ಶ್ರೀ ಚೌಡೇಶ್ವರಿ ಅಮ್ಮನವರ ದೇವಾಲಯದಲ್ಲಿ ಮಣ್ಣಿನ ಅಮಾವಾಸ್ಯೆ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮಗಳು 

ಶ್ರೀ ಚೌಡೇಶ್ವರಿ ಅಮ್ಮನವರ ದೇವಾಲಯದಲ್ಲಿ ಮಣ್ಣಿನ ಅಮಾವಾಸ್ಯೆ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮಗಳು 

ಕೃಷ್ಣರಾಜಪೇಟೆ ಪಟ್ಟಣದ ಹೊರವಲಯದ ಹೇಮಗಿರಿ ರಸ್ತೆಯಲ್ಲಿರುವ ಶ್ರೀ ಚೌಡೇಶ್ವರಿ ಅಮ್ಮನವರ ದೇವಾಲಯದಲ್ಲಿ ಮಣ್ಣಿನ ಅಮಾವಾಸ್ಯೆ ಅಂಗವಾಗಿ ಅಲಂಕಾರ ಹಾಗೂ ವಿಶೇಷ ಪೂಜಾ ಕಾರ್ಯಕ್ರಮಗಳು ಶ್ರದ್ಧಾ ಭಕ್ತಿಯಿಂದ ನಡೆದವು.ಮುಂಜಾನೆಯಿಂದಲೇ ಆರಂಭವಾದ ಪೂಜಾ ಕಾರ್ಯಕ್ರಮಗಳಲ್ಲಿ ಸಾವಿರಾರು ಭಕ್ತಾದಿಗಳು ಭಾಗವಹಿಸಿದ್ದರು. ಸಾಂಸ್ಕೃತಿಕ ಸಂಘಟಕ ವೇದಬ್ರಹ್ಮ ರವಿಶಾಸ್ತ್ರಿ ಅವರ ನೇತೃತ್ವದಲ್ಲಿ ಪೂಜಾ ಕಾರ್ಯಕ್ರಮಗಳು ನಡೆದವು. ದೇವಾಲಯಕ್ಕೆ ಆಗಮಿಸಿದ್ದ ಭಕ್ತಾದಿಗಳಿಗೆ ಸಿಹಿ ಪೊಂಗಲ್ ಹಾಗೂ ಪುಳಿಯೋಗರೆ ಪ್ರಸಾದವನ್ನು ವಿತರಿಸಲಾಯಿತು. ನೇಕಾರ ತೊಗಟವೀರ ಚೌಡೇಶ್ವರಿ ಟ್ರಸ್ಟ್ ಅಧ್ಯಕ್ಷ ಹೆಚ್ ಎಮ್ ಚಂದ್ರಶೇಖರ್, ಗೌರವಾಧ್ಯಕ್ಷ ಕೆ ಆರ್ ನಾಗರಾಜ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ವಿದ್ಯಾರ್ಥಿ ಭಂಡಾರ್ ಸುರೇಶ್, ಖಜಾಂಚಿ ಕೆ ಆರ್ ಮಹೇಶ್, ಪದಾಧಿಕಾರಿಗಳಾದ ಕೆಎಸ್ ಮಧುಸೂದನ್, ಕೆಸಿ ವಾಸು, ಕೆ ಆರ್ ಚಂದ್ರಶೇಖರ್, ಎಸ್.ಜೆ ಮಲ್ಲಿಕಾರ್ಜುನ, ಪರಿಮಳ ನಾಗರಾಜ್ ಶೆಟ್ಟಿ ಮಣ್ಣಿನ ಅಮಾವಾಸ್ಯೆ ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ತಾಯಿ ಚೌಡೇಶ್ವರಿ ಅಮ್ಮನವರ ಕೃಪಾಶೀರ್ವಾದಕ್ಕೆ ಪಾತ್ರರಾದರು.