KAS ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ: ಸೆಪ್ಟೆಂಬರ್ 7ರವರೆಗೆ ಅವಕಾಶ!
ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. ಕರ್ನಾಟಕ ಲೋಕಸೇವಾ ಆಯೋಗ (KPSC) ಮೂಲಕ 319 ಗೆಜೆಟೆಡ್ ಪ್ರೊಬೆಷನರ್ಸ್ (KAS) ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಹೆಚ್ಚಿನ ಸಮಯಾವಕಾಶ ನೀಡಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿದ್ದ ಅಂತಿಮ ದಿನಾಂಕವನ್ನು ಇದೀಗ ಸೆಪ್ಟೆಂಬರ್ 7ರವರೆಗೆ ವಿಸ್ತರಿಸಲಾಗಿದೆ.