Tuesday, May 17, 2022
Home ಕ್ರೀಡೆ ಸರ್ಕಾರಿ ನೌಕರರು ಪ್ರತಿನಿತ್ಯ ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಕೊಳ್ಳಬೇಕು

ಸರ್ಕಾರಿ ನೌಕರರು ಪ್ರತಿನಿತ್ಯ ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಕೊಳ್ಳಬೇಕು

ಸುದ್ದಿಕಿರಣ ವರದಿ
ಮಂಗಳವಾರ, ಫೆಬ್ರವರಿ 8

ಸರ್ಕಾರಿ ನೌಕರರು ಪ್ರತಿನಿತ್ಯ ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಕೊಳ್ಳಬೇಕು
ಉಡುಪಿ: ಕ್ರೀಡೆಯಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ಸ್ಥಿರವಾಗಿರಲು ಸಾಧ್ಯವಿದ್ದು, ಸದಾ ಒತ್ತಡದಲ್ಲಿ ಕಾರ್ಯನಿರ್ವಹಿಸುವ ಸರ್ಕಾರಿ ನೌಕರರು ಪ್ರತಿನಿತ್ಯ ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಕೊಳ್ಳಬೇಕು ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಹೇಳಿದರು.

ಮಂಗಳವಾರ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಉಡುಪಿ ಜಿಲ್ಲಾ ಸರಕಾರಿ ನೌಕರರ ಸಂಘ ಸಂಯುಕ್ತ ಆಶ್ರಯದಲ್ಲಿ ನಡೆದ ಸರಕಾರಿ ನೌಕರರ ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಯಾವುದೇ ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಆರೋಗ್ಯ ಉತ್ತಮವಾಗಿದ್ದರೆ ಹೆಚ್ಚು ಉತ್ಸಾಹದಿಂದ ಕಾರ್ಯನಿರ್ವಹಿಸಲು ಸಾಧ್ಯವಾಗಲಿದೆ. ಸರಕಾರಿ ನೌಕರರು ಪ್ರತಿದಿನ ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಕೊಳ್ಳುವುದರಿಂದ ಹೆಚ್ಚಿನ ಉತ್ಸಾಹದಿಂದ ಕಾರ್ಯನಿರ್ವಹಿಸಿ ಸಾರ್ವಜನಿಕರಿಗೆ ಶೀಘ್ರದಲ್ಲಿ ಸರಕಾರಿ ಸೇವೆಗಳನ್ನು ಒದಗಿಸಲು ಸಾಧ್ಯವಾಗಲಿದೆ ಎಂದರು.

ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಮಾತನಾಡಿ, ಸರಕಾರಿ ನೌಕರರು ಕ್ರೀಡಾಕೂಟದಲ್ಲಿ ಭಾಗವಹಿಸುವ ಮೂಲಕ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಅನಿತಾ ಮಡ್ಲೂರು, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ದೇವೇಂದ್ರ ಎಸ್. ಬಿರಾದಾರ, ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್, ಸರಕಾರಿ ನೌಕರರ ಸಂಘದ ಪದಾಧಿಕಾರಿಗಳು ಮತ್ತು ಜಿಲ್ಲೆಯ ಎಲ್ಲಾ ತಾಲೂಕುಗಳ ಸರಕಾರಿ ನೌಕರರು ಭಾಗವಹಿಸಿದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!