48 ದಿನ ಕಾಲ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ ಯಶಸ್ವಿ ವಿದೂಷಿ ಡಾ. ಸ್ವಾತಿ ಪಿ ಭಾರದ್ವಾಜ್

Jul 29, 2025 - 15:54
 0  3
48 ದಿನ ಕಾಲ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ ಯಶಸ್ವಿ ವಿದೂಷಿ ಡಾ. ಸ್ವಾತಿ ಪಿ ಭಾರದ್ವಾಜ್

ಚನ್ನರಾಯಪಟ್ಟಣ: ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಗುಲಸಿಂದ ಗ್ರಾಮದಲ್ಲಿ  ನೂತನವಾಗಿ ಉದ್ಘಾಟನೆಗೊಂಡಿರುವ  ಶ್ರೀ ರಾಘವೇಂದ್ರ ಸ್ವಾಮಿ ಮಂದಿರ ದಲ್ಲಿ  ಜೂನ್ 6 ರಿಂದ  48 ದಿನಗಳ ಕಾಲ  ಮಂಡಲ ಪೂಜೆಯ ಅಂಗವಾಗಿ  ಪ್ರತಿ ದಿವಸ ಸಂಜೆ ಭಾರತೀಯ ಸಂಸ್ಕೃತಿಯ ಕಲೆಯ ಸಾಂಸ್ಕೃತಿಕ ಕಾರ್ಯಕ್ರಮವನ್ನು  ಆಯೋಜನೆಯನ್ನು  ಭಾರತೀಯ ಸಂಗೀತ ಮತ್ತು ನೃತ್ಯ ಕಲಾವಿದರ ಒಕ್ಕೂಟದ ಬೆಂಗಳೂರು ಹಾಗು ಮಂದಿರ ವ್ಯವಸ್ಥಾಪಕ ಧರ್ಮದರ್ಶಿಗಳಾದ ಶ್ರೀ ರಾಧಾಕೃಷ್ಣರವರ ಸಂಪೂರ್ಣ ಸಹಕಾರ ಪಡೆದು ಶ್ರೀ ರಾಘವೇಂದ್ರ ಸ್ವಾಮಿಗಳವರ ಪಾದಾರವಿಂದಕ್ಕೆ  ಸೇವಾ ರೂಪದಲ್ಲಿ  ದಾಸವಾಣಿ,  ಶಾಸ್ತ್ರೀಯ ಸಂಗೀತ ಹಾಗೂ ನೃತ್ಯ ಕಾರ್ಯಕ್ರಮವನ್ನು ಚೆನ್ನೈ ಪುಣೆ ಆಂಧ್ರ ಪ್ರದೇಶ್ ಹಾಗು ಕರ್ನಾಟಕದ  ವಿವಿಧ ಜಿಲ್ಲೆಗಳಿಂದ ಕಲಾವಿದರನ್ನು  ಆಯ್ಕೆ ಮಾಡಿ ಗ್ರಾಮೀಣ ಪ್ರದೇಶಕ್ಕೆ ಕರೆಸಿ ಭಾರತೀಯ ಸಂಸ್ಕೃತಿಯ ಕಲೆಯ ಪ್ರದರ್ಶನವನ್ನು  ಗ್ರಾಮೀಣ ಪ್ರದೇಶದ ಜನರಿಗೆ ಪರಿಚಯಪಡಿಸಿ ಶ್ರೀ ರಾಘವೇಂದ್ರ ಸ್ವಾಮಿಗಳ ಸೇವೆಯಲ್ಲಿ 270 ಕಲಾವಿದರಿಗೆ ವೇದಿಕೆ ಕಲ್ಪಿಸಿ ಕೊಟ್ಟು  ಮೊಟ್ಟ ಮೊದಲ ಬಾರಿಗೆ ಹಾಸನ ಜಿಲ್ಲೆಯಲ್ಲಿ 48 ದಿನಗಳ ಕಾಲ ಸಂಸ್ಕೃತಿಕ ಕಾರ್ಯಕ್ರಮವನ್ನು ನಿರಂತರವಾಗಿ ಆಯೋಜನೆ ಮಾಡುವ ಮೂಲಕ ಭಗವಂತನ ಸೇವೆಗೆ ಪಾತ್ರರಾಗಿರುವ ವಿದೂಷಿ ಡಾ. ಸ್ವಾತಿ ಪಿ ಭಾರದ್ವಾಜ್  ಸಂಚಾಲಕರು ಅಖಿಲ ಭಾರತೀಯ ಸಂಗೀತ ನೃತ್ಯ ಕಲಾವಿದರ ಒಕ್ಕೂಟ, ಕರ್ನಾಟಕ, ಈ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷರು ಹಾಗೂ ಹಿರಿಯ ವಿದ್ವತ್ ಕಲಾವಿದರು ಸೇರಿದಂತೆ ಹಲವಾರು ಪ್ರತಿಭಾವಂತ ಕಲಾವಿದರು ಗ್ರಾಮೀಣ ಪ್ರದೇಶಕ್ಕೆ ಬಂದು ತಮ್ಮ ಕಲೆಯನ್ನು ಪ್ರದರ್ಶನ ಮಾಡುವ ಮೂಲಕ ಹೆಚ್ಚು ಹೆಚ್ಚಿನ ಮೆರವ ನೀಡಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ 48 ದಿನಗಳ ಕಾಲ ನಡೆದ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಗುಲಸಿಂದ ಗ್ರಾಮದ ಸಮಸ್ತ ನಾಗರಿಕರು ಹರ್ಷ ವ್ಯಕ್ತಪಡಿಸಿದ್ದಾರೆ. ಭಾಗವಹಿಸಿದ ಎಲ್ಲಾ ಕಲಾವಿದರಿಗೂ ವಿಶೇಷ ದರ್ಶನದ ವ್ಯವಸ್ಥೆ ಪ್ರತಿ ದಿವಸ ಭೋಜನ ವ್ಯವಸ್ಥೆ,  ಪ್ರಶಸ್ತಿ ಪತ್ರ, ಫಲಕ ಹಾಗೂ ಭಗವಂತನ ಪ್ರಸಾದವನ್ನು ನೀಡಲಾಯಿತು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456