ಬಿಸಿಎ ಮತ್ತು ಉದ್ಯೋಗಾವಕಾಶಗಳು: ಕಾರ್ಯಾಗಾರ
(ಸುದ್ದಿಕಿರಣ ವರದಿ)
ಪುತ್ತೂರು: ಇಲ್ಲಿನ ವಿವೇಕಾನಂದ ಕಾಲೇಜಿನ ಗಣಕ ವಿಜ್ಞಾನ ಮತ್ತು ಐಟಿ ಕ್ಲಬ್ ಸಂಯುಕ್ತಾಶ್ರಯದಲ್ಲಿ, ಹೊಸದಾಗಿ ಸೇರ್ಪಡೆಯಾದ ವಿದ್ಯಾರ್ಥಿಗಳು ಮತ್ತು ಬಿಸಿಎ ವಿದ್ಯಾರ್ಥಿಗಳಿಗೆ ದೊರಕಬಹುದಾದ ಉದ್ಯೋಗ ಮತ್ತು ಅವಕಾಶ ಕುರಿತು ಒಂದು ದಿನದ ಕಾರ್ಯಾಗಾರ ಏರ್ಪಡಿಸಲಾಯಿತು.
ಕಾರ್ಯಕ್ರಮದ ಸಂಪನ್ಮೂಲವ್ಯಕ್ತಿಯಾಗಿ ಶಿರ್ವ ಸೈಂಟ್ ಮೇರಿಸ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗ ಮುಖ್ಯಸ್ಥ ಲೆಫ್ಟಿನೆಂಟ್ ಕೆ. ಪ್ರವೀಣ್ಕುಮಾರ್, ವಿದ್ಯಾರ್ಥಿಗಳು ಉತ್ತಮ ಉದ್ಯೋಗ ಪಡೆಯಬೇಕಾದರೆ ವಿದ್ಯಾರ್ಥಿ ಜೀವನದಲ್ಲಿ ತಮ್ಮ ಆಂತರಿಕ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ. ಅದಕ್ಕೆ ಪೂರ್ವ ತಯಾರಿ ಮಾಡುವುದು ಅಗತ್ಯ ಮತ್ತು ಅನಿವಾರ್ಯ ಎಂದರು.
ಕಂಪ್ಯೂಟರ್ ಸೈನ್ಸ್ ವಿಭಾಗ ಮುಖ್ಯಸ್ಥ ಪ್ರಕಾಶ್ ಕುಮಾರ್ ಕಾರ್ಯಕ್ರಮದಲ್ಲಿ ಇದ್ದರು.
ಸುಮಾರು 90 ಮಂದಿ ವಿದ್ಯಾರ್ಥಿಗಳು ಭಾಗವಹಿದ್ದರು.
ಕಂಪ್ಯೂಟರ್ ಸೈನ್ಸ್ ವಿಭಾಗದ ಪ್ರಾಧ್ಯಾಪಕ ವಿಕ್ರಾಂತ್ ಕೆ. ನಿರೂಪಿಸಿದರು