ಸುದ್ದಿಕಿರಣ ವರದಿ
ಸೋಮವಾರ, ಜುಲೈ 25
ಸುಜ್ಞಾನೇಂದ್ರತೀರ್ಥ ಶ್ರೀಪಾದರ ಆರಾಧನೆ
ಉಡುಪಿ: ಇಲ್ಲಿನ ಅಷ್ಟಮಠಗಳಲ್ಲೊಂದಾದ ಪುತ್ತಿಗೆ ಮಠದ ಶ್ರೀ ಸುಜ್ಞಾನೇಂದ್ರತೀರ್ಥ ಶ್ರೀಪಾದರ ಆರಾಧನಾ ಮಹೋತ್ಸವ ಸೋಮವಾರ ನಡೆಯಿತು.
ಆ ಪ್ರಯುಕ್ತ ಶ್ರೀಕೃಷ್ಣ ಮಠದ ಸಮುಚ್ಛಯದಲ್ಲಿರುವ ಅವರ ವೃಂದಾವನಕ್ಕೆ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಹಾಗೂ ಪರ್ಯಾಯ ಕೃಷ್ಣಾಪುರ ಮಠಾಧೀಶ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ವಿಶೇಷ ಪೂಜೆ ಸಲ್ಲಿಸಿದರು.