ಶ್ರೀಕ್ಷೇತ್ರ ಮಂತ್ರಾಲಯದಲ್ಲಿ ಕು|| ಅಭಿಜ್ಞ ಪಿ. ಕಶ್ಯಪ್ ಅವರಿಂದ "ನಾದ ನಮನ"

Dec 24, 2025 - 15:50
Dec 24, 2025 - 21:33
 0  5
ಶ್ರೀಕ್ಷೇತ್ರ ಮಂತ್ರಾಲಯದಲ್ಲಿ ಕು|| ಅಭಿಜ್ಞ ಪಿ. ಕಶ್ಯಪ್ ಅವರಿಂದ "ನಾದ ನಮನ"
   ಮಂತ್ರಾಲಯ: ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಗುರುರಾಯರ ಮೂಲ ಬೃಂದಾವನ ಸನ್ನಿಧಾನವಿರುವ ಶ್ರೀಕ್ಷೇತ್ರ ಮಂತ್ರಾಲಯದಲ್ಲಿ ಬೆಂಗಳೂರಿನ ಶ್ರೀ ಬಿ.ಕೆ. ಪ್ರಸನ್ನಕುಮಾರ್ ಮತ್ತು ಶ್ರೀಮತಿ ವಿಜಯಲಕ್ಷ್ಮಿ ಅವರ ಸುಪುತ್ರಿ ಹಾಗೂ ವಿದುಷಿ ಶ್ರೀಮತಿ ಲಕ್ಷ್ಮೀ ವರುಣ್ ಮತ್ತು ವಿದುಷಿ ಶ್ರೀಮತಿ ವಿಜಯಾ ಭಟ್ ಅವರ ಶಿಷ್ಯೆ ಕು|| ಅಭಿಜ್ಞ ಪಿ. ಕಶ್ಯಪ್ ಅವರು ಸಲ್ಲಿಸಿದ "ನಾದ ನಮನ" ಕಾರ್ಯಕ್ರಮದಲ್ಲಿ ಅಪರೋಕ್ಷ ಜ್ಞಾನಿಗಳಿಂದ ರಚಿಸಲ್ಪಟ್ಟ ಹಲವಾರು ಅಪರೂಪದ ಹರಿದಾಸರ ಪದಗಳನ್ನು ತಾರತಮ್ಯೋಕ್ತವಾಗಿ ಪ್ರಸ್ತುತಪಡಿಸಿದರು. ಇವರ ಗಾಯನಕ್ಕೆ ಪಿಟೀಲು ವಾದನದಲ್ಲಿ ವಿದ್ವಾನ್ ಶ್ರೀ ಎಸ್. ಶಶಿಧರ್ ಹಾಗೂ ಮೃದಂಗ ವಾದನದಲ್ಲಿ ವಿದ್ವಾನ್ ಶ್ರೀ ಶ್ರೀನಿವಾಸ್ ಅನಂತರಾಮಯ್ಯ ಸಹಕರಿಸಿದರು. ನಂತರ ಕಾರ್ಯಕ್ರಮದ ಸಂಚಾಲಕರು ಕಲಾವಿದರಿಗೆ ಅನುಗ್ರಹ ಸಂದೇಶ ಪತ್ರ ಮತ್ತು ಫಲಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು.

What's Your Reaction?

Like Like 2
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456