ಸೇವಾ ಕಾರ್ಯ ದೊಂದಿಗೆ ಬಸವ ಜಯಂತಿ ಆಚರಣೆ

Apr 19, 2026 - 23:29
 0  8
ಸೇವಾ ಕಾರ್ಯ ದೊಂದಿಗೆ ಬಸವ ಜಯಂತಿ  ಆಚರಣೆ
ಸುದ್ದಿ ಕಿರಣ ನ್ಯೂಸ್ ಡೆಸ್ಕ್

ಬೆಂಗಳೂರು ನಗರದ: ಜೆ.ಪಿ. ನಗರದಲ್ಲಿರುವ ಶ್ರೀ ಪೇಜಾವರ ಸಾರ್ವಜನಿಕ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿ ಬಂಧುಗಳಿಗೆ ಎಸ್ ಪ್ರಕಾಶ್ ಪ್ರಿಯಾದರ್ಶನ ಸ್ನೇಹ ಬಳಗದ ವತಿಯಿಂದ ಡ್ರೈ ಫ್ರೂಟ್ಸ್,ಹಣ್ಣು - ಹಂಪಲನ್ನು ವಿತರಿಸುವ ಸೇವಾ ಕಾರ್ಯದೊಂದಿಗೆ ಬಸವ ಜಯಂತಿಯನ್ನು ಸ್ನೇಹ ಬಳಗದಿಂದ ಅರ್ಥಪೂರ್ಣವಾಗಿ ಆಚರಿಸಲಾಯಿತು.

 ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅನುದಾನ ರಹಿತ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಾಜಶೇಖರ ಮೂರ್ತಿ 'ದಯವಿಲ್ಲದ ಧರ್ಮವವುದಯ್ಯ, ದಯವೇ ಧರ್ಮದ ಮೂಲವಯ್ಯ ಎಂದು ಸಾರಿ ವಚನ ಸಾಹಿತ್ಯಕ್ಕೆ ಚಳುವಳಿಯ ರೂಪ ಕೊಟ್ಟು ಸಾಮಾಜಿಕ ತಾರತಮ್ಯ,ಜಾತಿ ವ್ಯವಸ್ಥೆ, ಶೋಷಣೆ ಮೂಢನಂಬಿಕೆಯ ವಿರುದ್ಧ ಸಮರ ಸಾರಿ ಸಮಾಜದ ಅಂಕು - ಡೊಂಕುಗಳನ್ನು ತಿದ್ದಿದ ಶ್ರೀ ಜಗಜ್ಯೋತಿ ಬಸವೇಶ್ವರರ ಜಯಂತಿ ಆಚರಣೆಯನ್ನು ಸೇವಾ ಕಾರ್ಯದ ಮೂಲಕ ಆಚರಿಸುತ್ತಿರುವ ಸ್ನೇಹ ಬಳಗದ ಕಾರ್ಯ ಶ್ಲಾಘನೀಯ ಎಂದು ತಿಳಿಸಿದರು

ನಂತರ ಮಾತನಾಡಿದ ಜೆ.ಡಿ.ಎಸ್. ಮುಖಂಡ ಪ್ರಕಾಶ್ ಪ್ರಿಯಾದರ್ಶನ್ ಭಾರತೀಯ ಸಂಸ್ಕೃತಿಯ ಮಹಾನ್ ಚಿಂತಕರು, ಸಮಾಜ ಸುಧಾರಕರು, ಸಮಾನತೆಯ ಸಂದೇಶ ಸಾರಿದ ಧರ್ಮ ಗುರು ಹಾಗೂ ಶರಣ ಚಳುವಳಿಯ ಮಹಾ ನಾಯಕರಾಗಿದ್ದ ಬಸವಣ್ಣನ ಜಯಂತಿಯನ್ನು ಆಚರಿಸುವುದು ಅವರನ್ನು ಗೌರವ ಪೂರ್ವಕವಾಗಿ ಸ್ಮರಿಸುವುದು ಅವರ ತತ್ವ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಇಂದಿನ ಯುವ ಪೀಳಿಗೆಗೆ ಅವರ ಸಂದೇಶಗಳನ್ನು ತಿಳಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದರು.

ಈ ಸಂದರ್ಭದಲ್ಲಿ ಅನುದಾನ ರಹಿತ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪಿ.ಎಸ್. ರಾಜಶೇಖರ ಮೂರ್ತಿ ಜೆ.ಡಿ.ಎಸ್. ಮುಖಂಡ ಎಸ್ ಪ್ರಕಾಶ್ ಪ್ರಿಯಾದರ್ಶನ್, ಪತ್ರಿಕ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಹೋಮದೇವ್, ಬ್ಲಡ್ ಆನ್ ಕಾಲ್ ಕ್ಲಬ್, ಮೈಸೂರು ಸಂಸ್ಥಾಪಕ ದೇವೇಂದ್ರ ಪರಿಹಾರಿಯಾ, ಸಮಾಜ ಸೇವಕಿ ವಿದ್ಯಾ, ಅಶ್ವಿನಿ , ರಾಜೇಶ್ ಕುಮಾರ್,ಮಹೇಶ, ದತ್ತ ನಿಲಯ ಪಾಲಕರಾದ ಪುಟ್ಟಣ್ಣ ಸತೀಶ್ ಇನ್ನಿತರರು ಇದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456