾಮದೇವ ಕೃತಿ ರಚಿಸಿದ್ದಾರೆ, ಇವರ ಮಗಳಾದ ಗಾಯತ್ರಿದೇವಿಯ ಶ್ರೇಷ್ಠಮಂತ್ರವಾದ ಗಾಯಿತ್ರಿ ಮಂತ್ರವನ್ನು ರಚಿಸಿದ್ದಾರೆ ಎಂದರು....

ಈ ಸಂಧರ್ಭದಲ್ಲಿ  ಸವಿತಾ ಸಮಾಜದ ಅಧ್ಯಕ್ಷ ಮಂಜುನಾಥ್,ಬಿ.ಸಿ.ಎಂ.ಶಿವಪ್ಪ,ರಾಜಣ್ಣ,ಸವಿತಾ ಸಮಾಜದ ಮುಖಂಡರಾದ ಲಕ್ಷ್ಮಿ ನರಸಪ್ಪ,ರಾಮಾಂಜಿ,ಸುಧಾ,ಶ್ರೀನಿವಾಸ್,ಮಹೇಶ್ ಸೇರಿದಂತೆ ಅನೇಕ ಮುಖಂಡರು ಇದ್ದರು.