Thursday, July 7, 2022
Home ಅಧ್ಯಾತ್ಮ ಕೃಷ್ಣಮಠದಲ್ಲಿ ಸಂಭ್ರಮದ ಗಣೇಶೋತ್ಸವ

ಕೃಷ್ಣಮಠದಲ್ಲಿ ಸಂಭ್ರಮದ ಗಣೇಶೋತ್ಸವ

ಕೃಷ್ಣಮಠದಲ್ಲಿ ಸಂಭ್ರಮದ ಗಣೇಶೋತ್ಸವ

(ಸುದ್ದಿಕಿರಣ ವರದಿ)
ಉಡುಪಿ: ಪರ್ಯಾಯ ಅದಮಾರು ಶ್ರೀಕೃಷ್ಣಮಠ ಆಶ್ರಯದಲ್ಲಿ ಸಂಭ್ರಮದಿಂದ ಗಣೇಶೋತ್ಸವ ಆಚರಿಸಲಾಗಿದ್ದು, ಅದಮಾರು ಮಠದ ಹಿರಿಯ ಯತಿ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರ ಮಾರ್ಗದರ್ಶನದಲ್ಲಿ ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರ ನೇತೃತ್ವದಲ್ಲಿ ಬಡಗುಮಾಳಿಗೆಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ವಿಶೇಷ ಪೂಜೆ ನಡೆಸಲಾಯಿತು.

ವಿಶ್ವಂಭರರೂಪಿ ಪರಮಾತ್ಮನ ಪ್ರೀತ್ಯರ್ಥವಾಗಿ ಮಠದ ಸಿಬ್ಬಂದಿಯವರಿಗೆ 21 ಪಡಿದಾನ, ಅಷ್ಟದ್ರವ್ಯದಾನ ನೀಡಲಾಯಿತು.

ಗಣಹೋಮ
ಚೌತಿ ಹಬ್ಬ ಅಂಗವಾಗಿ ಶ್ರೀಕೃಷ್ಣ ಮಠದ ಬಡಗುಮಾಳಿಗೆಯಲ್ಲಿ 12 ಕಾಯಿ ಗಣಹೋಮ ನಡೆಸಲಾಯಿತು. ಶ್ರೀಮಠದ ಪುರೋಹಿತರಾದ ಮುದರಂಗಡಿ ಲಕ್ಷ್ಮೀಶ ಭಟ್ ಗಣಹೋಮ ನಡೆಸಿದರು.

ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಹಾಗೂ ಅದಮಾರು ಮಠದ ಹಿರಿಯ ಯತಿ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಸಾನ್ನಿಧ್ಯ ವಹಿಸಿದ್ದರು.

ಭವ್ಯ ಮೆರವಣಿಗೆ
ಗಣೇಶ ಚತುರ್ಥಿ ಮುನ್ನಾದಿನ ಗುರುವಾರ ಮಣ್ಣಿನ ಗಣಪತಿ ಮೂರ್ತಿಯನ್ನು ಪಲ್ಲಿಕಯಲ್ಲಿಟ್ಟು ರಥಬೀದಿಯಲ್ಲಿ ಮೆರವಣಿಗೆಯಲ್ಲಿ ಕೃಷ್ಣಮಠಕ್ಕೆ ತಂದು ಬಡಗುಮಾಳಿಗೆ ಮತ್ತು ಶ್ರೀಕೃಷ್ಣ ದೇವರ ಗರ್ಭಗುಡಿಯ ಪೂರ್ವದ್ವಾರದಲ್ಲಿ ಪ್ರತಿಷ್ಠಾಪಿಸಲಾಗಿತ್ತು.

ಮಠದ ವ್ಯವಸ್ಥಾಪಕ ಗೋವಿಂದರಾಜ್ ಸಹಕರಿಸಿದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!