15 ವರ್ಷಗಳ ನಿರಾಶ್ರಯ ಬದುಕು, ಬಿರುಗಾಳಿಗೆ ಚೂರಾದ ಶೆಡ್‌ಗಳು: ಇದ್ದಲಗಿ ಜನರ ಅಳಲು: ‘ಈಗಾದರೂ ನ್ಯಾಯ ಸಿಗುತ್ತದೆ ಯೇ?’”

May 7, 2026 - 14:13
 0  3
15 ವರ್ಷಗಳ ನಿರಾಶ್ರಯ ಬದುಕು, ಬಿರುಗಾಳಿಗೆ ಚೂರಾದ ಶೆಡ್‌ಗಳು: ಇದ್ದಲಗಿ ಜನರ ಅಳಲು: ‘ಈಗಾದರೂ ನ್ಯಾಯ ಸಿಗುತ್ತದೆ ಯೇ?’”

       ಬಾಗಲಕೋಟ ಜಿಲ್ಲೆಯ ಹುನಗುಂದ ತಾಲೂಕಿನ ಇದ್ದಲಗಿ ಗ್ರಾಮವು ಕೃಷ್ಣಾ ನದಿ ಬಸವಸಾಗರ ಹಿನ್ನೀರಿನಿಂದ ಸುಮಾರು 15 ವರ್ಷಗಳ ಹಿಂದೆ ಮುಳುಗಡೆಯಾಗಿ, ಗ್ರಾಮಸ್ಥರು ತಮ್ಮ ಮನೆಗಳನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಈ ದೀರ್ಘಕಾಲದಿಂದ ಸರ್ಕಾರ ನೀಡಿದ ತಾತ್ಕಾಲಿಕ ಶೆಡ್‌ಗಳಲ್ಲೇ ಬದುಕು ಕಟ್ಟಿಕೊಂಡಿರುವ ಜನರು ದಿನನಿತ್ಯ ಸಂಕಷ್ಟ ಅನುಭವಿಸುತ್ತಿದ್ದಾರೆ.

ಇತ್ತೀಚೆಗೆ ಬಂದ ಭಾರೀ ಬಿರುಗಾಳಿ ಮತ್ತು ಆಲಿಕಲ್ಲು ಮಳೆಯಿಂದ ಈ ಶೆಡ್‌ಗಳು ಗಂಭೀರವಾಗಿ ಹಾನಿಗೊಳಗಾಗಿದ್ದು, ಈಗಾಗಲೇ ಸಂಕಷ್ಟದಲ್ಲಿದ್ದ ಜನರ ಬದುಕು ಮತ್ತಷ್ಟು ದುಸ್ಥಿತಿಗೆ ತಳ್ಳಲ್ಪಟ್ಟಿದೆ. ಮಳೆಯ ನಡುವೆ ಕುಸಿಯುವ ಭೀತಿಯಲ್ಲಿರುವ ಶೆಡ್‌ಗಳಲ್ಲಿ ವಾಸಿಸುವುದು ಜೀವಕ್ಕೆ ಅಪಾಯಕಾರಿಯಾಗಿದೆ. ಮಹಿಳೆಯರು, ಮಕ್ಕಳು ಹಾಗೂ ವೃದ್ಧರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ.

ಈ ಹಿನ್ನೆಲೆದಲ್ಲಿ ಗ್ರಾಮಸ್ಥರು ತಮ್ಮ ನೋವನ್ನು ಸರ್ಕಾರದ ಗಮನಕ್ಕೆ ತರುವ ಉದ್ದೇಶದಿಂದ ಧಾರಣಿ ಸತ್ಯಾಗ್ರಹ ನಡೆಸಿ, ತಾಲೂಕು ತಹಶೀಲ್ದಾರ್ ಹಾಗೂ ಸಿಇಓ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಇದೇ ವೇಳೆ ಅಧಿಕಾರಿಗಳು ಹಳ್ಳಿಗೆ ಭೇಟಿ ನೀಡಿ, ಜನರ ಜೀವನ ಪರಿಸ್ಥಿತಿ ಹಾಗೂ ಅವರು ವಾಸಿಸುತ್ತಿರುವ ಶೆಡ್‌ಗಳ ದುಸ್ಥಿತಿಯನ್ನು ಸ್ವತಃ ವೀಕ್ಷಿಸಿ, ಎಲ್ಲ ಸಮಸ್ಯೆಗಳನ್ನು ಶೀಘ್ರದಲ್ಲಿ ಸರಿಪಡಿಸುವುದಾಗಿ ಭರವಸೆ ನೀಡಿದರು.

ಶೆಡ್‌ಗಳ ತುರ್ತು ದುರಸ್ತಿ ಹಾಗೂ ಶಾಶ್ವತ ವಸತಿ ವ್ಯವಸ್ಥೆ ಕಲ್ಪಿಸುವಂತೆ ಗ್ರಾಮಸ್ಥರು ಆಗ್ರಹಿಸುತ್ತಿದ್ದು, ಅಧಿಕಾರಿಗಳ ಭರವಸೆ ಕಾರ್ಯರೂಪಕ್ಕೆ ಬರಬಹುದೇ ಎಂಬುದು ಈಗ ಎಲ್ಲರ ಕಣ್ಣಿನಲ್ಲಿ ಕಾದಿರುವ ಪ್ರಶ್ನೆಯಾಗಿದೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456