ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ವಿಶ್ವ ತಂಬಾಕು ವಿರೋಧಿ ದಿನದ ಉದ್ದೇಶವಾಗಿದೆ : ಸಂಗಮೇಶ ಎನ್ ಜವಾದಿ
ಚಿಟಗುಪ್ಪ : ವಿಶ್ವ ತಂಬಾಕು ರಹಿತ ದಿನವನ್ನು, ತಂಬಾಕು ಸೇವನೆಯ ಹಾನಿಕಾರಕ ಪರಿಣಾಮಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಮತ್ತು ತಂಬಾಕು ಸೇವೆನೆಯನ್ನು ಕಡಿಮೆ ಮಾಡಲು ವಿಶ್ವ ಆರೋಗ್ಯ ಸಂಸ್ಥೆಯ ನೇತೃತವದಲ್ಲಿ ಮೇ 31 ತಂಬಾಕು ವಿರೋಧಿ ದಿನವೆಂದು ಜಾಗತಿಕ ಮಟ್ಟದಲ್ಲಿ ಆಚರಣೆ ಮಾಡಲಾಗುತ್ತದೆ ಎಂದು ಸಾಹಿತಿ, ಪರಿಸರವಾದಿ ಸಂಗಮೇಶ ಎನ್ ಜವಾದಿ ಹೇಳಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಆಯೋಜಿಸಿದ್ದ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಧೂಮಪಾನ ಮತ್ತು ಹೊಗೆ ರಹಿತ ತಂಬಾಕು ಉತ್ಪನ್ನಗಳು ಸೇರಿದಂತೆ ತಂಬಾಕು ಸೇವೆನೆಯಿಂದ ಉಂಟಾಗುವ ಆರೋಗ್ಯದ ಅಪಾಯಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಮತ್ತು ಶಿಕ್ಷಣ ನೀಡುವುದು ವಿಶ್ವ ತಂಬಾಕು ವಿರೋಧಿ ದಿನದ ಪ್ರಮುಖ ಉದ್ದೇಶವಾಗಿದೆ. ತಂಬಾಕು ಬಳಕೆಯ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾಗಳು, ಸಂಸ್ಥೆಗಳಿಗೆ ಪ್ರೇರಣೆ ನೀಡುವುದಾಗಿದೆ.ತಂಬಾಕು ಸಂಪನ್ಮೂಲಗಳು ಪರಿಸರ ವ್ಯವಸ್ಥೆಗಳ ಮೇಲೆ ಅನಗತ್ಯ ಒತ್ತಡವನ್ನು ಹೇರುತ್ತಿವೆ. ತಂಬಾಕು ಪ್ರತಿ ವರ್ಷ 8 ಮಿಲಿಯನ್‌ಗಿಂತಲೂ ಹೆಚ್ಚು ಜನರನ್ನು ಕೊಲ್ಲುತ್ತದೆ ಮತ್ತು ನಮ್ಮ ಪರಿಸರವನ್ನು ನಾಶಪಡಿಸುತ್ತದೆ, ಕೃಷಿ, ಉತ್ಪಾದನೆ, ವಿತರಣೆ, ಬಳಕೆ ಮತ್ತು ಗ್ರಾಹಕ ನಂತರದ ತ್ಯಾಜ್ಯದ ಮೂಲಕ ಮಾನವನ ಆರೋಗ್ಯಕ್ಕೆ ಮತ್ತಷ್ಟು ಹಾನಿ ಮಾಡುತ್ತದೆ ಎಂದರು.
