Thursday, July 7, 2022
Home ಕ್ರೀಡೆ ಪ್ಯಾರಾಲಿಂಪಿಕ್ ವಾಲಿಬಾಲ್ ಪಂದ್ಯಾಟಕ್ಕೆ ಚಾಲನೆ

ಪ್ಯಾರಾಲಿಂಪಿಕ್ ವಾಲಿಬಾಲ್ ಪಂದ್ಯಾಟಕ್ಕೆ ಚಾಲನೆ

ಪ್ಯಾರಾಲಿಂಪಿಕ್ ವಾಲಿಬಾಲ್ ಪಂದ್ಯಾಟಕ್ಕೆ ಚಾಲನೆ

ಉಡುಪಿ: ಪ್ಯಾರಾಲಿಂಪಿಕ್ ವಾಲಿಬಾಲ್ ಫೆಡರೇಶನ್ ಆಫ್ ಇಂಡಿಯಾ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಇಂಟರ್ ನ್ಯಾಷನಲ್ ಫೆಡರೇಶನ್ ಆಫ್ ಲಯನ್ಸ್ ಕ್ಲಬ್ ಡಿಸ್ಟ್ರಿಕ್ಟ್ 317ಸಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಪುರುಷರು ಮತ್ತು ಮಹಿಳೆಯರ 10ನೇ ಪ್ಯಾರಾ ಸಿಟ್ಟಿಂಗ್ ವಾಲಿಬಾಲ್ ಚಾಂಪಿಯನ್ ಶಿಪ್ ಕ್ರೀಡಾಕೂಟ ಗುರುವಾರ ನಗರದ ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಆರಂಭಗೊಂಡಿತು.

ಕರ್ನಾಟಕ ಕ್ರೀಡಾ ಪ್ರಾಧಿಕಾರ ಉಪಾಧ್ಯಕ್ಷ ಕೆ. ಪಿ. ಪುರುಷೋತ್ತಮ್ ಕ್ರೀಡಾಕೂಟ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ರಾಘವೇಂದ್ರ ಕಿಣಿ ಆಗಮಿಸಿದ್ದರು.

ವಿಶೇಷ ಆಹ್ವಾನಿತರಾಗಿ ಜಿ. ಪಂ. ಸಿಇಓ ಡಾ. ನವೀನ್ ಭಟ್ ವೈ., ಸ.ಪ್ರ.ದ. ಕಾಲೇಜು ತೆಂಕನಿಡಿಯೂರು ಪ್ರಾಂಶುಪಾಲ ಡಾ| ಗಣನಾಥ ಎಕ್ಕಾರು, ಲಯನ್ಸ್ ಕ್ಲಬ್ ಕ್ರೀಡಾ ಸಂಯೋಜಕಿ ಗಿರಿಜಾ ಶಿವರಾಮ ಶೆಟ್ಟಿ, ಲಯನೆಸ್ ಸದಸ್ಯೆಯರಾದ ವಿಜಯಾ ಜಿ. ಬಂಗೇರ ಮತ್ತು ಭಾರತಿ ಎಚ್. ಸುವರ್ಣ ಆಗಮಿಸಿದ್ದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ| ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಪ್ಯಾರಾ ವಾಲಿಬಾಲ್ ಫೆಡರೇಶನ್ ಅಧ್ಯಕ್ಷ ಎಚ್. ಚಂದ್ರಶೇಖರ್ ಪ್ರಾಸ್ತಾವಿಕವಾಗಿ ಮಾತನ್ನಾಡಿದರು.

ಕ್ರೀಡಾಕೂಟದಲ್ಲಿ ಕರ್ನಾಟಕ, ರಾಜಸ್ಥಾನ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಉತ್ತರಾಖಂಡ, ಬಿಹಾರ, ಹರ್ಯಾಣ, ಪಾಂಡಿಚೇರಿ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳ 10 ಪುರುಷರು ಹಾಗೂ 5 ಮಹಿಳೆಯರ ತಂಡಗಳು ಭಾಗವಹಿಸುತ್ತಿವೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!