Saturday, July 2, 2022
Home ಕ್ರೀಡೆ ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ಚೊಚ್ಚಲ ಪದಕ

ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ಚೊಚ್ಚಲ ಪದಕ

ಟೋಕಿಯೊ: ಜಪಾನ್ ನಲ್ಲಿ ನಡೆಯುತ್ತಿರುವ ಟೋಕಿಯೊ ಒಲಿಂಪಿಕ್ಸ್ ನ ಮೊದಲ ದಿನವೇ ಭಾರತ, ಪದಕ ಬಾಚಿಗೊಂಡಿದೆ. 49 ಕೆಜಿ ವಿಭಾಗದ ಭಾರ ಎತ್ತುವ ಸ್ಪರ್ಧೆಯಲ್ಲಿ ಭಾರತದ ಮಿರಾಬಾಯಿ ಚಾನು ಬೆಳ್ಳಿ ಪದಕ ಗೆದ್ದಿದ್ದಾರೆ.

ಚೀನಾದ ಜೀಹೂಹು ಮೊದಲ ಸ್ಥಾನ ಪಡೆದರು. 84 ಕೆಜಿ ಮತ್ತು 87 ಕೆಜಿ ಭಾರವನ್ನು ಯಶಸ್ವಿಯಾಗಿ ಮಿರಾಬಾಯಿ ಚಾನು ಎತ್ತಿ ಬೆಳ್ಳಿ ಪದಕ ತನ್ನದಾಗಿಸಿಕೊಂಡರು.

ಒಲಿಂಪಿಕ್ ಭಾರ ಎತ್ತುವ ಸ್ಪರ್ಧೆಯಲ್ಲಿ ಇದು ಭಾರತದ ಶ್ರೇಷ್ಠ ಸಾಧನೆಯಾಗಿದೆ. ಈ ಹಿಂದೆ ಸಿಡ್ನಿ ಒಲಿಂಪಿಕ್ ನಲ್ಲಿ ಕರ್ಣಮ್ ಮಲ್ಲೇಶ್ವರಿ 69 ಕೆಜಿ ವಿಭಾಗದಲ್ಲಿ ಕಂಚಿನ ಪದಕ ಗೆದ್ದಿದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!