ಆತ್ಮೀಯ ಓದುಗರೇ,
ಕೋವಿಡ್ ಅನ್ ಲಾಕ್ ಹೇಳಿಲ್ಲ; ಹೇಳಿದ್ದು ಸರ್ಕಾರ. ಇನ್ನೂ ಸಂಪೂರ್ಣ ಕೊರೊನಾ ತೊಲಗಿಲ್ಲ. ಹಾಗಾಗಿ ಸ್ವಚ್ಛತೆ ಕಾಪಾಡಿ, ಮಾಸ್ಕ್ ಧರಿಸಿ, ವ್ಯಕ್ತಿಗತ ಅಂತರ ಪಾಲಿಸಿ. ನೀವು ಸುರಕ್ಷಿತವಿರಿ, ಅನ್ಯರೂ ಸುರಕ್ಷಿತರಾಗಿರಲಿ. ಕೊರೊನಾದಿಂದ ರಕ್ಷಣೆ ನಮ್ಮ ಕೈಯ್ಯಲ್ಲೇ ಇದೆ. ಅಲ್ಲವೇ?
******************************
(ಸುದ್ದಿಕಿರಣ ವರದಿ)
ಬೆಂಗಳೂರು, ಜು. 8: ಆಧಾರ್ ತಿದ್ದುಪಡಿ ಅಥವಾ ನೋಂದಣಿಗಾಗಿ ಗ್ರಾಮೀಣ ಜನರು ಇನ್ನು ಮುಂದೆ ಹೋಬಳಿ, ತಾಲೂಕು ಕೇಂದ್ರಕ್ಕೆ ಅಲೆದಾಡಬೇಕಾಗಿಲ್ಲ. ಗ್ರಾಮ ಪಂಚಾಯತ್ ಗಳಲ್ಲೇ ಆಧಾರ್ ತಿದ್ದುಪಡಿ ಮತ್ತು ನೋಂದಣಿ ಕೇಂದ್ರ ಆರಂಭಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮುಂದಡಿ ಇಟ್ಟಿದೆ.
ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯನ್ನು ಹೊರತುಪಡಿಸಿ ಮೊದಲ ಹಂತದಲ್ಲಿ 630 ಗ್ರಾ.ಪಂ.ಗಳಲ್ಲಿ ತಿದ್ದುಪಡಿ ಕೇಂದ್ರ ತೆರೆಯಲು ಸಿದ್ಧತೆ ನಡೆಸಲಾಗಿದೆ.
ಪ್ರತೀ ಜಿ. ಪಂ.ನ 22 ಗ್ರಾ.ಪಂ.ಗಳಲ್ಲಿ ಆಧಾರ್ ತಿದ್ದುಪಡಿ ಕೇಂದ್ರ ಆರಂಭಿಸುತ್ತಿರುವುದರಿಂದ ಜು. 14ರೊಳಗೆ ಒಬ್ಬ ಸಿಬ್ಬಂದಿ ನಿಯೋಜಿಸುವಂತೆ ಜಿ.ಪಂ. ಸಿಇಒಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.
ಗ್ರಾ.ಪಂ.ಗಳಲ್ಲಿ 5 ವರ್ಷದೊಳಗಿನ ಮಕ್ಕಳಿಗೆ ಆಧಾರ್ ನೋಂದಣಿಯನ್ನೂ ಮಾಡಿಸಬಹುದಯು. ನೋಂದಣಿಗೆ ಯಾವುದೇ ಶುಲ್ಕ ಪಡೆಯಬಾರದು. UIDAI ನಿಗದಿಪಡಿಸಿದ 50 ರೂ. ಹಣವನ್ನು ಇಲಾಖೆಯಿಂದ ಸಂಬಂಧಿಸಿದ ಗ್ರಾ.ಪಂ.ಗಳಿಗೆ ವರ್ಗಾಯಿಸಲಾಗುವುದು.