11 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರಿಸಿಕೊಂಡಿದ್ದ ಆರೋಪಿಯ ಬಂಧನ.

11 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರಿಸಿಕೊಂಡಿದ್ದ ಆರೋಪಿಯ ಬಂಧನ.

      ಕೆಜಿಎಫ್., ಆ. 20: ಕೆಜಿಎಫ್ ಪೊಲೀಸ್ ಜಿಲ್ಲೆಯಲ್ಲಿ ಕಳೆದ 11 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕ್ಯಾಸಂಬಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಕೆ.ಜಿ.ಎಫ್ ಪೊಲೀಸ್ ಜಿಲ್ಲೆಯ ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ 2015 ನೇ ಸಾಲಿನಲ್ಲಿ ಅರುಣ್ ಕುಮಾರ್ ರೆಡ್ಡಿ ಬಿನ್ ನಾರಾಯಣರೆಡ್ಡಿ, 33 ವರ್ಷ, ತೂಕಲ್ ರಾಮಪುರ, ಕೆಜಿಎಫ್ ತಾಲೂಕು ರವರ ವಿರುದ್ಧ ಮೊ.ಸಂ 11/2015 ರಿತ್ಯಾ ಅಪರಾಧಿಕ ಒಳಸಂಚು ಹಾಗೂ ಸುಳ್ಳು ಸಾಕ್ಷö್ಯ (ದೃಶ್ಯ) ಸೃಜನೆ ಪ್ರಕರಣ ದಾಖಲಾಗಿದ್ದು, ಈ ಸಂಬAಧ ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯ ತನಿಖಾಧಿಕಾರಿಯವರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದು, ನಂತರ ಜಾಮೀನಿನ ಮೇಲೆ ಹೊರಬಂದ ಆರೋಪಿ ಅರುಣ್ ಕುಮಾರ್ ರೆಡ್ಡಿ ಅಂದಿನಿAದ ನ್ಯಾಯಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದು ನ್ಯಾಯಾಲಯವು ಆರೋಪಿಯ ವಿರುದ್ಧ ದಸ್ತಗಿರಿ ವಾರಂಟ್ ಹೊರಡಿಸಿರುತ್ತದೆ.

ನಂತರ ಪೊಲೀಸ್ ಠಾಣೆಗಳ ಮುರುವಿಂಗಡಣೆ ನಂತರ ಈ ಪ್ರಕರಣವು ಕ್ಯಾಸಂಬಳ್ಳಿ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದು ಕ್ಯಾಸಂಬಳ್ಳಿ ಪೊಲೀಸರು ಭಾತ್ಮೀದಾರರಿಂದ ಮಾಹಿತಿ ಸಂಗ್ರಹಿಸಿ ತಾಂತ್ರಿಕ ತನಿಖಾ ವಿಧಾನಗಳನ್ನು ಅನುಸರಿಸಿ ಆರೋಪಿಯು ಚೆನ್ನೆöÊ ನಗರದಲ್ಲಿ ಇರುವುದಾಗಿ ಖಚಿತ ಮಾಹಿತಿಯನ್ನು ಸಂಗ್ರಹಿಸಿ ಆ.17 ರಂದು ಆರೋಪಿಯನ್ನು ಚೆನ್ನೆöÊ ನಗರದಲ್ಲಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುತ್ತಾರೆ.

ಡಿವೈಎಸ್‌ಪಿ ವಿ.ಲಕ್ಷö್ಮಯ್ಯ ಮತ್ತು ಬೇತಮಂಗಲ ಸಿಪಿಐ ಜಗದೀಶ್ ಎಸ್.ಆರ್ ರವರ ಮಾರ್ಗದರ್ಶನದಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಕ್ಯಾಸಂಬಳ್ಳಿ ಪೊಲೀಸ್ ಠಾಣೆ ಪಿಎಸ್‌ಐ ಸಂಗಮೇಶ್ ಕೋಲ್ಹಾರ್, ದೇವರಾಜ ಜಿ ಮತ್ತು ಸಿಬ್ಬಂದಿಯವರಾದ ಚಂದ್ರಶೇಕರ್, ಧನಸಿಂಗ್ ರವರ ತಂಡ ಯಶಸ್ವಿಯಾಗಿದ್ದು ಇವರ ಉತ್ತಮ ಕೆಲಸವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಾಂಶು ರಜಪೂತ್ ರವರು ಪ್ರಶಂಶಿಸಿದ್ದಾರೆ.