ಸರ್ಕಾರಿ ಅಲ್ಪಸಂಖ್ಯಾತರ ಮುರಾರ್ಜಿ ದೇಸಾಯಿ ವಸತಿ ಕಾಲೇಜು ಚನ್ನರಾಯಪಟ್ಟಣ ಇಲ್ಲಿ ರಾಷ್ಟ್ರೀಯ ಶಿಕ್ಷಣ ದಿನ

Nov 12, 2025 - 17:50
 0  3
ಸರ್ಕಾರಿ ಅಲ್ಪಸಂಖ್ಯಾತರ ಮುರಾರ್ಜಿ ದೇಸಾಯಿ ವಸತಿ ಕಾಲೇಜು ಚನ್ನರಾಯಪಟ್ಟಣ ಇಲ್ಲಿ ರಾಷ್ಟ್ರೀಯ ಶಿಕ್ಷಣ ದಿನ

  ಚನ್ನರಾಯಪಟ್ಟಣ:  ಸರ್ಕಾರಿ ಅಲ್ಪಸಂಖ್ಯಾತರ ಮುರಾರ್ಜಿ ದೇಸಾಯಿ ವಸತಿ ಕಾಲೇಜು ಚನ್ನರಾಯಪಟ್ಟಣ ಇಲ್ಲಿ ರಾಷ್ಟ್ರೀಯ ಶಿಕ್ಷಣ ದಿನ ಅಂಗವಾಗಿ ಅರಿವಿನ ಜಾತವನ್ನು ಹಮ್ಮಿಕೊಳ್ಳಲಾಗಿತ್ತು ಡಾ. ಅಬುಲ್ ಕಲಾಂ ಆಜಾದ್ ಅವರ ಜನ್ಮದಿನದ ಸವಿನೆನಪಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಶಾಲಾ-ಕಾಲೇಜುಗಳಲ್ಲಿ ಶಿಕ್ಷಣದ ಅರಿವಿನ ಬಗ್ಗೆ ತಿಳುವಳಿಕೆ ಮೂಡಿಸಲು ಈ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಗಿತ್ತು.. ಕಾರ್ಯಕ್ರಮ ವನ್ನು ಕಾರ್ಯಕ್ರಮದ ಕುರಿತು ಉಪನ್ಯಾಸಕ ಎಂ. ಜೆ. ರತ್ನಾಕರ್ ಮಾತನಾಡಿ ಶಿಕ್ಷಣವು ಮನುಷ್ಯನ ಸರ್ವಾಂಗಿನ ಅಭಿವೃದ್ಧಿಗೆ ಸಾಧನವಾಗಿದೆ ಹಾಗಾಗಿ ಶಿಕ್ಷಣದಿಂದ ಅಲ್ಪಸಂಖ್ಯಾತ ಹಾಗೂ ಹಿಂದುಳಿದ ವರ್ಗದ ಮಕ್ಕಳು ವಂಚಿತರಾಗದಂತೆ ನೋಡಿಕೊಳ್ಳಬೇಕು ಶಿಕ್ಷಣದಿಂದಲೇ ಮಾತ್ರ ಬದುಕನ್ನು ರೂಪಿಸಿಕೊಳ್ಳಲು ದೇಶವನ್ನ ಅಭಿವೃದ್ಧಿ ಎಡೆಗೆ ಕೊಂಡೊಯಲು ಸಾಧ್ಯವಾಗುತ್ತದೆ ಶಿಕ್ಷಣವೆಂಬದು ಹುಲಿ ಹಾಲಿದ್ದಂತೆ ಅದನ್ನು ಕುಡಿದವರು ಗರ್ಜಿಸಲೇಬೇಕು ಎಂಬ ಬಾಬಾ ಸಾಹೇಬರ ಮಾತಿನಂತೆ ಶಿಕ್ಷಣವನ್ನು ಪಡೆದುಕೊಂಡರೆ ಸ್ವಾಭಿಮಾನದಿಂದ ಬದುಕಲು ಸಾಧ್ಯವಾಗುತ್ತದೆ ಎಂದು ಹೇಳಿದರು ಸಮಾರಂಭದಲ್ಲಿ ಮೊಟ್ಟಮೊದಲ ಕೇಂದ್ರ ಶಿಕ್ಷಣ ಸಚಿವರಾಗಿದ್ದ ಅಬುಲ್ ಕಲಾಂ ಆಜಾದ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು ರಾಷ್ಟ್ರೀಯ ಶಿಕ್ಷಣ ದಿನದ ಅಂಗವಾಗಿ  ನಡೆಸಿದ ಚರ್ಚಾ ಸ್ಪರ್ಧೆ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿನಿಯರಿಗೆ ಬಹುಮಾನವನ್ನು ವಿತರಿಸಲಾಯಿತು. ಸಮಾರಂಭದಲ್ಲಿ ಉಪನ್ಯಾಸಕರಾದ ಶ್ರೀಮತಿ ಜಯಶೀಲ ಸವಿತಾ ಪೂಜಾರಿ ಭವ್ಯ ರುಬಿನಾಥಾಸಿನ್ ಹಾಗೂ ಪ್ರಥಮ ದರ್ಜೆ ಸಹಾಯಕರಾದ ಯೋಗೇಶ್ ನಿಲೆಯ ಪಾಲಕರಾದ ಶಿಲ್ಪಕಲಾ ಉಪಸ್ಥಿತರಿದ್ದರು  ಕಾರ್ಯಕ್ರಮವನ್ನು ಕುಮಾರಿ ಭಾನುಪ್ರಿಯ ನಿರೂಪಣೆ ಮಾಡಿದರು ಕುಮಾರಿ ಚಂದನ ಸ್ವಾಗತಿಸಿದರು

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456