ಸಂತೇಮರಳ್ಳಿ ಪೊಲೀಸ್ ಠಾಣೆ ವತಿಯಿಂದ  ಕಾನೂನು ಅರಿವು ಕಾರ್ಯಕ್ರಮ 

Jun 2, 2025 - 11:58
 0  10
ಸಂತೇಮರಳ್ಳಿ ಪೊಲೀಸ್ ಠಾಣೆ ವತಿಯಿಂದ  ಕಾನೂನು ಅರಿವು ಕಾರ್ಯಕ್ರಮ 

ಸಂತೆಮರಹಳ್ಳಿ: ಇಲ್ಲಿನ ಪೊಲೀಸ್ಜ ಠಾಣೆಯಲ್ಲಿ ಕಾನೂನು ಅರಿವು ಕಾರ್ಯಕ್ರಮವನ್ನು ಆಯೋಜನೆ ಮಾಡಲಾಯಿತು. ಈ ವೇಳೆಯಲ್ಲಿ ಜನರಲ್ಲಿ  ಕಾನೂನು ಬಗ್ಗೆ ಅರಿವು ಕಡಿಮೆಯಿದ್ದು, ಕಾನೂನುಗಳ ಅಪರಾಧಗಳನ್ನು ಕುರಿತಂತೆ ತಿಳಿಸುವ ಪ್ರಯತ್ನ ಮಾಡಿದಲ್ಲಿ ಅಪರಾಧ ಪ್ರಕರಣಗಳು ಕಡಿಮೆಯಾಗಲಿವೆ ಎಂದು ಪಿಎಸ್ಐ ತಾಜುದ್ದೀನ್ ರವರು ಹೇಳಿದರು.

 ಅಪರಾಧ ಮಾಸಾಚರಣೆ- 2025 ರ ಅಂಗವಾಗಿ ನಡೆದ ಕಾನೂನು ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಪಿ ಎಸ್ ಐ ತಾಜುದ್ದೀನ್

ಗ್ರಾಮೀಣ ಪ್ರದೇಶಗಳಲ್ಲಿ ಅಪರಾಧಗಳು ಹೆಚ್ಚಾಗುತ್ತಿದ್ದು ಇದನ್ನು ತಡೆಯಲು ಪೊಲೀಸ್ ಇಲಾಖೆ ಸಾಕಷ್ಟು ಜಾಗೃತಿ ವಹಿಸಿದೆ. ಇಲ್ಲಿಯವರೆಗೆ ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ಗ್ರಾಮೀಣ ಪ್ರದೇಶಗಳಲ್ಲಿ ನಡೆಸಲಾಗಿದ್ದು, ಇದರಿಂದಾಗಿ ಸ್ವಲ್ಪ ಮಟ್ಟಿಗಿನ ಪ್ರಯೋಜನ ಕಂಡಿದೆ. ಸಾರ್ವಜನಿಕರು ಸಹಕಾರ ನೀಡಿದಲ್ಲಿ ಕಾರ್ಯಕ್ರಮ ಯಶಸ್ವಿಯಾಗಲಿದೆ.

ಇತ್ತೀಚೆಗೆ ಒಂಟಿ ಮಹಿಳೆಯರು ರಸ್ತೆಯಲ್ಲಿ ಹೋಗುವಾಗ ಸರಗಳ್ಳತನ, ಯಾರೂ ಇಲ್ಲದ ಮನೆಗಳಲ್ಲಿ ದರೋಡೆ ಪ್ರಕರಣಗಳು ಹೆಚ್ಚಾಗುತ್ತಿದ್ದು ಇಂಥ ಪ್ರಕರಣಗಳನ್ನು ತಡೆಯಲು ಬೀಟ್ ಪೊಲೀಸರಿಂದ ಅಪರಾಧ ಮಾಸಾಚರಣೆ ಕಾರ್ಯಗಳನ್ನು ನಡೆಸಲಾಗುತ್ತಿದೆ.

ಪ್ರಸ್ತುತ ಮೊಬೈಲ್‌ ಪ್ರಪಂಚ ನಿರ್ಮಾಣವಾಗಿದ್ದು ಇದರಿಂದಲೂ ಹೆಚ್ಚು ಸೈಬರ್ ಅಪರಾಧಗಳು ಹೆಚ್ಚುತ್ತಿವೆ,ಸಾರ್ವಜನಿಕರು ಯಾವುದೇ ಅಪರಿಚಿತ ಕರೆಗಳು ಬಂದರೆ ನಿಮ್ಮ ಬ್ಯಾಂಕ್ ಖಾತೆ ಮನೆವಿಳಾಸ, ಸೇರಿದಂತೆ ಇನ್ನಿತರೆ ಯಾವುದೇ ವೈಯುಕ್ತಿಕ ಮಾಹಿತಿಗಳನ್ನು ಕೇಳಿದಲ್ಲಿ ನೀಡಬಾರದು, ಚಿನ್ನ ಕಳವು, ಹೆಲ್ಮೆಟ್ ಜಾಗೃತಿ ಹಾಗೂ ಇನ್ನಿತರ ಕಾನೂನಿನ ಬಗ್ಗೆ  ಸಲಹೆ ನೀಡಿದರು.

What's Your Reaction?

Like Like 2
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456