ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಮತ್ತು ವೆಂಕಟೇಶ್ವರ ಸ್ವಾಮಿ ದೇಗುಲಗಳ ವೈಭವದ ದ್ವಿತೀಯ ಬ್ರಹ್ಮೋತ್ಸವ

Apr 1, 2026 - 16:07
 0  1
ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಮತ್ತು ವೆಂಕಟೇಶ್ವರ ಸ್ವಾಮಿ ದೇಗುಲಗಳ ವೈಭವದ ದ್ವಿತೀಯ ಬ್ರಹ್ಮೋತ್ಸವ

       ಕೆಜಿಎಫ್: ನಗರದ ಸ್ವಾಮಿನಾಥಪುರಂ ಮುಖ್ಯರಸ್ತೆಯ ಕೋರಮಂಡೆಲ್ ಓಟ್ ಲೈನ್ ಪ್ರದೇಶದಲ್ಲಿ ಇರುವ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಹಾಗೂ ಶ್ರೀ ತಿರುವೆಂಗಡ ಮುಡಯನ್ ದೇವಸ್ಥಾನಗಳಲ್ಲಿ ದ್ವಿತೀಯ ವಾರ್ಷಿಕ ಬ್ರಹ್ಮೋತ್ಸವವು ಏಪ್ರಿಲ್ 4 ರಿಂದ 6ರವರೆಗೆ ಮೂರು ದಿನಗಳ ಕಾಲ ಭಕ್ತಿ ಮತ್ತು ಸಂಭ್ರಮದಿಂದ ನಡೆಯಲಿದೆ.
ಬ್ರಹ್ಮೋತ್ಸವದ ಅಂಗವಾಗಿ ಏಪ್ರಿಲ್ 3ರಂದು ಶುಕ್ರವಾರ ಸ್ವಾತಿ ನಕ್ಷತ್ರದ ವಿಶೇಷ ಪೂಜೆಗಳನ್ನು ದೇವಸ್ಥಾನದಲ್ಲಿ ಆಯೋಜಿಸಲಾಗಿದೆ. ಏಪ್ರಿಲ್ 4ರಂದು ಶನಿವಾರ ಬೆಳಿಗ್ಗೆ 7 ಗಂಟೆಯಿಂದ ಪ್ರಬಂಧ ಪಾರಾಯಣ, ವೇದಪಾರಾಯಣ, ತಿರುವಾರಾಧನೆ, ಅನುಜ್ಞೆ, ಸಭಾ ಪ್ರಾರ್ಥನೆ ಹಾಗೂ ವಿಶ್ವಕ್ಸೇನ ಆರಾಧನೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಏಪ್ರಿಲ್ 5ರಂದು ಭಾನುವಾರ ಬೆಳಿಗ್ಗೆಯಿಂದ ಸುಪ್ರಭಾತ ಸೇವೆ, ಪ್ರಬಂಧ ಪಾರಾಯಣ, ಗೋಷ್ಠಿ, ದ್ವಾರ ತೋರಣ ಹಾಗೂ ಧ್ವಜಸ್ತಂಭ ಆರಾಧನೆ ಕಾರ್ಯಕ್ರಮಗಳು ನಡೆಯಲಿದ್ದು, ಸಂಜೆ ಅಹಲ್ಯಾ ಮಾತೃ ಮಂಡಳಿಯವರಿಂದ ಭಜನೆ ಕಾರ್ಯಕ್ರಮ ನಡೆಯಲಿದೆ.
ಉತ್ಸವದ ಕೊನೆಯ ದಿನವಾದ ಏಪ್ರಿಲ್ 6ರಂದು ಸೋಮವಾರ ಬೆಳಿಗ್ಗೆಯಿಂದ ಪೂಜಾ ವಿಧಿವಿಧಾನಗಳು ನಡೆಯಲಿದ್ದು, ಮಧ್ಯಾಹ್ನ ಹೋಮ-ಹವನಗಳು ನಡೆಯಲಿವೆ. ರಾತ್ರಿ ಶ್ರೀ ವೆಂಕಟರಮಣ ಸ್ವಾಮಿ ಮತ್ತು ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಉತ್ಸವ ಮೂರ್ತಿಗಳ ಭವ್ಯ ಮೆರವಣಿಗೆ ನಗರ ಪ್ರಮುಖ ಬೀದಿಗಳಲ್ಲಿ ಸಾಗಲಿದೆ.
     ಮೂರೂ ದಿನಗಳ ಕಾಲ ಭಕ್ತರಿಗೆ ಬೆಳಿಗ್ಗೆ ಉಪಹಾರ, ಮಧ್ಯಾಹ್ನ ಹಾಗೂ ರಾತ್ರಿ ಅನ್ನಪ್ರಸಾದದ ವ್ಯವಸ್ಥೆ ಮಾಡಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ಸ್ವಾಮಿಯ ಕೃಪೆಗೆ ಪಾತ್ರರಾಗುವಂತೆ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಕೆ. ಮಹೇಂದ್ರನ್ ಹಾಗೂ ಸದಸ್ಯರು ಮನವಿ ಮಾಡಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456