75ನೇ ವರ್ಷದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಹಾಸನ ಜಿಲ್ಲಾಡಳಿತ ಆರೋಗ್ಯ ಸೇವಾ ಪ್ರಶಸ್ತಿ ನೀಡಿ ಗೌರವಿಸಿದೆ

75ನೇ ವರ್ಷದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಹಾಸನ ಜಿಲ್ಲಾಡಳಿತ ಆರೋಗ್ಯ ಸೇವಾ ಪ್ರಶಸ್ತಿ ನೀಡಿ ಗೌರವಿಸಿದೆ

ನಗರದಲ್ಲಿರುವ ರಾಜ್ಯದ ಹೆಸರಾಂತ ಜನಪ್ರಿಯ ಆಸ್ಪತ್ರೆಗೆ ಅತ್ಯುತ್ತಮ ಆರೋಗ್ಯ ಸೇವಾ ಪ್ರಶಸ್ತಿ ನೀಡಿ ಗೌರವಿಸಿದೆ ಹಾಸನ ಜಿಲ್ಲಾಡಳಿತ.75ನೇ ವರ್ಷದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ.ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ ಮತ್ತು ಮುಖ್ಯಮಂತ್ರಿ ಆರೋಗ್ಯ ಯೋಜನೆಯಡಿ ಅಡಿಯಲ್ಲಿ ಜನಪ್ರಿಯ ಆಸ್ಪತ್ರೆಗೆ ಜಿಲ್ಲಾ ಅತ್ಯುತ್ತಮ ಆರೋಗ್ಯ ಸೇವಾ ಪ್ರಶಸ್ತಿಯನ್ನು ಜಿಲ್ಲಾಡಳಿತ ವತಿಯಿಂದ ಅತ್ಯುತ್ತಮ ಆಸ್ಪತ್ರೆ ಎಂದು ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.ರಾಜ್ಯ ಸರ್ಕಾರದ ಸಹಕಾರ ಸಚಿವರು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ, ಜನಪ್ರಿಯ ಫೌಂಡೇಶನ್‌ನ ಅಧ್ಯಕ್ಷ ಹಾಗೂ ರಾಜ್ಯದ ಹೆಸರಾಂತ ಮೂಳೆ ತಜ್ಞರಾದ ಶ್ರೀಯುತ ಡಾ.ವಿ.ಕೆ.ಅಬ್ದುಲ್ ಬಶೀರ್ ಆಸ್ಪತ್ರೆಯ ಪರವಾಗಿ ಪ್ರಶಸ್ತಿಯನ್ನು ಸ್ವೀಕರಿಸಿದರು.ಈ ಸಂದರ್ಭದಲ್ಲಿ ಉಪಸ್ಥಿತರಿದ್ದ.ಹಾಸನ ವಿಧಾನಸಭಾ ಕ್ಷೇತ್ರದ ಶಾಸಕ ಸ್ವರೂಪ್ ಪ್ರಕಾಶ್‌, ಜಿಲ್ಲಾಧಿಕಾರಿ,ಸತ್ಯಭಾಮ,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಅನಿಲ್ ಕುಮಾರ್, ಜಿಲ್ಲಾ ಸಂಯೋಜನಾಧಿಕಾರಿ ಡಾ.ಪ್ರಸಾದ್ ಬಾಬು ಮತ್ತು ಇತರೆ ಗಣ್ಯರ ರೈತ ಬಾಂಧವರು ಸಾರ್ವಜನಿಕ ಬಂಧುಗಳು ಇನ್ನಿತರರ ಸಮ್ಮುಖದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು