ಸುದ್ದಿಕಿರಣ ವರದಿ
ಮಂಗಳವಾರ, ಮೇ 17
ಜೂ. 1-9: ಕಡಿಯಾಳಿ ಬ್ರಹ್ಮಕಲಶೋತ್ಸವ
ಉಡುಪಿ: ಜೂನ್ 1ರಿಂದ 9ರ ವರೆಗೆ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ನಡೆಸಲಾಗುತ್ತಿದ್ದು, ಸ್ವಯಂಸೇವಕರು ಮನೆ ಮನೆಗೆ ತೆರಳಿ ಆಮಂತ್ರಣ ಪತ್ರಿಕೆ ವಿತರಿಸುವ ಕಾರ್ಯ ಭರದಿಂದ ಸಾಗುತ್ತಿದೆ.
ಜೂ. 8ರಂದು ಬೆಳಿಗ್ಗೆ 7.50ರ ಸುಮುಹೂರ್ತದಲ್ಲಿ ಬ್ರಹ್ಮಕುಂಭಾಷೇಕ ನಡೆಯಲಿದೆ. ಸಾರ್ವಜನಿಕ ಅನ್ನಸಂತರ್ಪಣೆಯೂ ನಡೆಯಲಿದೆ.
ಜೂ. 1ರಂದು ಹೊರೆಕಾಣಿಕೆ ಮೆರವಣಿಗೆ ನಡೆಯಲಿದ್ದು, ಜೋಡುಕಟ್ಟೆಯಿಂದ ಮೆರವಣಿಗೆ ಆರಂಭವಾಗಲಿದೆ.
ಜ. 2ರಂದು ಅಖಂಡ ಏಕಾಹ ಭಜನಾ ಕಾರ್ಯಕ್ರಮ ಆಯೋಜಿಸಲಾಗಿದೆ. ಜೂ. 3ರಂದು ಸಂಜೆ 5.30ಕ್ಕೆ ಧರ್ಮವೇದಿಕೆಯಲ್ಲಿ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಸಮಾಜದ ಗಣ್ಯರು, ರಾಜಕೀಯ ಮುಖಂಡರು, ಉದ್ಯಮಿಗಳ ಉಪಸ್ಥಿತಿಯಲ್ಲಿ ಉದ್ಘಾಟನೆಗೊಳ್ಳಲಿದೆ.
ಪ್ರತಿ ನಿತ್ಯವೂ ಉಡುಪಿ ಅಷ್ಟಮಠಗಳ ವಿವಿಧ ಮಠಾಧೀಶರು ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಪ್ರತಿನಿತ್ಯವೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