ಹೊಸದಾಗಿ ಜಾರಿಗೆ ತಂದಿರುವ ನಾಲ್ಕು ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಬೇಕು
ಹೊಸದಾಗಿ ಜಾರಿಗೆ ತಂದಿರುವ ನಾಲ್ಕು ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಬೇಕು, ವಿಬಿ ಜಿ ರಾಮ್ ಜಿ ಕಾಯ್ದೆ ಹಿಂಪಡೆದು ಮೊದಲಿದ್ದ ಕೃಷಿಕೂಲಿ ಕಾರ್ಮಿಕ ಸ್ನೇಹಿ ನರೇಗಾ ಯೋಜನೆಯನ್ನು ಮರುಸ್ಥಾಪಿಸಬೇಕು, ಸರಕಾರಿ ಬ್ಯಾಂಕುಗಳ ವಿಲೀನ ಮತ್ತು ಖಾಸಗೀಕರಣ ಕೈಬಿಡಬೇಕು, ಭೂಸ್ವಾಧೀನ ಕಾಯ್ದೆಯನ್ನು ಹಿಂಪಡೆಯಬೇಕು, ಭೂಸುಧಾರಣಾ, ಎಪಿಎಂಸಿ, ಜಾನುವಾರು ಸಂರಕ್ಷಣಾ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯಬೇಕು.
ವಿದ್ಯುಚ್ಛಕ್ತಿ ಖಾಸಗಿಕರಣ ಪ್ರಸ್ತಾಪವನ್ನು ಕೈಬಿಡಬೇಕು, ಬೀಜ ಕಾಯ್ದೆಯನ್ನು ಹಿಂಪಡೆಯಬೇಕು, ವಿಮಾ ತಿದ್ದುಪಡಿ ಕಾಯ್ದೆ, ಶಾಂತಿ ಕಾಯ್ದೆಯನ್ನು ರದ್ದುಗೊಳಿಸಬೇಕು, ಕಾರ್ಮಿಕರಿಗೆ ಕನಿಷ್ಠ ವೇತನ ಹೆಚ್ಚಳ ಮಾಡುವ ಅಧಿಸೂಚನೆ ಹೊರಡಿಸಬೇಕು ಎನ್ನುವ ಹತ್ತು ಹಲವು ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಸರಕಾರವನ್ನು ಆಗ್ರಹಿಸಲು ಕೇಂದ್ರ ಕಾರ್ಮಿಕ ಸಂಘಟನೆಗಳು,
ಸಂಯುಕ್ತ ಕಿಸಾನ್ ಮೋರ್ಚಾದ ರೈತ ಸಂಘಟನೆಗಳು, ಬ್ಯಾಂಕ್-ವಿಮೆ-ಕಾರ್ಖಾನೆಗಳು ಸೇರಿದಂತೆ ಸ್ವತಂತ್ರ ಸಂಘಟನೆಗಳು ಒಂದು ದಿನದ ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಿದ್ದವು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
