Monday, August 15, 2022
Home ಅಧ್ಯಾತ್ಮ ವರ್ಷಧಾರೆಯ ನಡುವೆಯೂ ಸಂಭ್ರಮದ ಬಕ್ರೀದ್ ಆಚರಣೆ

ವರ್ಷಧಾರೆಯ ನಡುವೆಯೂ ಸಂಭ್ರಮದ ಬಕ್ರೀದ್ ಆಚರಣೆ

ಸುದ್ದಿಕಿರಣ ವರದಿ
ಭಾನುವಾರ, ಜುಲೈ 10

ವರ್ಷಧಾರೆಯ ನಡುವೆಯೂ ಸಂಭ್ರಮದ ಬಕ್ರೀದ್ ಆಚರಣೆ
ಉಡುಪಿ: ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯ ನಡುವೆಯೂ ಜಿಲ್ಲೆಯಾದ್ಯಂತ ಭಾನುವಾರ ಬಕ್ರೀದ್ (ಈದುಲ್ ಹಝಾ) ಹಬ್ಬವನ್ನು ಸಾಂಪ್ರದಾಯಿಕ ಶ್ರದ್ಧಾ ಭಕ್ತಿ ಹಾಗೂ ಸಂಭ್ರಮದಿಂದ ಮುಸಲ್ಮಾನ ಬಂಧುಗಳು ಆಚರಿಸಿದರು.

ತಮ್ಮ ವ್ಯಾಪ್ತಿಯ ಮಸೀದಿಗಳಿಗೆ ತೆರಳಿ ವಿಶೇಷ ನಮಾಜ್ ನಡೆಸಿದರು. ಬಳಿಕ ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.

ಉಡುಪಿ ಜಾಮೀಯಾ ಮಸೀದಿಯಲ್ಲಿ ಮೌಲಾನ ಅಬ್ದುರ್ರಶೀದ್ ನದ್ವಿ ಮತ್ತು ಉಡುಪಿ ಅಂಜುಮಾನ್ ಮಸೀದಿಯಲ್ಲಿ ಮೌಲಾನ ಇನಾಯುತುಲ್ಲಾ ರಝ್ವಿ ನೇತೃತ್ವದಲ್ಲಿ ಈದ್ ನಮಾಝ್ ನಡೆಸಲಾಯಿತು.

ಉಡುಪಿ ಜಿಲ್ಲಾ ಸಂಯುಕ್ತ ಜಮಾತ್ ಕೇಂದ್ರ ಮಸೀದಿ ಮೂಳೂರು ಜುಮಾ ಮಸೀದಿಯ ಖತೀಬ್ ಹಾಫೀಳ್ ಅಶ್ರಫ್ ಸಖಾಫಿ ನೇತೃತ್ವದಲ್ಲಿ ವಿಶೇಷ ನಮಾಝ್ ಮತ್ತು ಖುತ್ಬಾ ಪಠಣ ನಡೆಸಲಾಯಿತು.

ಕುಂದಾಪುರ ಜುಮಾ ಮಸೀದಿ ಧರ್ಮಗುರು ಮೌಲಾನ ಮುಫ್ತಿ ಸದ್ದಾಂ ನೇತೃತ್ವದಲ್ಲಿ, ಕಾರ್ಕಳ ಜಾಮೀಯ ಮಸೀದಿಯ ಮೌಲಾನ ಝಾಹಿರ್ ಅಹ್ಮದ್ ಅಲ್ ಕಾಸ್ಮಿ ಹಾಗೂ ಬಂಗ್ಲೆಗುಡ್ಡೆ ಸಲ್ಮಾನ್ ಜುಮಾ ಮಸೀದಿಯ ಮೌಲಾನ ಅಹ್ಮದ್ ಶರೀಫ್ ಸಅದಿ ಈದ್ ನಮಾಝ್ ನ ನೇತೃತ್ವ ವಹಿಸಿದ್ದರು.

ಅದೇ ರೀತಿ ಬೈಂದೂರು, ಬ್ರಹ್ಮಾವರ, ಹೆಬ್ರಿ, ಕಾಪು ಸೇರಿದಂತೆ ಜಿಲ್ಲೆಯ ವಿವಿಧ ಮಸೀದಿಗಳಲ್ಲಿ ನಡೆದ ಹಬ್ಬದ ವಿಶೇಷ ನಮಾಜ್ ನಲ್ಲಿ ನೂರಾರು ಮಂದಿ ಮುಸ್ಲಿಮರು ಪಾಲ್ಗೊಂಡಿದ್ದರು.

ಶಾಂತಿ ಸೌಹಾರ್ದತೆ ಸಂದೇಶ
ಉಡುಪಿ ಬ್ರಹ್ಮಗಿರಿ ನಾಯರ್ ಕೆರೆ ಹಾಶಿಮಿ ಮಸೀದಿಯಲ್ಲಿ ಶಾಂತಿ ಮತ್ತು ಸೌಹಾರ್ದತೆಯ ಸಂದೇಶದೊಂದಿಗೆ ಬಕ್ರೀದ್ ಆಚರಿಸಲಾಯಿತು.

ಮೌಲಾನಾ ಸೈಯದ್ ಹುಸೇನ್ ಈದ್ ಸಂದೇಶದಲ್ಲಿ ಮುಸ್ಲಿಂ ಬಾಂಧವರು ಸಾಮಾಜಿಕ ಮಾಧ್ಯಮಗಳನ್ನು ನಂಬಬಾರದು ಮತ್ತು ಅವಲಂಬಿಸಬಾರದು. ಬದಲಿಗೆ ಸಕಾರಾತ್ಮಕ ಮತ್ತು ರಚನಾತ್ಮಕ ಚಟುವಟಿಕೆಗಳತ್ತ ಗಮನಹರಿಸಿ ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಗೆ ಒತ್ತುನೀಡುವಂತೆ ಕರೆ ನೀಡಿದರು.

ಈದ್ ನಮಾಝ್ ನಲ್ಲಿ ಸಾಕಷ್ಟು ಮಹಿಳೆಯರೂ ಪಾಲ್ಗೊಂಡಿದ್ದರು.

 

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!