ಸಮಯ ವ್ಯರ್ಥ ಮಾಡದೆ ಸಮಗ್ರ ಸಮೀಕ್ಷೆಗೆ ಆದ್ಯತೆ ನೀಡಿ-ತಹಸೀಲ್ದಾರ್ ಮನಿಷಾ ಮಹೇಶ್ ಪತ್ರಿ
ಬಾಗೇಪಲ್ಲಿ: ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಸಮೀಕ್ಷೆ ಕಾರ್ಯ ಮೇ 5ರಿಂದ ಆರಂಭಗೊಳ್ಳಲಿದ್ದು, ಸಂಬಂಧಿಸಿದ ಎಲ್ಲರೂ ಕುಟುಂಬದ ಜಾತಿ ಮತ್ತು ಇತರೆ ಮಾಹಿತಿಯನ್ನು ಗಣತಿದಾರರಿಗೆ ನಿಖರವಾಗಿ ನೀಡಬೇಕು’ ಎಂದು ತಾಲೂಕು ತಹಸೀಲ್ದಾರ್ ಮನಿಷಾ ಮಹೇಶ್ ಪತ್ರಿ ಹೇಳಿದರು.
ಪಟ್ಟಣದ ನ್ಯಾಷನಲ್ ಕಾಲೇಜು ಆವರಣದಲ್ಲಿ ಆಯೋಜಿಸಿದ್ದ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗಿಕರಣ, ಸಮೀಕ್ಷೆ ಕುರಿತು ಮೇಲ್ವಿಚಾರಕರು ಮತ್ತು ಗಣತಿದಾರರಿಗೆ ನಡೆದ ಒಂದು ದಿನದ ತರಬೇತಿ ಕಾರ್ಯಗಾರದಲ್ಲಿ ಭಾಗವಹಿಸಿ ಮಾತನಾಡಿದ ಅವರು ಮೇಲ್ವಾಚರಕರು ಮತ್ತು ಗಣತಿದಾರರು ತರಬೇತಿಯಲ್ಲಿ ಸಂಪೂರ್ಣ ಮಾಹಿತಿ ಪಡೆದು ತಾಲೂಕಿನಲ್ಲಿ ಸಮೀಕ್ಷೆ ನಡೆಯುವ ಸಂದರ್ಭದಲ್ಲಿ ಯಾವುದೇ ಪರಿಶಿಷ್ಟ ಜಾತಿಯ ಕುಟುಂಬವು ಬಿಟ್ಟು ಹೋಗದಂತೆ ಎಚ್ಚರಿಕೆ ವಹಿಸಬೇಕು ಹಾಗೂ ಉಪಜಾತಿ, ಆರ್ಥಿಕ ಮತ್ತು ಸಾಮಾಜಿಕ ಮಟ್ಟ ಸೇರಿದಂತೆ ಸಮೀಕ್ಷೆಯಲ್ಲಿ ನೀಡಲಾಗುವ ಎಲ್ಲ ಪ್ರಶ್ನೆಗಳಿಗೆ ನಿಖರ ಉತ್ತರ ಪಡೆದು ಅಪಲೋಡ್ ಮಾಡಬೇಕು.
ಬಾಗೇಪಲ್ಲಿ ಮತ್ತು ಚೇಳೂರು ತಾಲೂಕುಗಳಲ್ಲಿ ಒಟ್ಟು 208 ಬೂತ್ಗಳಲ್ಲಿ 228 ಕ್ಕೂ ಹೆಚ್ಚು ಗಣತಿದಾರರನ್ನು ಮತ್ತು 20 ಮೇಲ್ವಿಚಾರಕರನ್ನು ಸಮೀಕ್ಷಾ ಕಾರ್ಯಕ್ಕೆ ನಿಯೋಜಿಸಲಾಗಿದೆ. ಸಮೀಕ್ಷಾ ಕಾರ್ಯವನ್ನು ಯಾವುದೇ ಗೊಂದಲಗಳಿಲ್ಲದೆ ಸಮಗ್ರ ಸಮೀಕ್ಷೆ ಪೂರ್ಣಗೊಳಿಸಬೇಕು ಎಂದರು.
ಈ ಸಂಧರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶಪ್ಪ,ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಲಕ್ಷ್ಮೀಪತಿ ರೆಡ್ಡಿ,ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ರಮೇಶ್,ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆರ್. ಹನುಮಂತರೆಡ್ಡಿ ಸೇರಿದಂತೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಅನೇಕ ಶಿಕ್ಷಕರು ಇದ್ದರು...
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
