17.55 ಕೋಟಿ ಮೌಲ್ಯದ ಸರ್ಕಾರಿ ಜಮೀನು ಅಕ್ರಮ ಒತ್ತುವರಿ ತೆರವು : ಜಿಲ್ಲಾಧಿಕಾರಿ ಜಿ.ಜಗದೀಶ

Mar 9, 2026 - 16:16
 0  13
17.55 ಕೋಟಿ ಮೌಲ್ಯದ  ಸರ್ಕಾರಿ  ಜಮೀನು ಅಕ್ರಮ ಒತ್ತುವರಿ ತೆರವು : ಜಿಲ್ಲಾಧಿಕಾರಿ ಜಿ.ಜಗದೀಶ
ಸುದ್ದಿ ಕಿರಣ ನ್ಯೂಸ್ ಡೆಸ್ಕ್

ಬೆಂಗಳೂರು :

  ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ರೂ. 17.55 ಕೋಟಿ ಅಂದಾಜು ಮೌಲ್ಯದ ಒಟ್ಟು 02 ಎಕರೆ 0.19 ಗುಂಟೆ ಸರ್ಕಾರಿ ಜಮೀನನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ.ಜಗದೀಶ. ಅವರ ನೇತೃತ್ವದಲ್ಲಿ ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಯಿತು.

ಇಂದು ಬೆಂಗಳೂರು ನಗರ ಜಿಲ್ಲೆಯಾದ್ಯಂತ ವಿವಿಧ ತಾಲ್ಲೂಕುಗಳ ತಹಶೀಲ್ದಾರ್ ಗಳು ತಮ್ಮ ವ್ಯಾಪ್ತಿಯಲ್ಲಿ ಅಕ್ರಮವಾಗಿ ಒತ್ತುವರಿಯಾಗಿದ್ದ ಸರ್ಕಾರಿ ಗೋಮಾಳ, ಕುಂಟೆ, ಬಂಡಿದಾರಿ, ಸ್ಮಶಾನ, ಸರ್ಕಾರಿ ಕಟ್ಟೆ, ಸರ್ಕಾರಿ ಖರಾಬು, ಹಾಗೂ ಗುಂಡು ತಪ್ಪು ಜಾಗಗಳಿಗೆ ಭೇಟಿ ನೀಡಿ ತೆರವು ಕಾರ್ಯಾಚರಣೆ ಕೈಗೊಂಡರು.

ಬೆಂಗಳೂರು ಪೂರ್ವ ತಾಲ್ಲೂಕಿನ ಕೆ ಆರ್ ಪುರಂ ಹೋಬಳಿಯ ಹಗದೂರು ಗ್ರಾಮದ ಸ.ನಂ 19 ರ ಗೋಮಾಳ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.10 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ 5.00 ಕೋಟಿಗಳಾಗಿರುತ್ತದೆ. ಬಿದರಹಳ್ಳಿ ಹೋಬಳಿಯ ಬಿದರಹಳ್ಳಿ ಗ್ರಾಮದ ಸ.ನಂ 65 ರ ಕುಂಟೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.06 ಗುಂಟೆಗಳಾಗಿದ್ದು 

ಅಂದಾಜು ಮೌಲ್ಯ ರೂ 0.50 ಲಕ್ಷಗಳಾಗಿರುತ್ತದೆ. ಬಿದರಹಳ್ಳಿ ಹೋಬಳಿಯ ವಡೇರಹಳ್ಳಿ ಗ್ರಾಮದ ಸ.ನಂ 49/1, 49/2, 50/1, 50/4, 50/5 ರ ಬಂಡಿದಾರಿ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.17 ಗುಂಟೆಗಳಾಗಿದ್ದು 

ಅಂದಾಜು ಮೌಲ್ಯ ರೂ 5.00 ಕೋಟಿಗಳಾಗಿರುತ್ತದೆ. 

ಬೆಂಗಳೂರು ದಕ್ಷಿಣ ತಾಲ್ಲೂಕಿನ ಬೇಗೂರು ಹೋಬಳಿಯ ಬಸವನಪುರ ಗ್ರಾಮದ ಸ.ನಂ 35 ರ ಸ್ಮಶಾನ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.05 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ 0.85 ಲಕ್ಷಗಳಾಗಿರುತ್ತದೆ. ತಾವರೆಕೆರೆ ಹೋಬಳಿಯ ಬೈಚಗುಪ್ಪೆ ಗ್ರಾಮದ ಸ.ನಂ 23 ರ ಸರ್ಕಾರಿ ಕಟ್ಟೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.05 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ 0.75 ಲಕ್ಷಗಳಾಗಿರುತ್ತದೆ. ಕೆಂಗೇರಿ ಹೋಬಳಿಯ ವಳಗೇರಹಳ್ಳಿ ಗ್ರಾಮದ ಸ.ನಂ 16 ರ ಸರ್ಕಾರಿ ಖರಾಬು ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.20 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ 2.65 ಕೋಟಿಗಳಾಗಿರುತ್ತದೆ. 

ಬೆಂಗಳೂರು ಉತ್ತರ ತಾಲ್ಲೂಕಿನ ದಾಸನಪುರ ಹೋಬಳಿಯ ವಡ್ಡರಹಳ್ಳಿ ಗ್ರಾಮದ ಸ.ನಂ 46 ರ ಸರ್ಕಾರಿ ಕಟ್ಟೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.20 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ 2 ಕೋಟಿಗಳಾಗಿರುತ್ತದೆ. 

ಯಲಹಂಕ ತಾಲ್ಲೂಕಿನ ಹೆಸರಘಟ್ಟ-2 ಹೋಬಳಿಯ ಶಿವಕೋಟೆ ಗ್ರಾಮದ ಸ.ನಂ 40ರ ಗುಂಡು ತೋಪು ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.16 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ 0.80 ಲಕ್ಷಗಳಾಗಿರುತ್ತದೆ. 

ಇದೇ ಸಂದರ್ಭದಲ್ಲಿ ಬೆಂಗಳೂರು ನಗರದ ವಿವಿಧ ತಾಲ್ಲೂಕಿನ ತಹಶೀಲ್ದಾರ್ ರವರು ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯ ಸಿಬ್ಬಂದಿಗಳು, ಉಪಸ್ಥಿತರಿದ್ದರು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456