ಶ್ರೀನಿವಾಸಸಂದ್ರ: ಗ್ರಾಮ ಪಂಚಾಯಿತಿಯಲ್ಲಿ ಯಶಸ್ವಿಯಾಗಿ ಜರುಗಿದ ನೀರಿನ ಅದಾಲತ್’ ಕಾರ್ಯಕ್ರಮ
ಬೇತಮಂಗಲ: ಗ್ರಾಮೀಣ ಭಾಗದ ಸಾರ್ವಜನಿಕರ ಕುಡಿಯುವ ನೀರಿನ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ, ಶ್ರೀನಿವಾಸಸಂದ್ರ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ನೀರಿನ ಅದಾಲತ್ ಕಾರ್ಯಕ್ರಮವು ಯಶಸ್ವಿಯಾಗಿ ಜರುಗಿತು.
ಇಲ್ಲಿಗೆ ಸಮೀಪದ ಶ್ರೀನಿವಾಸಸಂದ್ರ ಗ್ರಾಪಂ ಯಲ್ಲಿ ಆಡಳಿತಾಧಿಕಾರಿ ರಾಜಶೇಖರ್ ಹಾಗೂ ಪಿಡಿಒ ಎಜಾಜ್ ನೇತೃತ್ವದಲ್ಲಿ ನೀರಿನ ಅದಾಳತ್ ಕಾರ್ಯಕ್ರಮ ನಡೆಯಿತು. ಈ ವೇಳೆ ಆಡಳಿತಾಧಿಕಾರಿ ಮಾತನಾಡಿ, ಗ್ರಾಮಗಳಲ್ಲಿ ಕುಡಿಯುವ ನೀರನ್ನು ಮಿತವಾಗಿ ಬಳಸಬೇಕು ರಾಜ್ಯದಲ್ಲಿ ಬಿಸಿಲು ತಾಪಮಾನ ನೆತ್ತರಕ್ಕೆ ಏರುತ್ತಿದೆ ಇದರಿಂದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗ ಬಾರದೆಂದು ಎಂಬ
ದೃಷ್ಟಿಯಿಂದ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಪಿಡಿಒ ಎಜಾಜ್ ಪಾಷಾ ಮಾತನಾಡಿ, ಮನೆಗಳಲ್ಲಿ ನೀರನ್ನು ಮಿತವಾಗಿ ಬಳಸಬೇಕು ಕುಡಿಯುವ ನೀರನ್ನು ವಾಹನಗಳನ್ನು ಮತ್ತು ತರಕಾರಿಗಳನ್ನು ತೊಳೆಯಲು ಬಳಸಬಾರದು. ನೀರಿನ ಟ್ಯಾಂಕ್ ಕೊಳವೆ ಸುತ್ತಲೂ ಸ್ವಚ್ಛತೆ ಕಾಪಾಡುವುದು ನೀರಿನ ಕಲುಷಿತಗೊಳ್ಳದಂತೆ ಎಚ್ಚರಿಕೆ ವಹಿಸುವುದರ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ನೀರು ಉಳಿಸಿ ಅಭಿಯಾನ: ಇದೇ ಸಂದರ್ಭದಲ್ಲಿ ಬೇಸಿಗೆಯ ದಿನಗಳಲ್ಲಿ ನೀರಿನ ವ್ಯರ್ಥವನ್ನು ತಡೆಯುವ ಬಗ್ಗೆ ಮತ್ತು ಅಂತರ್ಜಲ ವೃದ್ಧಿಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸಲಾಯಿತು
ಈ ಸಂದರ್ಭದಲ್ಲಿ ಆಡಳಿತಾಧಿಕಾರಿ ರಾಜಶೇಖರ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಜಾಜ್ ಪಾಷ ಕಾರ್ಯದರ್ಶಿ ವಿಜಯ್ ಕುಮಾರ, ಸುತ್ತಮುತ್ತಲಿನ ಗ್ರಾಮಸ್ಥರು ಉಪಸ್ಥಿತರಿದ್ದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
