Saturday, August 13, 2022
Home ಕ್ರೀಡೆ ಚಿನ್ನ ಬಾಚಿದ ಚಾನು

ಚಿನ್ನ ಬಾಚಿದ ಚಾನು

ಸುದ್ದಿಕಿರಣ ವರದಿ
ಶನಿವಾರ, ಜುಲೈ 30

ಚಿನ್ನ ಬಾಚಿದ ಚಾನು
ಬರ್ಮಿಂಗ್ ಹ್ಯಾಮ್: ಕಾಮನ್ ವೆಲ್ತ್ ಗೇಮ್ಸ್ ಮೀರಾಬಾಯಿ ಚಾನು ಮಹಿಳೆಯರ 49 ಕೆಜಿ ವೇಟ್ ಲಿಫ್ಟಿಂಗ್ ಫೈನಲ್ ನಲ್ಲಿ ಪ್ರಾಬಲ್ಯ ಮೆರೆದಿದ್ದಾರೆ. ಆ ಮೂಲಕ ಸಿಡಬ್ಲ್ಯೂಜಿ ಕ್ರೀಡಾಕೂಟದಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ ಗೆದ್ದು ಇತಿಹಾಸ ಬರೆದಿದ್ದಾರೆ.

ಮೊದಲ ಸುತ್ತಿನಲ್ಲಿ 84 ಕೆಜಿ ಭಾರ ಎತ್ತಿದ್ದ ಚಾನು, ಎರಡನೇ ಸುತ್ತಿನಲ್ಲಿ 88 ಕೆಜಿ ಭಾರ ಎತ್ತಿ 12 ಕೆಜಿ ಮುನ್ನಡೆ ಕಾಯ್ದುಕೊಂಡಿದ್ದರು. ಕೊನೆಯದಾಗಿ ಚಿನ್ನಕ್ಕೆ ಮುತ್ತಿಕ್ಕುವಲ್ಲಿ ಯಶಸ್ವಿಯಾಗಿದ್ದಾರೆ.

ವೇಟ್‌ ಲಿಫ್ಟರ್ ಮೀರಾಬಾಯಿ ಚಾನು, ಮಹಿಳೆಯರ 49 ಕೆಜಿ ವಿಭಾಗದಲ್ಲಿ ಒಟ್ಟು 201 ಕೆಜಿ ಎತ್ತುವ ಮೂಲಕ ಚಿನ್ನ ಗೆದ್ದು ದಾಖಲೆ ನಿರ್ಮಿಸಿದ್ದಾರೆ.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!