ಸಮಾಜಸೇವಾ ರತ್ನ ಪ್ರಶಸ್ತಿಗೆ ಅಶೋಕ ಲೋಣಿ ಆಯ್ಕೆ

Oct 28, 2025 - 17:34
 0  3
ಸಮಾಜಸೇವಾ ರತ್ನ ಪ್ರಶಸ್ತಿಗೆ ಅಶೋಕ ಲೋಣಿ ಆಯ್ಕೆ

  ಕೆಜಿಎಫ್: ಬೆಮೆಲ್ ಕಾರ್ಖಾನೆಯ ನಿವೃತ್ತ ಉದ್ಯೋಗಿ ಹಾಗೂ  ಸಮಾಜಸೇವಕ ಅಶೋಕ ಲೋಣಿ ಅವರು ರಾಜ್ಯೋತ್ಸವದ ಅಂಗವಾಗಿ ಸಮಾಜಸೇವಾ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಪ್ರತಿಷ್ಠಿತ ಅನ್ವೇಷಣೆ ಸಾಂಸ್ಕೃತಿಕ ಅಕಾಡೆಮಿ ವತಿಯಿಂದ ಈ ಗೌರವ ಅವರಿಗೆ ಪ್ರದಾನವಾಗಲಿದೆ.    

            ಸಮಾಜಮುಖಿ ಚಟುವಟಿಕೆಗಳಲ್ಲಿ ಸದಾ ಸಕ್ರಿಯರಾಗಿರುವ ಲೋಣಿಯವರ ಸೇವಾ ಮನೋಭಾವವನ್ನು ಅನೇಕ ಸಂಘ ಸಂಸ್ಥೆಗಳು ಈಗಾಗಲೇ ಗುರುತಿಸಿ ಹಲವು ಪ್ರಶಸ್ತಿಗಳನ್ನು ನೀಡಿ ಸನ್ಮಾನಿಸಿವೆ. ಅಶೋಕ ಲೋಣಿ ಸಾಮಾಜಿಕ ಜಾಗೃತಿ, ಪರಿಸರ ಸಂರಕ್ಷಣೆ, ಬಸವ ಸಮಿತಿಯಲ್ಲಿ ಸಕ್ರಿಯವಾಗಿರುವ ಮತ್ತು ಜನಸೇವೆಯ ಕ್ಷೇತ್ರಗಳಲ್ಲಿ ತಮ್ಮ ಅಮೂಲ್ಯ ಕೊಡುಗೆ ನೀಡಿ ಜನಮನ ಗೆದ್ದಿದ್ದಾರೆ. ಅವರ ತ್ಯಾಗದ ಮತ್ತೊಂದು ಮಾದರಿ, ತಮ್ಮ ಮರಣಾನಂತರ ಮೃತ ದೇಹವನ್ನು ವೈದ್ಯಕೀಯ ವಿದ್ಯಾರ್ಥಿಗಳ ಅಧ್ಯಯನಕ್ಕಾಗಿ ದಾನಮಾಡಲು ಬರೆದು ಕೊಟ್ಟಿರುವುದು ಅವರ ಮಾನವೀಯತೆಯ ಉನ್ನತ ಪರಾಕಾಷ್ಠೆ.  

 ಲೋಣಿಯವರನ್ನು ಈ ಪ್ರಶಸ್ತಿಗೆ ಆಯ್ಕೆ ಆಗಿರುವುದಕ್ಕೆಅವರ ಸ್ನೇಹಿತರು, ಸಹೋದ್ಯೋಗಿಗಳು ಮತ್ತು ವಿವಿಧ ಸಂಘ ಸಂಸ್ಥೆಗಳು ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456