Monday, July 4, 2022
Home ಮನರಂಜನೆ ಸ್ಪರ್ಧೆಯಲ್ಲಿ ಬಹುಮಾನ

ಸ್ಪರ್ಧೆಯಲ್ಲಿ ಬಹುಮಾನ

ಸ್ಪರ್ಧೆಯಲ್ಲಿ ಬಹುಮಾನ

(ಸುದ್ದಿಕಿರಣ ವರದಿ)
ಉಡುಪಿ: ಹಿರಿಯಡ್ಕ ಸಂಸ್ಕೃತಿ ಸಿರಿ ಟ್ರಸ್ಟ್ ಈಚೆಗೆ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಕಾಲೇಜು ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಶಿವರಾಮ ಕಾರಂತರ ಮೂಕಜ್ಜಿಯ ಕನಸುಗಳು ಕಾದಂಬರಿ ಆಧರಿತ ಸಿನಿಮಾ ವಿಮರ್ಶೆ ಸ್ಪರ್ಧೆಯಲ್ಲಿ ಅಜ್ಜರಕಾಡು ಜಿ. ಶಂಕರ್ ಮಹಿಳಾ ಸರ್ಕಾರಿ ಕಾಲೇಜಿನ ಬಿಎಸ್ಸಿ ವಿದ್ಯಾರ್ಥಿನಿ ಅನ್ನಪೂರ್ಣ ಪ್ರಥಮ ಬಹುಮಾನ (ರೂ. 2,000) ಪಡೆದಿದ್ದಾರೆ.

ಹೊನ್ನಾವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿಕಾಮ್ ವಿದ್ಯಾರ್ಥಿ ಸಚಿನ್ ಶೇಟ್ ಮತ್ತು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನ ಬಿಎಸ್ಸಿ ವಿದ್ಯಾರ್ಥಿನಿ ಅಶ್ವಿನಿ ಶೆಟ್ಟಿ ದ್ವಿತೀಯ ಬಹುಮಾನ (ರೂ, 1,500) ಪಡೆದಿದ್ದಾರೆ.

ಐಶ್ವರ್ಯ (ಸರ್ಕಾರಿ ಕಾಲೇಜು, ಹೊನ್ನಾವರ), ಮಲ್ಲಿಕಾ (ಸರ್ಕಾರಿ ಕಾಲೇಜು, ಹೆಬ್ರಿ), ಪ್ರಿಯಾ (ಸರ್ಕಾರಿ ಪದವಿ ಪೂರ್ವ ಕಾಲೇಜು, ಬಜಗೋಳಿ) ತೃತೀಯ ಬಹುಮಾನ ಪಡೆದಿದ್ದಾರೆ ಎಂದು ಸಂಸ್ಕೃತಿ ಸಿರಿ ಟ್ರಸ್ಟ್ ಸಂಚಾಲಕ ಪ್ರೊ. ಮುರಳೀಧರ ಉಪಾಧ್ಯ ಹಿರಿಯಡಕ ತಿಳಿಸಿದ್ದಾರೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!