ಆರೋಗ್ಯ ಮತ್ತು ಆರೋಗ್ಯಕರ ಜೀವನ ಭವಿಷ್ಯದ ಪೀಳಿಗೆಯನ್ನು ರಕ್ಷಿಸಲು ಈ ದಿನವನ್ನು ಆಚರಿಸಲು ಮಹತ್ವ ನೀಡಬೇಕು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆ ಕಳಕಳಿಯಾಗಿದೆ.ಈ ನಿಟ್ಟಿನಲ್ಲಿ ತಂಬಾಕು ಸೇವನೆಯಿಂದ ಆರೋಗ್ಯದ ಮೇಲೆ ಅನೇಕ ದುಷ್ಪರಿಣಾಮ
ಬೀರುತ್ತವೆ. ಯಾರು ದುಶ್ಚಟಗಳಿಗೆ ಬಲಿಯಾಗಬಾರದು. ವಿದ್ಯಾರ್ಥಿ ದೆಸೆಯಲ್ಲಿ ಉತ್ತಮ ಅಭ್ಯಾಸ ರೂಢಿಸಿಕೊಳ್ಳಬೇಕು. ಸಿಗರೇಟ್, ಗುಟ್ಕಾ ಸೇವನೆಯಿಂದ ಕ್ಯಾನ್ಸರ್‌ನಂತಹ ಸಾವಿಗೆ ತಂದೊಡ್ದುವ ಕಾಯಿಲೆ ಬರುವ ಸಾಧ್ಯತೆ ಹೆಚ್ಚಾಗಿರುತ್ತದೆ.ತಂಬಾಕು ಸೇವನೆಯು ಮನುಷ್ಯನ ಮೇಲೆ ಉಂಟುಮಾಡುವ ದುಷ್ಪರಿಣಾಮಗಳನ್ನು ಯುವ ಸಮುದಾಯಕ್ಕೆ ಮನಮುಟ್ಟುವಂತೆ ತಿಳಿಸಿ ಹೇಳಬೇಕಾಗಿರುವುದು ಇಂದಿನ ದಿನಗಳಲ್ಲಿ ಅಗತ್ಯವಾಗಿದೆ. ತಂಬಾಕು ಸೇವನೆಯಿಂದ ಯುವ ಪೀಳಿಗೆಯನ್ನು ರಕ್ಷಿಸುವುದು ಹೇಗೆ ಎಂಬ ಬಗ್ಗೆ ಯೋಜನೆಗಳನ್ನು ರೂಪಿಸುವುದರ ಜತೆಗೆ ಅವರಲ್ಲಿ ಈ ಬಗ್ಗೆ ಅರಿವು ಮೂಡಿಸಿ, ತಂಬಾಕು ನಿಯಂತ್ರಣದ ವಿಚಾರದಲ್ಲಿ ನೂತನ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಸಮಾಜ ಒಟ್ಟಾಗಿ ಪಣ ತೊಡಬೇಕಾಗಿದೆ ಎಂದು ಸಂಗಮೇಶ ಎನ್ ಜವಾದಿ ತಿಳಿಸಿದರು.
ಕೃಷಿ ಮೇಲ್ವಿಚಾರಕ ಸಿದ್ದು ಪೂಜಾರಿ ಮಾತನಾಡಿ
ಪ್ರತಿ ವರ್ಷ ಮೇ 31 ರಂದು, ವಿಶ್ವ ಆರೋಗ್ಯ ಸಂಸ್ಥೆಯು ತಂಬಾಕು ಮತ್ತು ಅದರ ಉತ್ಪನ್ನದ ಸೇವನೆಯಿಂದ ಉಂಟಾಗುವ ಅಪಾಯ ಮತ್ತು ಕುಟುಂಬ, ಸಮಾಜ ಮತ್ತು ಪರಿಸರದ ಮೇಲೆ ಅದರ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು ವಿಶ್ವ ತಂಬಾಕು ರಹಿತ ದಿನವನ್ನು ಆಯೋಜಿಸುತ್ತದೆ. ವಿಶ್ವ ‘ತಂಬಾಕು ರಹಿತ ದಿನ’ ವನ್ನು ನಾವೆಲ್ಲರೂ ಸೇರಿ ಆಚರಿಸುವ ಮೂಲಕ ಪರಿಸರಕ್ಕೂ ನಿರಾಳ ಭಾವ ನೀಡಬೇಕು. ಪ್ರತಿಯೊಬ್ಬರು ತಂಬಾಕು ಉತ್ಪನ್ನಗಳಿಂದ ಆಗುತ್ತಿರುವ ದುಷ್ಪರಿಣಾಮಗಳ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ಈ ಮೂಲಕ ನೆಮ್ಮದಿಯ ಜೀವನ ಸಾಗಿಸಬೇಕೆಂದು ಹೇಳಿದರು.
ಚಿಟಗುಪ್ಪ ವಲಯ ಮೇಲ್ವಿಚಾರಕ ನಾಗಶೆಟ್ಟಿ ಡೋರನಳ್ಳಿ ಸರ್ವರನ್ನು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.
ಸೇವಾ ಮಹಿಳಾ ಪ್ರತಿನಿಧಿ ಪಲ್ಲವಿ ಪಾಟೀಲ ವಂದಿಸಿದರು.
ಕಾರ್ಯಕ್ರಮದಲ್ಲಿ ಶಾಂತಾ ಆನಂದರಾಜ ಸೇರಿದಂತೆ ಮಹಿಳಾ ಪ್ರಮುಖರು, ಗಣ್ಯರು, ನಾಗರಿಕರು, ಮಾತೆಯರು, ವಿಧ್ಯಾರ್ಥಿಗಳು ಹಾಜರಿದ್ದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
