60 ನೇ ರಾಷ್ಟ್ರೀಯ ನೃತ್ಯೋತ್ಸವ ಕಾರ್ಯಕ್ರಮ

60 ನೇ ರಾಷ್ಟ್ರೀಯ ನೃತ್ಯೋತ್ಸವ ಕಾರ್ಯಕ್ರಮ

60 ನೇ ರಾಷ್ಟ್ರೀಯ ನೃತ್ಯೋತ್ಸವ ಕಾರ್ಯಕ್ರಮ

ಯಡಿಯೂರು:ಹಾಸನ ಜಿಲ್ಲೆ ಚನ್ನರಾಯಪಟ್ಟಣದ ನ್ಯಾಷನಲ್ ಕ್ಲಾಸಿಕಲ್ ಡ್ಯಾನ್ಸ್ ಅಕಾಡೆಮಿ ಮತ್ತು ತುಮಕೂರು ಜಿಲ್ಲೆಯ ಸುಪ್ರಸಿದ್ಧ ಯಡಿಯೂರು ಶ್ರೀಸಿದ್ದಲಿಂಗೇಶ್ವರ ಸ್ವಾಮಿಯವರ ದೇವಸ್ಥಾನ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 60 ನೇ ರಾಷ್ಟ್ರೀಯ ನೃತ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ 2017 ರಲ್ಲಿ ಸ್ಥಾಪಿತವಾದ ರಾಷ್ಟ್ರೀಯ ಶಾಸ್ತ್ರೀಯ ನೃತ್ಯ ಅಕಾಡೆಮಿಯಲ್ಲಿ ವಿಶ್ವದಾದ್ಯಂತ 24 ಸಾವಿರ ಕಲಾವಿದರ ಸದಸ್ಯತ್ವವನ್ನು ಹೊಂದಿದ್ದು ಶಾಸ್ತ್ರೀಯ ನೃತ್ಯಗಳನ್ನು ಪ್ರೋತ್ಸಾಹಿಸಿ ಬೆಳೆಸುವ ಉದ್ದೇಶದಿಂದ  ಭಾರತೀಯ ಸಂಸ್ಕೃತಿಯಲ್ಲಿ ವಿಶೇಷ ಸ್ಥಾನಮಾನ ಹೊಂದಿರುವ 8 ವಿಧದ ಶಾಸ್ತ್ರೀಯ ನೃತ್ಯಗಳನ್ನು ಒಂದೆಡೆಗೆ ಸೇರಿಸಿ ಭಾರತ ರಾಜ್ಯಗಳಾದ ಕೇರಳ, ತಮಿಳುನಾಡು, ಆಂಧ್ರ ಪ್ರದೇಶ್, ಮಧ್ಯಪ್ರದೇಶ್, ತೆಲಂಗಾಣ, ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಂದ ಭರತನಾಟ್ಯ ಕಲಾವಿದರುಗಳು 5 ರಿಂದ 60 ವರ್ಷದ ವಯಸ್ಸಿನ 150 ಕ್ಕೂ ಹೆಚ್ಚು ಪ್ರತಿಭಾವಂತ ಕಲಾವಿದರು ಹಾಗೂ ನೃತ್ಯ ಗುರುಗಳು ಭಾಗವಹಿಸಿ ತಮ್ಮ ಕಲೆಯನ್ನು ಅತ್ಯುತ್ತಮ ಪ್ರದರ್ಶನ ನೀಡಲು ಆಗಮಿಸಿರುವ ಎಲ್ಲಾ ಕಲಾವಿದರಿಗೆ ಅಭಿನಂದನೆಗಳನ್ನು ತಿಳಿಸಿದರು, ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ತುಮಕೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಜಿ ವಿ ಪುರುಷೋತ್ತಮ್ ಮಾತನಾಡಿ ಭರತನಾಟ್ಯವನ್ನು ಕಲಿಯುತ್ತಿರುವ, ಕಲಿತಿರುವ ವೇದಿಕೆ ವಂಚಿತ ಕಲಾವಿದರಿಗಾಗಿ ನಡೆಸಿಕೊಂಡು ಬರುತ್ತಿರುವ ಈ ನೃತ್ಯೋತ್ಸವ ಕಾರ್ಯಕ್ರಮ ಕೇವಲ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟಕ್ಕೆ ಸೀಮಿತವಾಗದೆ ಜಿಲ್ಲಾ ಮತ್ತು ತಾಲೂಕು ಮಟ್ಟಗಳಲ್ಲಿ ಇರುವ ಪ್ರತಿಭಾವಂತ ಕಲಾವಿದರನ್ನು ಗುರುತಿಸುವ ದೃಷ್ಟಿಯಿಂದ ತುಮಕೂರು ಜಿಲ್ಲೆಯ ಯಡಿಯೂರಿನ ಇತಿಹಾಸ ಪ್ರಸಿದ್ಧ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿ ದೇವಾಲಯದ ಮುಂಭಾಗದಲ್ಲಿ ಸಿದ್ದಲಿಂಗೇಶ್ವರ ವೇದಿಕೆಯಲ್ಲಿ 60ನೇ ರಾಷ್ಟ್ರೀಯ ನೃತ್ಯೋತ್ಸವವನ್ನು ಆಯೋಜನೆ ಮಾಡಿರುವುದು ತುಂಬಾ ಶ್ಲಾಘನೀಯವಾಗಿದೆ ಎಂದರು.ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರುಗಳಾದ ತುಮಕೂರಿನ ರಾಷ್ಟ್ರೀಯ ಪರಿಸರ ಪ್ರೇಮಿಗಳಾದ ಶ್ರೀ ಕೆ ಸಿದ್ದಪ್ಪ, ಮೈಸೂರಿನ ವೈದಿಕ ಆಧ್ಯಾತ್ಮಿಕ ಚಿಂತಕರಾದ ಶ್ರೀಧರ್ ಶರ್ಮ,  ತುಮಕೂರಿನ ಆಧ್ಯಾತ್ಮಿಕ ಹಾಗೂ ಸಾಂಸ್ಕೃತಿಕ ಚಿಂತಕರಾದ ಡಾ ಆರ್ ಎಲ್ ರಮೇಶ್ ಬಾಬು, ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಹಿರಿಯ ಪತ್ರಕರ್ತರಾದ ಶ್ರೀ ಎ ಎಂ ಜಯರಾಮ್, ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಪತ್ರಿಕಾ ವರದಿಗಾರರಾದ ಶ್ರೀ ವಿ ಲೋಕೇಶ್, ಯಡಿಯೂರಿನ ಸಮಾಜ ಸೇವಕರಾದ ಶ್ರೀ ವೈ ಕೆ ರಘುರಾಜ್ ಸೇರಿದಂತೆ ಈ ಎಲ್ಲಾ ಸಾಧಕರಿಗೆ  ರಾಷ್ಟ್ರೀಯ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಕಾರ್ಯಕ್ರಮದಲ್ಲಿ ತುಮಕೂರು ಜಿಲ್ಲಾ ಪೊಲೀಸ್ ಅಧಿಕಾರಿಗಳಾದ ಕೆ ವಿ ಅಶೋಕ್, ಯಡಿಯೂರು ಸಿದ್ದಲಿಂಗೇಶ್ವರ ಸ್ವಾಮಿ ದೇವಾಲಯದ ಕಾರ್ಯನಿರ್ವಹಣಾಧಿಕಾರಿ ಎನ್ ಕೃಷ್ಣಪ್ಪ, ರಾಷ್ಟ್ರೀಯ ನೃತ್ಯ ಅಕಾಡೆಮಿಯ ಅಧ್ಯಕ್ಷರಾದ ಶ್ರೀಮತಿ ಕೆ ಆರ್ ಅನಿತಾಪ್ರಕಾಶ್, ಆಯೋಜನ ಕಾರ್ಯದರ್ಶಿ ಸ್ವಾತಿ ಪಿ ಭಾರದ್ವಾಜ್ , ಎಂ ಕೆ ಪ್ರಕಾಶ್, ತುಮಕೂರು ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಚಿ ವಿ  ಪುರುಷೋತ್ತಮ್, ರಾಷ್ಟ್ರೀಯ ನೃತ್ಯ ಅಕಾಡೆಮಿಯ ಸಂಚಾಲಕರಾದ ಸಿ ಆರ್ ಲಕ್ಷ್ಮಿಶ್, ಸೇರಿದಂತೆ ಇತರರು ಹಾಜರಿದ್ದರು.