Monday, August 15, 2022
Home ಅಧ್ಯಾತ್ಮ ಸಂಭ್ರಮದ ವರಮಹಾಲಕ್ಷ್ಮಿ ಪೂಜೆ

ಸಂಭ್ರಮದ ವರಮಹಾಲಕ್ಷ್ಮಿ ಪೂಜೆ

ಸುದ್ದಿಕಿರಣ ವರದಿ
ಶುಕ್ರವಾರ, ಆಗಸ್ಟ್ 5

ಸಂಭ್ರಮದ ವರಮಹಾಲಕ್ಷ್ಮಿ ಪೂಜೆ
ಉಡುಪಿ: ಜಿಲ್ಲೆಯ ಹಲವೆಡೆಗಳಲ್ಲಿ ಶುಕ್ರವಾರ ವರಮಹಾಲಕ್ಷ್ಮೀ ನಡೆಸಲಾಯಿತು.
ಕೆಲವು ಮನೆಗಳಲ್ಲಿ ಹಾಗೂ ದೇವಾಲಯಗಳಲ್ಲಿ ಶ್ರಾವಣ ಮಾಸದ ಎರಡನೇ ಶುಕ್ರವಾರದಂದು ಸಾಂಪ್ರದಾಯಿಕ ಶ್ರದ್ಧಾಭಕ್ತಿಯಿಂದ ಮಹಿಳೆಯರು ಲಕ್ಷ್ಮೀ ಪೂಜೆ ಮಾಡಿದರು.

ಕನ್ನರ್ಪಾಡಿ ಶ್ರೀ ಜಯದುರ್ಗಾಪರಮೇಶ್ವರಿ ದೇವಾಲಯ, ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನ, ಇಂದ್ರಾಳಿ ಪಂಚದುರ್ಗಾಪರಮೇಶ್ವರಿ ದೇವಸ್ಥಾನ, ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಮೊದಲಾದೆಡೆಗಳಲ್ಲಿ ಸಾಮೂಹಿಕವಾಗಿ ವರಮಹಾಲಕ್ಷ್ಮೀ ಪೂಜೆ ನಡೆದಿದ್ದು, ಮಾತಾ ಅಮೃತಾನಂದಮಯಿ ಸೇವಾ ಸಮಿತಿ ವತಿಯಿಂದ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣ, ಪದ್ಮಶಾಲಿ ಸಮಾಜದವರಿಂದ ಕಿನ್ನಿಮೂಲ್ಕಿ ಶ್ರೀ ವೀರಭದ್ರ ಕಲಾಭವನದಲ್ಲಿ ವರಮಹಾಲಕ್ಷ್ಮೀಪೂಜೆ ನಡೆಸಲಾಯಿತು.

ಶ್ರೀಕೃಷ್ಣಮಠದಲ್ಲಿ ಪರ್ಯಾಯ ಕೃಷ್ಣಾಪುರ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ಶ್ರೀಕೃಷ್ಣನಿಗೆ ವಿಶೇಷ ಅಲಂಕಾರ ಮಾಡಿದ್ದರು. ಮಹಿಳೆಯರಿಂದ ಲಕ್ಷ್ಮೀಶೋಭಾನೆ ಪಠಣ ನಡೆಯಿತು.

ತೆಂಕಪೇಟೆ ಶ್ರೀ ಲಕ್ಷ್ಮೀವೆಂಕಟೇಶ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ವ್ರತ ಅಂಗವಾಗಿ ಗಜಲಕ್ಷ್ಮಿಯ ವಿಶೇಷ ಅಲಂಕಾರ ಮಾಡಲಾಗಿತ್ತು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!