ಕ್ರೀಡೆಯಿಂದ ದೈಹಿಕ ಕ್ಷಮತೆ ವೃದ್ಧಿ
ಉಡುಪಿ, ನ. 16 (ಸುದ್ದಿಕಿರಣ ವರದಿ): ಕ್ರೀಡೆಯಲ್ಲಿ ತೊಡಗಿಕೊಳ್ಳುವ ಮೂಲಕ ನಮ್ಮ ದೈಹಿಕ ಸಾಮರ್ಥ್ಯ ಹೆಚ್ಚಿಸಿಕೊಳ್ಳಬಹುದು ಎಂದು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬ್ರಹ್ಮಾವರ ವಲಯಾಧ್ಯಕ್ಪ ಪ್ರಕಾಶ್ ಜತ್ತನ್ ಹೇಳಿದರು.
ಉಡುಪಿ ವಲಯ ಆಶ್ರಯದಲ್ಲಿ ಇಲ್ಲಿನ ನಗರಸಭೆಯ ಬೀಡಿನಗುಡ್ಡೆ ಕ್ರೀಡಾಂಗಣದಲ್ಲಿ ನಡೆದ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.
ನಾವು ಸದಾ ಆರೋಗ್ಯವಂತರಾಗಿರಬೇಕಾದರೆ ಕ್ರೀಡೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದವರು ತಿಳಿಸಿದರು.
ಇನ್ನೋರ್ವ ಅತಿಥಿ ಉಡುಪಿ ವಲಯದ ಮಾಜಿ ಅಧ್ಯಕ್ಷ ಅನಿಶ್ ಶೆಟ್ಟಿಗಾರ್ ಮಾತನಾಡಿ, ಪ್ರತಿಯೊಬ್ಬರೂ ವೃತ್ತಿಯೊಂದಿಗೆ ಕ್ರೀಡೆ ಇತ್ಯಾದಿ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದರು.
ಈ ಸಂದರ್ಭದಲ್ಲಿ ಕೇಂದ್ರ ಸಮಿತಿ ಸಂಘಟನಾ ಕಾರ್ಯದರ್ಶಿ ಸುಂದರ ಪೂಜಾರಿ ಕೊಳಲಗಿರಿ, ಕ್ರೀಡಾ ಕಾರ್ಯದರ್ಶಿಗಳಾದ ಅಶೋಕ್ ಪುತ್ರನ್ ಮತ್ತು ಪ್ರವೀಣ್ ಖಂಡಿಗೆ, ಕೋಶಾಧಿಕಾರಿ ದಿವಾಕರ ಹಿರಿಯಡ್ಕ, ಉಪಾಧ್ಯಕ್ಷ ಸುರಭಿ ಸುಧೀರ್ ಶೆಟ್ಟಿ, ಎಸ್.ಕೆ.ಪಿ.ಎ ಸೊಸೈಟಿ ಅಧ್ಯಕ್ಷ ಕೆ. ವಾಸುದೇವ ರಾವ್, ಕಟ್ಟಡ ಸಮಿತಿ ಸಂಚಾಲಕ ಆಸ್ಟ್ರೋ ಮೋಹನ್ ಇದ್ದರು.
ವಲಯಾಧ್ಯಕ್ಷ ಜನಾರ್ದನ ಕೊಡವೂರು ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಪ್ರವೀಣ ಕೊರೆಯ ವಂದಿಸಿದರು. ರಾಘವೇಂದ್ರ ಶೇರಿಗಾರ್ ನಿರೂಪಿಸಿದರು.