ಸಾಧಕ ಪೊಲೀಸ್ ಅಧಿಕಾರಿಗಳಿಗೆ ದಲಿತ ಸಂಘಟನೆಗಳಿಂದ ಅಭಿನಂದನೆ
ಬೇತಮಂಗಲ: ಪೊಲೀಸ್ ಇಲಾಖೆಯಲ್ಲಿ ಸಲ್ಲಿಸಿದ ಅತ್ಯುತ್ತಮ ಸೇವೆಯನ್ನು ಪರಿಗಣಿಸಿ 2025ನೇ ಸಾಲಿನ ಪ್ರತಿಷ್ಠಿತ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾಗಿರುವ ಕೆಜಿಎಫ್ ಅಂಡರ್ ಸನ್ ಪೇಟೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಮಂಜುನಾಥ್ ಮತ್ತು ಕಾಮಸಮುದ್ರ ಪೊಲೀಸ್ ಸಬ್ ಇನ್ಸ್ ಪೆಕ್ಟ್ ರ್ ಕಿರಣ್ ಅವರನ್ನು ವಿವಿಧ ದಲಿತ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಆತ್ಮೀಯವಾಗಿ ಅಭಿನಂದಿಸಿದರು.
ಪೊಲೀಸ್ ಇಲಾಖೆಯ ಕರ್ತವ್ಯದ ಜೊತೆಗೆ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡು, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಈ ಇಬ್ಬರು ಅಧಿಕಾರಿಗಳು ತೋರಿದ ದಕ್ಷತೆಯನ್ನು ಸಂಘಟನೆಯ ಮುಖಂಡರು ಶ್ಲಾಘಿಸಿದರು. ಪದಕ ವಿಜೇತ ಅಧಿಕಾರಿಗಳನ್ನು ಭೇಟಿ ಮಾಡಿದ ದಲಿತ ಸಂಘಟನಾಕಾರರು, ಅವರಿಗೆ ಹಾರ ಹಾಕಿ ಸಿಹಿ ಹಂಚಿ ಸಂಭ್ರಮಿಸಿದರು.
ಈ ವೇಳೆ ಸಾಮ್ರಾಟ್ ಕೃಷ್ಣ ಮೂರ್ತಿ ಮಾತನಾಡಿ, ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವ ಅಧಿಕಾರಿಗಳನ್ನು ಸರ್ಕಾರ ಗುರುತಿಸಿ ಗೌರವಿಸಿರುವುದು ಸಂತಸದ ಸಂಗತಿ. ಮಂಜುನಾಥ್ ಮತ್ತು ಕಿರಣ್ ಅವರಂತಹ ದಕ್ಷ ಅಧಿಕಾರಿಗಳು ಇಲಾಖೆಗೆ ಮತ್ತು ಸಮಾಜಕ್ಕೆ ಮಾದರಿಯಾಗಿದ್ದಾರೆ. ಇವರ ಈ ಸಾಧನೆ ಇತರ ಯುವ ಅಧಿಕಾರಿಗಳಿಗೆ ಸ್ಫೂರ್ತಿ ನೀಡಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ. ದಲಿತ ಸಂಘಟನಕಾರರಾದ ಸಾಮ್ರಾಟ್ ಕೃಷ್ಣ ಮೂರ್ತಿ, ರಾದಪ್ಪ, ಕೆಂಚಣ್ಣ, ಶ್ರೀನಾಥ್ ನಾಸ್ತಿಕ್, ಸುಬ್ರಮಣಿ ಸೇರಿದಂತೆ ಉಪಸ್ಥಿತರಿದ್ದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
