ಶ್ರೀ ಲಕ್ಷ್ಮಿ ವೆಂಕಟರಮಣ ಸ್ವಾಮಿ ದೇವಾಲಯಕ್ಕೆ ಜಿಲ್ಲಾಧಿಕಾರಿ ಕೆ ಎಸ್ ಲತಾ ಕುಮಾರಿ ಭೇಟಿ 

Jul 17, 2025 - 18:16
 0  10
ಶ್ರೀ ಲಕ್ಷ್ಮಿ ವೆಂಕಟರಮಣ ಸ್ವಾಮಿ ದೇವಾಲಯಕ್ಕೆ ಜಿಲ್ಲಾಧಿಕಾರಿ ಕೆ ಎಸ್ ಲತಾ ಕುಮಾರಿ ಭೇಟಿ 
ಅರಸೀಕೆರೆ: ಅರಸೀಕೆರೆ ನಗರ ಸಮೀಪವಿರುವ ರಾಜ್ಯದಲ್ಲೇ ಚಿಕ್ಕ ತಿರುಪತಿ ಎಂದು ಹೆಸರು ಪಡೆದಿರುವ ಶ್ರೀ ಅಮರಗಿರಿ ಮಾಲೆಕಲ್ ತಿರುಪತಿ ಶ್ರೀ ಲಕ್ಷ್ಮಿ ವೆಂಕಟರಮಣ ಸ್ವಾಮಿ ದೇವಾಲಯಕ್ಕೆ ಪ್ರಥಮ ಬಾರಿಗೆ ಜಾತ್ರಾ ಮಹೋತ್ಸವದ ಕೊನೆಯ ದಿನವಾದ ಇಂದು ಭೇಟಿ ನೀಡಿದ ಹಾಸನ ಜಿಲ್ಲಾಧಿಕಾರಿ ಕೆ ಎಸ್ ಲತಾ ಕುಮಾರಿ ಇವರು ಶ್ರೀ ಲಕ್ಷ್ಮಿ ವೆಂಕಟರಮಣ ಸ್ವಾಮಿಯ ದರ್ಶನ ಪಡೆದು ನಂತರ ಭೇಟಿ ನೀಡಿದ ನೆನಪಿಗೋಸ್ಕರ ದೇವಾಲಯದ ಆವರಣದಲ್ಲಿ ಗುಲಾಬಿ ಹೂವಿನ ಗಿಡ ನೆಟ್ಟು ಸ್ವಾಮಿಯ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಉಪ ವಿಭಾಗಾಧಿಕಾರಿ ಮಾರುತಿ, ತಹಶೀಲ್ದಾರ್ ಎಂ ಜಿ ಸಂತೋಷ್ ಕುಮಾರ್, ತಾಲೂಕ್ ಪಂಚಾಯತ್
ಕಾರ್ಯನಿರ್ವಾಹಕ ಅಧಿಕಾರಿ ಎಚ್ ಕೆ ಸತೀಶ್ , ಟಿಎಚ್ಒ ರಂಗನಾಥ್, ನಗರಸಭೆ ಪೌರಾಯುಕ್ತ ಕೃಷ್ಣಮೂರ್ತಿ, ಅಗ್ಗುಂದ ಗ್ರಾಮ ಪಂಚಾಯಿತಿ ಅಧ್ಯಕ್ಷೇ ಕವಿತಾ, ಪಿಡಿಒ ಶಿವಕುಮಾರ್ ,ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷರಾದ ಟಿ ಆರ್ ನಾಗರಾಜ್, ಸಮಿತಿ ನಿರ್ದೇಶಕರಾದ ಚಂದ್ರು, ಮುಜರಾಯಿ ಇಲಾಖೆಯ ಅಧಿಕಾರಿ ನಾಗರತ್ನ, ಪಾರು ಪತ್ತೆದಾರ್ ಲೋಕೇಶಯ್ಯ, ಆಗಮಿಕರಾದ ರಾಮಪ್ರಸಾದ್,ಅರ್ಚಕರಾದ ವರದರಾಜು, ಕಂದಾಯ ವೃತ್ತ ನಿರೀಕ್ಷಕ ಓಬಳೇಶ್ ಹಾಗೂ ಗ್ರಾಮ ಆಡಳಿತ ಅಧಿಕಾರಿ ಶಿವಾನಂದನಾಯ್ಕ, ಗ್ರಾಮ ಆಡಳಿತ ಅಧಿಕಾರಿ ಅಶ್ವಿನಿ,ಪೊಲೀಸ್ ಪೇದೆ ಹರೀಶ್, ಸಮಾಜ ಸೇವಕ ಎಸ್ಎಲ್ಎನ್ ಯೋಗೇಶ್, ಕಂದಾಯ ಇಲಾಖೆ ಶಿವಕುಮಾರ್, ಆರೋಗ್ಯ ಇಲಾಖೆ ಸಿಬ್ಬಂದಿಗಳು, ತಿರುಪತಿ ಗ್ರಾಮಸ್ಥರು,ಭಕ್ತಾದಿಗಳು ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456