Friday, January 28, 2022
Home ಮನರಂಜನೆ ಮಾತಾಡ್ ಮಾತಾಡ್ ಕನ್ನಡ ಕಾರ್ಯಕ್ರಮಕ್ಕೆ ಚಾಲನೆ

ಮಾತಾಡ್ ಮಾತಾಡ್ ಕನ್ನಡ ಕಾರ್ಯಕ್ರಮಕ್ಕೆ ಚಾಲನೆ

ಮಾತಾಡ್ ಮಾತಾಡ್ ಕನ್ನಡ ಕಾರ್ಯಕ್ರಮಕ್ಕೆ ಚಾಲನೆ
(ಸುದ್ದಿಕಿರಣ ವರದಿ)

ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಕನ್ನಡಕ್ಕಾಗಿ ನಾವು ಅಭಿಯಾನ ಅಂಗವಾಗಿ ಆಯೋಜಿಸಲಾದ ಮಾತಾಡ್ ಮಾತಾಡ್ ಕನ್ನಡ ಕಾರ್ಯಕ್ರಮವನ್ನು ಇಂದ್ರಾಳಿ ಯಕ್ಷಗಾನ ಕೇಂದ್ರದಲ್ಲಿ ಕರ್ನಾಟಕ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ತಲ್ಲೂರು ಡಾ| ಶಿವರಾಮ ಶೆಟ್ಟಿ ಉದ್ಘಾಟಿಸಿದರು.

ಯಕ್ಷಗಾನ ಕೇಂದ್ರದ ಆಡಳಿತಾಧಿಕಾರಿ ಜಗದೀಶ್ ಶೆಟ್ಟಿ, ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಗೌರವಾಧ್ಯಕ್ಷ ವಿಶ್ವನಾಥ ಶೆಣೈ, ಯಕ್ಷಗಾನ ಗುರು ಸಂಜೀವ ಸುವರ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಇದ್ದರು.

ಈ ಸಂದರ್ಭದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಕಲಾವಿದರಿಂದ ಕನ್ನಡ ಗೀತ ಗಾಯನ, ಆಶ್ಲೇಷ ಭಟ್ ಅವರಿಂದ ಎಚ್ಚಮ್ಮ ನಾಯಕ ಹಾಗೂ ಶಿಲ್ಪ ಜೋಶಿ ಅವರಿಂದ ಏಕವ್ಯಕ್ತಿ ರಂಗ ಪ್ರಯೋಗ ನನ್ನೊಳಗಿನ ಅವಳು ಕಾರ್ಯಕ್ರಮ ಪ್ರದರ್ಶನಗೊಂಡಿತು.

 

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!