ಹಿರಿಯ ಕನ್ನಡ ಹೋರಾಟಗಾರರಿಗೆ ನಿವೇಶನನೀಡಲು ಸರ್ಕಾರಕ್ಕೆ ತೇಜಸ್ವಿ ಮನವಿ

Oct 31, 2025 - 13:03
 0  5
ಹಿರಿಯ ಕನ್ನಡ ಹೋರಾಟಗಾರರಿಗೆ ನಿವೇಶನನೀಡಲು ಸರ್ಕಾರಕ್ಕೆ ತೇಜಸ್ವಿ ಮನವಿ

  ಮೈಸೂರು: ಹಿರಿಯ ಕನ್ನಡ ಹೋರಾಟಗಾರರಿಗೆ ಸರ್ಕಾರದ ವತಿಯಿಂದ ನಿವೇಶನ ನೀಡಬೇಕೆಂದು ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗಸ್ವಾಮಿ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ನಾಡು ನುಡಿ ನೆಲ ಜಲ ಭಾಷೆ ವಿಚಾರದಲ್ಲಿ ಸೇವೆ ಸಲ್ಲಿಸಿ ಎಲೆ ಮರೆ ಕಾಯಿಯಂತೆ ಇಂದಿಗೂ ಸಹ ಬಾಡಿಗೆ ಮನೆಯಲ್ಲಿ ವಾಸವಿರುವ ಮೈಸೂರಿನ ಹಿರಿಯ ಕನ್ನಡಪರ ಹೋರಾಟಗಾರರನ್ನು ಗುರುತಿಸಿ ರಾಜ್ಯ ಸರ್ಕಾರ ಕೂಡಲೇ ನಿವೇಶನಗಳನ್ನು ನೀಡಬೇಕು ಎಂದು ಅವರು ಕೋರಿದ್ದಾರೆ‌.

ಗಣನೀಯವಾಗಿ ಸೇವೆ ಸಲ್ಲಿಸಿ ಇಡೀ ಜೀವನವನ್ನೇ ಕನ್ನಡಕ್ಕಾಗಿ ತ್ಯಾಗ ಮಾಡಿದ ಅನೇಕ ಹೋರಾಟಗಾರರು ನಮ್ಮ ಮೈಸೂರಿನಲ್ಲಿ ವಾಸಿಸುತ್ತಿದ್ದಾರೆ,೭೦ ನೇ ಕನ್ನಡ ರಾಜ್ಯೋತ್ಸವದ ಈ ಸಂದರ್ಭದಲ್ಲಿ ರಾಜ್ಯ ಸರ್ಕಾರ ಅವರುಗಳನ್ನು ಗುರುತಿಸಬೇಕೆಂದು ಒತ್ತಾಯಿಸಿದ್ದಾರೆ.

ಅಂತಹವರನ್ನು ಗುರುತಿಸಿ ಮೈಸೂರಿನ ಪ್ರಮುಖ ಭಾಗಗಳಲ್ಲಿ ನೀವೇಶನ ನಿಡಿದರೆ ಸರ್ಕಾರಕ್ಕೆ ಹೆಚ್ಚು ಕೀರ್ತಿ ಸಲ್ಲುತ್ತದೆ ಮತ್ತು ಕನ್ನಡ ಹೋರಾಟಗಾರರಿಗೆ ಗೌರವ ಕೊಟ್ಟಂತೆ ಆಗುತ್ತದೆ ಎಂದು ತೇಜಸ್ವಿ ಹೇಳಿದ್ದಾರೆ.

೭೦ ನೇ ಕನ್ನಡ ರಾಜ್ಯೋತ್ಸವದ ಈ ಶುಭ ಸಂದರ್ಭದಲ್ಲಿ ರಾಜ್ಯ ಸರ್ಕಾರ ಹಿರಿಯ ಕನ್ನಡಪರ ಹೋರಾಟಗಾರರನ್ನು ಗುರುತಿಸಿ ನೀವೇಶನಗಳನ್ನು ನೀಡ ಬೇಕೆಂದು ರಾಜ್ಯ ಸರ್ಕಾರಕ್ಕೆ ಕನ್ನಡ ಕ್ರಾಂತಿದಳ ಸಂಘಟನೆಯ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗ ಸ್ವಾಮಿ ಮನವಿ ಮಾಡಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456