Thursday, December 2, 2021
Home ಮನರಂಜನೆ ಪ್ರವಾಸ ಕೊಡಚಾದ್ರಿ ರೋಪ್ ವೇ: ಪಿಪಿಪಿ ಮಾದರಿಯಲ್ಲಿ ಅನುಷ್ಠಾನ

ಕೊಡಚಾದ್ರಿ ರೋಪ್ ವೇ: ಪಿಪಿಪಿ ಮಾದರಿಯಲ್ಲಿ ಅನುಷ್ಠಾನ

ಕೊಡಚಾದ್ರಿ ರೋಪ್ ವೇ: ಪಿಪಿಪಿ ಮಾದರಿಯಲ್ಲಿ ಅನುಷ್ಠಾನ

ಶಿವಮೊಗ್ಗ, ನ. 9 (ಸುದ್ದಿಕಿರಣ ವರದಿ): ಕೊಡಚಾದ್ರಿ- ಕೊಲ್ಲೂರು ರೋಪ್ ವೇ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ಸರಕಾರಿ- ಖಾಸಗಿ ಸಹಭಾಗಿತ್ವದಲ್ಲಿ (ಪಿ.ಪಿ.ಪಿ. ಮಾದರಿಯಡಿ) ಅನುಷ್ಠಾನಗೊಳಿಸಲು ಶೀಘ್ರ ಟೆಂಡರ್ ಕರೆಯಲು ಎಲ್ಲಾ ಅಗತ್ಯ ಕ್ರಮ ಕೈಗೊಳ್ಳಲು ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು.

ಮಂಗಳವಾರ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳ ಅಭಿವೃದ್ಧಿ ಕುರಿತಂತೆ ಸಭೆ ನಡೆಸಲಾಯಿತು.

ಶಿವಮೊಗ್ಗ ಸಂಸದ ಬಿ. ವೈ. ರಾಘವೇಂದ್ರ ಕಾಮಗಾರಿಗಳ ಶೀಘ್ರ ಅನುಷ್ಠಾನಕ್ಕೆ ಅಗತ್ಯವಿರುವ ಅಂಶಗಳ ಬಗ್ಗೆ ವಿವರವಾಗಿ ಸಭೆಗೆ ಪ್ರಸ್ತಾಪಿಸಿದರು.

ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸೋಮೇಶ್ವರ ಬೀಚ್ ಮತ್ತು ಮರವಂತೆ ಬೀಚ್ ನಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಬಂಧಿಸಿದಂತೆ ಡಿ.ಪಿ.ಆರ್. ಅಂತಿಮಗೊಳಿಸಿ ಕಾಮಗಾರಿ ಕೈಗೆತ್ತಿಕೊಳ್ಳಲು ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಯಿತು.

ಪ್ರವಾಸೋದ್ಯಮ ಕಾಮಗಾರಿ ಹಾಗೂ ಇತರ ಅಭಿವೃದ್ಧಿ ಕಾಮಗಾರಿಗಳ ಶೀಘ್ರ ಅನುಷ್ಠಾನಕ್ಕೆ ಅನುಕೂಲವಾಗುವಂತೆ ಸಿ.ಆರ್.ಝಡ್ ಅಧಿಸೂಚನೆಯನ್ನು ಈ ತಿಂಗಳ ಅಂತ್ಯದೊಳಗೆ ಅಂತಿಮಗೊಳಿಸಲು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಯಿತು.

ಸೌಕೂರು ಏತ ನೀರಾವರಿ ಯೋಜನೆ ಶೀಘ್ರ ಪೂರ್ಣಗೊಳಿಸಲು ಅಗತ್ಯವಾದ ಅನುದಾನವನ್ನು ತ್ವರಿತವಾಗಿ ಬಿಡುಗಡೆ ಮಾಡಲು ನೀರಾವರಿ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚಿಸಿದರು.

ಸಭೆಯಲ್ಲಿ ಮುಖ್ಯಮಂತ್ರಿ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಮುಖ್ಯಮಂತ್ರಿ ಕಾರ್ಯದರ್ಶಿ ವಿ. ಪೊನ್ನುರಾಜ್, ಸಮಾಜ ಕಲ್ಯಾಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಆರ್ಥಿಕ ಇಲಾಖೆ ಕಾರ್ಯದರ್ಶಿಗಳು, ಅರಣ್ಯ ಇಲಾಖೆ ಕಾರ್ಯದರ್ಶಿಗಳು, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ರಾಜ್ಯ ಮಟ್ಟದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!