34 ವರ್ಷಗಳಿಂದ ತಲೆಮರಿಸಿಕೊಂಡಿದ್ದ ಆರೋಪಿಯ ಬಂಧನ

May 19, 2026 - 16:55
 0  1
34 ವರ್ಷಗಳಿಂದ ತಲೆಮರಿಸಿಕೊಂಡಿದ್ದ ಆರೋಪಿಯ ಬಂಧನ

     ಕೆಜಿಎಫ್, ಮೇ. 19: ಕೆಜಿಎಫ್ ಪೊಲೀಸ್ ಜಿಲ್ಲೆಯಲ್ಲಿ ಕಳೆದ 34 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಉರಿಗಾಂ ಪೊಲೀಸರು ಯಶಸ್ವಿಯಾಗಿದ್ದಾರೆ.

ಕೆ.ಜಿ.ಎಫ್ ಪೊಲೀಸ್ ಜಿಲ್ಲೆಯ ಉರಿಗಾಂ ಪೊಲೀಸ್ ಠಾಣೆಯಲ್ಲಿ 1992 ನೇ ಸಾಲಿನಲ್ಲಿ ರವಿ ಬಿನ್ ಸೆಲ್ವರಾಜ್, ವಯಸ್ಸು 62 ವರ್ಷ, ಸೌತ್ ಟ್ಯಾಂಕ್ ಬ್ಲಾಕ್, ಕೋರಮಂಡಲ್, ಕೆಜಿಎಫ್ ರವರ ವಿರುದ್ಧ ಮೊ.ಸಂ 16/1992 ರಿತ್ಯಾ ಕಳವು ಪ್ರಕರಣ ದಾಖಲಾಗಿದ್ದು, ಈ ಸಂಬAಧ ಉರಿಗಾಂ ಪೊಲೀಸ್ ಠಾಣೆಯ ತನಿಖಾಧಿಕಾರಿಯವರು ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದು, ಅಂದಿನಿAದ ಆರೋಪಿಯಾದ ರವಿ ಬಿನ್ ಸೆಲ್ವರಾಜ್ ನ್ಯಾಯಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದು ನ್ಯಾಯಾಲಯವು ಆರೋಪಿಯ ವಿರುದ್ಧ ದಸ್ತಗಿರಿ ವಾರಂಟ್ ಹೊರಡಿಸಿರುತ್ತದೆ.

ಆರೋಪಿಯ ಇರುವಿಕೆಯ ಬಗ್ಗೆ ತನಿಖೆ ಮಾಡಿ ಭಾತ್ಮೀದಾರರಿಂದ ಮಾಹಿತಿ ಸಂಗ್ರಹಿಸಿ ಆರೋಪಿಯು ಬೆಂಗಳೂರಿನ ಮಾಗಡಿ ರಸ್ತೆಯಲ್ಲಿ ಸ್ಥಳಿಯ ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ ಇರುವುದಾಗಿ ಮಾಹಿತಿ ಬಂದಿದ್ದರ ಮೇರೆಗೆ ದಿನಾಂಕ 15-05-2026 ರಂದು ನಿರಾಶ್ರಿತರ ಪರಿಹಾರ ಕೇಂದ್ರಕ್ಕೆ ಹೋಗಿ ಅಲ್ಲಿನ ಮುಖ್ಯಸ್ಥರಿಗೆ ವಿಚಾರವನ್ನು ತಿಳಿಸಿ ಅವರ ಅನುಮತಿಯನ್ನು ಪಡೆದುಕೊಂಡು ಸದರಿ ಕೇಂದ್ರದಲ್ಲಿದ್ದ ಆರೋಪಿ ರವಿ ಬಿನ್ ಸೆಲ್ವರಾಜ್ ರವರನ್ನು ವಿಚಾರಣೆ ಮಾಡಿದಾಗ ತಾನು 1992 ನೇ ಸಾಲಿನಲ್ಲಿ ಕಳ್ಳತನ ಕೇಸಿನಲ್ಲಿ ಭಾಗಿಯಾಗಿದ್ದುಕೊಂಡು ತಲೆಮರಿಸಿಕೊಂಡಿರುವುದಾಗಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದರ ಮೇರೆಗೆ ಸದರಿ ಆರೋಪಿಯನ್ನು ಮುಂದಿನ ಕ್ರಮಕ್ಕಾಗಿ ಠಾಣೆಯಲ್ಲಿ ಹಾಜರುಪಡಿಸಿ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುತ್ತಾರೆ.

ಡಿವೈಎಸ್‌ಪಿ ವಿ.ಲಕ್ಷö್ಮಯ್ಯ ಮತ್ತು ಉರಿಗಾಂ ಸಿಪಿಐ ಮಾರ್ಕೊಂಡಯ್ಯ ರವರ ಮಾರ್ಗದರ್ಶನದಲ್ಲಿ ಉರಿಗಾಂ ಪಿಎಸ್‌ಐ ಕೃಷ್ಣಮೂರ್ತಿ, ಎ.ಎಸ್.ಐ ಕೋನಪ್ಪ ರೆಡ್ಡಿ ಮತ್ತು ಅಂಜನಪ್ಪ ಯಶಸ್ವಿಯಾಗಿದ್ದು ಇವರ ಉತ್ತಮ ಕೆಲಸವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಾಂಶು ರಜಪೂತ್ ರವರು ಪ್ರಶಂಶಿಸಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456