1. ಕೋಲಾರ
ಕೋಲಾರ :- ಜಿಲ್ಲಾ ಕುರುಬರ ಸಂಘದ ಅಡಿಯಲ್ಲಿ ಜಿಲ್ಲಾ ಕನಕ ನೌಕರರ ಸಂಘದ ವತಿಯಿಂದ 2022-23ನೇ ಸಾಲಿನ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಅ.8 ರಂದು ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕನಕ ನೌಕರರ ಸಂಘದ ಅಧ್ಯಕ್ಷ ಬಿ.ಎಂ.ನಾರಾಯಣಸ್ವಾಮಿ ತಿಳಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅ.8 ಭಾನುವಾರ ಬೆಳಿಗ್ಗೆ 11ಗಂಟೆಗೆ ನಡೆಯುವ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಕಾಗಿನೆಲೆ ಕನಕಗುರು ಪೀಠ, ತಿಂತಣಿ ಬೀಚ್ ನಂದಗುಡಿಯ ಶ್ರೀ ಸಿದ್ದರಾಮನಂದ ಸ್ವಾಮೀಜಿಗಳು ಸಾನಿಧ್ಯ ವಹಿಸುವರು, ಜಿಲ್ಲಾ ಕನಕ ನೌಕರರ ಸಂಘದ ಅಧ್ಯಕ್ಷ ಬಿ.ಎಂ.ನಾರಾಯಣಸ್ವಾಮಿ ಅಧ್ಯಕ್ಷತೆ ವಹಿಸುವ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಸುರೇಶ್ ಉದ್ಘಾಟಿಸುವರು, ಶ್ರೀ ಭಕ್ತ ಕನಕದಾಸರ ಭಾವಚಿತ್ರವನ್ನು ಮಾಜಿ ಸಚಿವ ಆರ್.ವರ್ತೂರ್ ಪ್ರಕಾಶ್ ಅನಾವರಣಗೊಳಿಸುವರು. ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಆಗಮಿಸುವರು ಎಂದು ವಿವರಿಸಿದರು.
ಕುರುಬ ಸಮಾಜದ ಹಾಲಿ ಹಾಗೂ ಮಾಜಿ ಸಚಿವರು, ಶಾಸಕರು, ಜಿ.ಪಂ, ಗ್ರಾ.ಪಂ, ನಗರಸಭೆ ಸದಸ್ಯರು, ಮುಖಂಡರು ಹಾಗೂ ಕುಲಬಾಂಧವರು ಕಾರ್ಯಕ್ರಮದಲ್ಲಿ ಭಾಗವಹಿಸುವರು. ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಶೇ.90 ರ ಮೇಲೆ ಅಂಕಗಳಿಸಿರುವ 200 ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗಣ್ಯರು ಸನ್ಮಾನಿಸಿ, ಗೌರವಿಸುವರು. ಮಕ್ಕಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ತೇರ್ಗಡೆಗೊಳ್ಳಲು ಬೇಕಾದ ಪುಸ್ತಕಗಳನ್ನು ನೀಡಿ ಪ್ರೋತ್ಸಾಹಿಸಲಾಗುವುದು ಎಂದು ಹೇಳಿದರು.
ಕುರುಬ ಸಮಾಜದ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಅವರಿಗೆ ಬೇಕಾದ ವಿದ್ಯಾಭ್ಯಾಸಕ್ಕೆ ಹಲವಾರು ರೀತಿಯ ಸಹಕಾರ, ಬೆಂಬಲ ಹಾಗೂ ಆರ್ಥಿಕವಾಗಿ ಸಹಾಯ ಮಾಡಿಕೊಂಡು ಕನಕ ನೌಕರರ ಸಂಘವು ಬರುತ್ತಿದೆ. ಮಕ್ಕಳನ್ನು ಪ್ರೋತ್ಸಾಹಿಸಲು ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕನಕ ನೌಕರರ ಸಂಘದ ಖಜಾಂಚಿ ಬಿ.ಹರೀಶ್, ಪ್ರಧಾನ ಕಾರ್ಯದರ್ಶಿ ಡಿ.ಆರ್.ಶ್ರೀರಾಮೇಗೌಡ, ಕಾರ್ಯಧ್ಯಕ್ಷ ಎಂ.ಎಂ.ನಾರಾಯಣಸ್ವಾಮಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.

3. ಸುದ್ದಿ ಕಿರಣ ಟಿವಿ ಬಾಳಿನ ಬೆಳಕು
ನಮ್ಮ ಈ ವರದಿಯ ಲಿಂಕ್ ನ್ನು ಒಪನ್ ಮಾಡಿ, ಲೈಕ್ ಮಾಡಿ suddikirana.com SUBSCRIBE ಮಾಡಿ ಬೆಲ್ ಬಟನ್ ಒತ್ತೋದನ್ನು ಮಾತ್ರ ಮರಿಬೇಡಿ ಜೊತೆಗೆ ಇನ್ನಷ್ಟು ಮಂದಿಗೆ ಶೇರ್ ಮಾಡಿ ಸುದ್ದಿ ಮತ್ತು ಜಾಹೀರಾತುಗಳುಗಾಗಿ
ಸಂಪರ್ಕಿಸಿ :96866 65456
0 Comments